Cricket: IPL 2024, LSG vs RR: ಟಾರ್ಗೆಟ್ ಬೆನ್ನಟ್ಟಿದ ರಾಜಸ್ಥಾನ್ ತಂಡವು 19 ಓವರ್ಗೆ 3 ವಿಕೆಟ್ ನಷ್ಟಕ್ಕೆ 199 ರನ್ ಗಳಿಸುವ ಮೂಲಕ ಬರೋಬ್ಬರಿ 7 ವಿಕೆಟ್ ಗಳ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ ರಾಜಸ್ಥಾನ್ ರಾಯಲ್ಸ್ ಬಹುತೇಕ ಪ್ಲೇಆಫ್ ಹಂತಕ್ಕೆ ತಲುಪಿದಂತಾಗಿದೆ.

ಐಪಿಎಲ್ 2024ರ 44ನೇ ಪಂದ್ಯ ರಾಜಸ್ಥಾನ ರಾಯಲ್ಸ್ ಮತ್ತು ಲಕ್ನೋ ಸೂಪರ್ ಜೈಂಟ್ಸ್ (LSG vs RR) ನಡುವೆ ನಡೆಯಿತು. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಲಕ್ನೋ ತಂಡವು ನಿಗದಿತ 20 ಓವರ್ಗೆ 196 ರನ್ ಗಳಿಸಿತು. ಏಕ್ನಾ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ರಾಜಸ್ಥಾನ್ ರಾಯಲ್ಸ್ ತಂಡದ ನಾಯಕ ಸಂಜು ಸ್ಯಾಮ್ಸನ್ ಮೊದಲು ಬೌಲಿಂಗ್ ಆಯ್ಕೆ ಮಾಡಿದರು. ಹೀಗಾಗಿ ಮೊದಲು ಬ್ಯಾಟ್ ಮಾಡಿದ ಲಕ್ನೋ ಪರ ನಾಯಕ ರಾಹುಲ್ ಭರ್ಜರಿ ಬ್ಯಾಟಿಂಗ್ ಮಾಡಿದರು. ಲಕ್ನೋ ನೀಡಿದ ಟಾರ್ಗೆಟ್ ಬೆನ್ನಟ್ಟಿದ ರಾಜಸ್ಥಾನ್ ತಂಡವು 19 ಓವರ್ಗೆ 3 ವಿಕೆಟ್ ನಷ್ಟಕ್ಕೆ 199 ರನ್ ಗಳಿಸುವ ಮೂಲಕ ಬರೋಬ್ಬರಿ 7 ವಿಕೆಟ್ ಗಳ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ ರಾಜಸ್ಥಾನ್ ರಾಯಲ್ಸ್ ಬಹುತೇಕ ಪ್ಲೇಆಫ್ ಹಂತಕ್ಕೆ ತಲುಪಿದಂತಾಗಿದೆ.
ರಾಜಸ್ಥಾನ್ ರಾಯಲ್ಸ್ ಅಬ್ಬರದ ಗೆಲುವು:
ರಾಜಸ್ಥಾನ್ ರಾಯಲ್ಸ್ ಬಿಗ್ ಟಾರ್ಗೆಟ್ ಬೆನ್ನಟ್ಟಿದ್ದನ್ನು ಯಶಸ್ವಿಯಾಗಿ ಚೇಸ್ ಂಆಡಿತು. ಈ ವೇಳೆ ನಾಯಕ ಸಂಜು ಸ್ಯಾಮ್ಸನ್ ಅಬ್ಬರದ ಬ್ಯಾಟಿಂಗ್ ಮಾಡಿದರು. ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಸಂಜು ಸ್ಯಾಮ್ಸನ್ 33 ಎಸೆತದಲ್ಲಿ 4 ಸಿಕ್ಸ್ ಮತ್ತು 7 ಫೋರ್ ಮೂಲಕ ಅಜೇಯ 71 ರನ್ ಗಳಿಸಿದರು. ಇವರಿಗೆ ದ್ರುವ್ ಜುರೇಲ್ ಉತ್ತಮ ಸಾಥ್ ನೀಡಿದರು. ದ್ರುವ್ ಜುರೇಲ್ 34 ಎಸೆತದಲ್ಲಿ 5 ಫೋರ್ ಮತ್ತು 2 ಸಿಕ್ಸ್ ಮೂಲಕ ಅಜೇಯ 52 ರನ್ ಸಿಡಿಸಿದರು. ಉಳಿದಂತೆ ಯಶಸ್ವಿ ಜೈಸ್ವಾಲ್ 24 ರನ್, ಜೋಶ್ ಬಟ್ಲರ್ 34 ರನ್ ಮತ್ತು ರಿಯಾನ್ ಪರಾಗ್ 14 ರನ್ ಗಳಿಸಿ ಮಿಂಚಿದರು.
ಮತ್ತೆ ಅಬ್ಬರಿಸಿದ ನಾಯಕ ಕೆಎಲ್ ರಾಹುಲ್:
ಲಕ್ನೋದ ಏಕನಾ ಸ್ಟೇಡಿಯಂನಲ್ಲಿ ರಾಜಸ್ಥಾನ ರಾಯಲ್ಸ್ ಮತ್ತು ಲಕ್ನೋ ಸೂಪರ್ ಜೈಂಟ್ಸ್ ನಡುವೆ ಪಂದ್ಯ ನಡೆಯುತ್ತಿದೆ. ಈ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ಟಾಸ್ ಗೆದ್ದು ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದರೆ, ಲಕ್ನೋ ಮೊದಲು ಬ್ಯಾಟಿಂಗ್ ಮಾಡುವ ಸವಾಲನ್ನು ಎದುರಿಸಿತು. ಲಕ್ನೋ ಸೂಪರ್ ಜೈಂಟ್ಸ್ ಪರ ಬ್ಯಾಟಿಂಗ್ ಮಾಡಿದ ನಾಯಕ ಕೆಎಲ್ ರಾಹುಲ್ ಮತ್ತು ದೀಪಕ್ ಹೂಡಾ ಅತಿ ಹೆಚ್ಚು ರನ್ ಗಳಿಸಿದರು. ಕೆಎಲ್ ರಾಹುಲ್ 48 ಎಸೆತಗಳಲ್ಲಿ 76 ರನ್ ಮತ್ತು ದೀಪಕ್ ಹೂಡಾ 31 ಎಸೆತಗಳಲ್ಲಿ 50 ರನ್ ಗಳಿಸಿದರು.
ಲಕ್ನೋ ಸೂಪರ್ ಜೈಂಟ್ಸ್ ಪರ ಕೆಎಲ್ ರಾಹುಲ್ ಮತ್ತು ದೀಪಕ್ ಹೂಡಾ ಹೊರತಾಗಿ ನಿಕೋಲಸ್ ಪುರನ್ 11 ರನ್, ಆಯುಷ್ ಬಡೋನಿ 18 ರನ್ ಮತ್ತು ಕೃನಾಲ್ ಪಾಂಡ್ಯ 15 ರನ್ ಗಳಿಸಿದರು. ರಾಜಸ್ಥಾನ ಬೌಲರ್‌ಗಳು ಲಕ್ನೋದ 5 ವಿಕೆಟ್‌ಗಳನ್ನು ಕಬಳಿಸುವಲ್ಲಿ ಯಶಸ್ವಿಯಾದರು. ರಾಜಸ್ಥಾನ ಪರ ಸಂದೀಪ್ ಶರ್ಮಾ 2 ವಿಕೆಟ್ ಪಡೆದರೆ, ಅವೇಶ್ ಖಾನ್, ಟ್ರೆಂಟ್ ಬೌಲ್ಟ್ ಮತ್ತು ಅಶ್ವಿನ್ ತಲಾ ಒಂದು ವಿಕೆಟ್ ಪಡೆದರು. ಲಕ್ನೋ ಸೂಪರ್ ಜೈಂಟ್ಸ್ 20 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 196 ರನ್ ಗಳಿಸಿತು.
ನಮ್ಮ ಸಮಗ್ರ ಸುದ್ದಿಗಳಿಗಾಗಿ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
WhatsApp Group: https://chat.whatsapp.com/KnDIfiBURQ9G5sLEJLqshk
Facebook page: https://www.facebook.com/samagrasudii
Sharechat: https://sharehat.com/profile/edu514826335?d=n
Twitter: https://twitter.com/SuddiSamagra
Threads: https://www.threads.net/@samagrasuddi.co.in
Instagram: https://www.instagram.com/samagrasuddi.co.in/
Telegram: https://t.me/+E1ubNzdguQ5jN2Y1