ಬೆಂಗಳೂರು: ಇಲ್ಲಿನ ಎಂ ಚಿನ್ನಸ್ವಾಮಿ ಕ್ರಿಕೆಟ್ ಕ್ರೀಡಾಂಗಣದಲ್ಲಿ ಇದೀಗ ನಡೆಯುತ್ತಿರುವ 2024ರ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಟೂರ್ನಿಯ 10ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಕೋಲ್ಕತಾ ನೈಟ್ ರೈಡರ್ಸ್ ತಂಡಗಳು ಸೆಣಸುತ್ತಿವೆ. ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟ್ ಮಾಡುವಂತಾಗಿದ್ದ ಆರ್ಸಿಬಿ ತನ್ನ ಪಾಲಿನ 20 ಓವರ್ಗಳಿಗೆ 6 ವಿಕೆಟ್ಗಳ ನಷ್ಟಕ್ಕೆ 182 ರನ್ ಗಳಿಸಿತು. ಆ ಮೂಲಕ ಕೆಕೆಆರ್ಗೆ 183 ರನ್ಗಳ ಗುರಿಯನ್ನು ನೀಡಿದೆ. ಅತ್ಯುತ್ತಮ ಬ್ಯಾಟ್ ಮಾಡಿದ ವಿರಾಟ್ ಕೊಹ್ಲಿ 59 ಎಸೆತಗಳಲ್ಲಿ ಅಜೇಯ 83 ರನ್ ಗಳಿಸಿದರು. ಕ್ಯಾಮೆರಾನ್ ಗ್ರೀನ್ 33, ಗ್ಲೆನ್ ಮ್ಯಾಕ್ಸ್ವೆಲ್ 28 ಹಾಗೂ ದಿನೇಶ್ ಕಾರ್ತಿಕ್ ಕೊನೆಯಲ್ಲಿ ಕೇವಲ 8 ಎಸೆತಗಳಲ್ಲಿ 20 ರನ್ಗಳನ್ನು ಸಿಡಿಸಿದರು.

ಆರ್ಸಿಬಿ ಇಲ್ಲಿಯವರೆಗೂ ಆಡಿರುವ ಎರಡು ಪಂದ್ಯಗಳಲ್ಲಿ ಒಂದರಲ್ಲಿ ಗೆಲುವು ಹಾಗೂ ಮತ್ತೊಂದರಲ್ಲಿ ಸೋಲು ಅನುಭವಿಸಿದೆ. ಚೆನ್ನೈ ಸೂಪರ್ ಕಿಂಗ್ಸ್ ವಿರುದ್ದ ಮೊದಲನೇ ಪಂದ್ಯದಲ್ಲಿ ಸೋತಿದ್ದ ಆರ್ಸಿಬಿ, ನಂತರ ತನ್ನ ಎರಡನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ದ ಗೆಲುವು ಪಡೆದಿತ್ತು. ಇದೀಗ ಅದೇ ಲಯವನ್ನು ಕೆಕೆಆರ್ ವಿರುದ್ದ ಮುಂದುವರಿಸಲು ಎದುರು ನೋಡುತ್ತಿದೆ.
ಮತ್ತೊಂದೆಡೆ ಶ್ರೇಯಸ್ ಅಯ್ಯರ್ ನಾಯಕತ್ವದ ಕೋಲ್ಕತಾ ನೈಟ್ ರೈಡರ್ಸ್ ತಂಡ ಆಡಿರುವ ಒಂದು ಪಂದ್ಯದಲ್ಲಿ ಗೆದ್ದು ಟೂರ್ನಿಯಲ್ಲಿ ಶುಭಾರಂಭ ಕಂಡಿದೆ. ಇದೀಘ ಎರಡನೇ ಗೆಲುವಿನ ನಿರೀಕ್ಷೆಯೊಂದಿಗೆ ಕಣಕ್ಕೆ ಇಳಿಯುತ್ತಿದೆ. ಅಂದ ಹಾಗೆ ಆರ್ಸಿಬಿ ಪ್ಲೇಯಿಂಗ್ XIನಲ್ಲಿ ಯಾವುದೇ ಬದಲಾವಣೆ ಇಲ್ಲ. ಕೆಕೆಆರ್ ಆಡುವ ಬಳಗದಲ್ಲಿ ಒಂದು ಬದಲಾವಣೆ ತರಲಾಗಿದ್ದು ಅನುಕುಲ್ ರಾಯ್ ಇಂದು ಆಡುತ್ತಿದ್ದಾರೆ.
ಇತ್ತಂಡಗಳ ಪ್ಲೇಯಿಂಗ್ XI
ರಾಯಲ್ ಚಾಲೆಂಜರ್ಸ್ ಬೆಂಗಳೂರು: ವಿರಾಟ್ ಕೊಹ್ಲಿ, ಫಾಫ್ ಡು ಪ್ಲೆಸಿಸ್ (ನಾಯಕ), ಕ್ಯಾಮೆರಾನ್ ಗ್ರೀನ್, ರಜತ್ ಪಾಟಿದಾರ್, ಗ್ಲೆನ್ ಮ್ಯಾಕ್ಸ್ವೆಲ್, ಅನುಜ್ ರಾವತ್ (ವಿ.ಕೀ), ದಿನೇಶ್ ಕಾರ್ತಿಕ್, ಆಲ್ಜಾರಿ ಜೋಸೆಫ್, ಮಯಾಂಕ್ ದಾಗರ್, ಮೊಹಮ್ಮದ್ ಸಿರಾಜ್, ಯಶ್ ದಯಾಳ್
ಕೋಲ್ಕತ್ತಾ ನೈಟ್ ರೈಡರ್ಸ್: ಫಿಲಿಪ್ ಸಾಲ್ಟ್(ವಿ.ಕೀ), ವೆಂಕಟೇಶ್ ಅಯ್ಯರ್, ಶ್ರೇಯಸ್ ಅಯ್ಯರ್(ನಾಯಕ), ರಮಣದೀಪ್ ಸಿಂಗ್, ರಿಂಕು ಸಿಂಗ್, ಆಂಡ್ರೆ ರಸೆಲ್, ಸುನಿಲ್ ನರೇನ್, ಮಿಚೆಲ್ ಸ್ಟಾರ್ಕ್, ಅನುಕುಲ್ ರಾಯ್, ಹರ್ಷಿತ್ ರಾಣಾ, ವರುಣ್ ಚಕ್ರವರ್ತಿ
ನಮ್ಮ ಸಮಗ್ರ ಸುದ್ದಿಗಳಿಗಾಗಿ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
WhatsApp Group: https://chat.whatsapp.com/KnDIfiBURQ9G5sLEJLqshk
Facebook page: https://www.facebook.com/samagrasudii
Sharechat: https://sharehat.com/profile/edu514826335?d=n
Twitter: https://twitter.com/SuddiSamagra
Threads: https://www.threads.net/@samagrasuddi.co.in
Instagram: https://www.instagram.com/samagrasuddi.co.in/
Telegram: https://t.me/+E1ubNzdguQ5jN2Y1