IPL 2025: ಬುಮ್ರಾ ಮಾರಕ ಬೌಲಿಂಗ್ ದಾಳಿಗೆ ನಲುಗಿದ ಲಖನೌ! ಸದ್ದಿಲ್ಲದೆ ಅಂಕ ಪಟ್ಟಿಯಲ್ಲಿ ಟಾಪ್-2ಗೆ ಏರಿದ ಮುಂಬೈ

ಮುಂಬೈ ಇಂಡಿಯನ್ಸ್ ಹಾಗೂ ಲಖನೌ ಸೂಪರ್‌ಜೈಂಟ್ಸ್ ತಂಡಗಳು ಮುಖಾಮುಖಿಯಾಗಿದ್ದು, ಈ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡ ಲಖನೌ ವಿರುದ್ಧ ಬರೋಬ್ಬರಿ 54 ರನ್‌ಗಳ ಬೃಹತ್ ಅಂತರದಲ್ಲಿ ಗೆದ್ದು ಬೀಗಿದೆ.

ಐಪಿಎಲ್ (IPL) 2025ನೇ ಸಾಲಿನ 45ನೇ ಪಂದ್ಯದಲ್ಲಿ ಇಂದು (ಏಪ್ರಿಲ್ 27) ಮುಂಬೈ ಇಂಡಿಯನ್ಸ್ (Mumbai Indians) ಹಾಗೂ ಲಖನೌ ಸೂಪರ್‌ಜೈಂಟ್ಸ್ (LSG) ತಂಡಗಳು ಮುಖಾಮುಖಿಯಾಗಿದ್ದು, ಈ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡ ಲಖನೌ (Luckow) ವಿರುದ್ಧ ಬರೋಬ್ಬರಿ 54 ರನ್‌ಗಳ ಬೃಹತ್ ಅಂತರದಲ್ಲಿ ಗೆದ್ದು ಬೀಗಿದೆ. ಮಾತ್ರವಲ್ಲ ಟೂರ್ನಿ ಆರಂಭದಲ್ಲಿ ಕಳಪೆ ಪ್ರದರ್ಶನ ತೋರಿದ್ದ ಮುಂಬೈ ಸದ್ಯ ಸದ್ದಿಲ್ಲದೆ ಅಂಕಪಟ್ಟಿಯಲ್ಲಿ 2ನೇ ಸ್ಥಾನಕ್ಕೇರಿದೆ. ಪಂದ್ಯದಲ್ಲಿ ಬುಮ್ರಾ ಬಿಗಿ ಬೌಲಿಂಗ್ ದಾಳಿ ನಡೆಸಿದ್ದು 4 ವಿಕೆಟ್ ಪಡೆದು ಮಿಂಚಿದರು.

ಮತ್ತೆ ಮಿಂಚಿದ ಸೂರ್ಯಕುಮಾರ್ ಯಾದವ್

ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಮುಂಬೈ ಇಂಡಿಯನ್ಸ್‌ಗೆ ಹೇಳಿಕೊಳ್ಳುವಂತಹ ಆರಂಭ ಸಿಗಲಿಲ್ಲ. ಮಾಜಿ ನಾಯಕ ರೋಹಿತ್ ಶರ್ಮಾ 12 ರನ್ ಗಳಿಸಿ ಬೇಗನೆ ವಿಕೆಟ್ ಒಪ್ಪಿಸಿದರು. ಆದ್ರೆ, ರಿಯಾನ್ ರಿಕಲ್ಟನ್ 58 ಹಾಗೂ ವಿಲ್ ಜಾಕ್ಸ್ 29 ರನ್ ಗಳಿಸುವ ಮೂಲಕ ಉತ್ತಮ ಅಡಿಪಾಯ ಹಾಕಿದರು. ನಂತರ ಬಂದ ಸೂರ್ಯಕುಮಾರ್ ಯಾದವ್ ಕೂಡ 54 ರನ್ ಸಿಡಿಸಿ ಮಿಂಚಿದರು. ಮಾತ್ರವಲ್ಲ ಟೂರ್ನಿಯಲ್ಲಿ ಅತೀ ಹೆಚ್ಚು ರನ್ ಗಳಿಸಿದ ಆಟಗಾರ ಎಂಬ ಖ್ಯಾತಿಗೆ ಪಾತ್ರರಾದರು. ಅಂತಿಮವಾಗಿ ನಮನ್ ಧೀರ್ 25 ರನ್ ಸಿಡಿಸುವ ಮೂಲಕ ತಂಡದ ಮೊತ್ತವನ್ನು 215 ಆಗುವಂಯತೆ ನೋಡಿಕೊಂಡರು.

ಲಖನೌ ಪರ ಮಿಂಚಿನ ಬೌಲಿಂಗ್ ನಡೆಸಿದ ಮಯಾಂಕ್ ಯಾದವ್ 2, ಆವೇಶ್ ಖಾನ್ 2, ಪ್ರಿನ್ಸ್ ಯಾದವ್, ದಿಗ್ವೇಶ್ ರಾತಿ, ಹಾಗೂ ರವಿ ಬಿಷ್ನೋಯಿ ತಲಾ ಒಂದು ವಿಕೆಟ್ ಪಡೆದು ಮಿಂಚಿದರು.

216 ರನ್‌ಗಳ ಬೃಹತ್ ಟಾರ್ಗೆಟ್ ಬೆನ್ನಟ್ಟಿದ ಲಖನೌ ತಂಡಕ್ಕೆ ಉತ್ತಮ ಆರಂಭ ಸಿಗಲಿಲ್ಲ. ಮಿಚೆಲ್ ಮಾರ್ಷ್ 34, ಪೂರನ್ 27, ಆಯುಷ್ ಬದೋನಿ 35 ಹಾಗೂ ಡೇವಿಡ್ ಮಿಲ್ಲರ್ 24 ರನ್ ಗಳಿಸಿದರು. ಆದ್ರೆ, ಈ ಆಟ ತಂಡದ ಗೆಲುವಿಗೆ ಸಾಕಾಗಲಿಲ್ಲ. ಅಂತಿಮವಾಗಿ ಲಖನೌ ಸೂಪರ್‌ಜೈಂಟ್ಸ್ 161 ರನ್‌ಗಳಿಗೆ ಆಲೌಟ್ ಆಯಿತು.

ಮುಂಬೈ ಇಂಡಿಯನ್ಸ್ ಪರ ಮಿಂಚಿನ ಬೌಲಿಂಗ್ ದಾಳಿ ನಡೆಸಿದ, ಜಸ್ಪ್ರಿತ್ ಬುಮ್ರಾ 4, ಟ್ರೆಂಟ್ ಬೌಲ್ಟ್ 3, ವಿಲ್ ಜಾಕ್ಸ್ 2 ಹಾಗೂ ಬಾಶ್ಚ್ 1 ವಿಕೆಟ್ ಪಡೆಯುವ ಮೂಲಕ ಮುಂಬೈ ಇಂಡಿಯನ್ಸ್ ಗೆಲುವಿಗೆ ಕಾರಣರಾದರು. ಇಂದಿನ ಪಂದ್ಯ ಗೆಲ್ಲುವ ಮೂಲಕ ಮುಂಬೈ ಇಂಡಿಯನ್ಸ್ ತಂಡ ಅಂಕಪಟ್ಟಿಯಲ್ಲಿ 2ನೇ ಸ್ಥಾನಕ್ಕೆ ಏರಿಕೆ ಕಂಡಿತು.

ನಮ್ಮ ಸಮಗ್ರ ಸುದ್ದಿಗಳಿಗಾಗಿ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 

WhatsApp Group:https://chat.whatsapp.com/KnDIfiBURQ9G5sLEJLqshk

Facebook page: https://www.facebook.com/samagrasudii

Sharechat: https://sharehat.com/profile/edu514826335?d=n

Twitter: https://twitter.com/SuddiSamagra

Threads: https://www.threads.net/@samagrasuddi.co.in

Instagram: https://www.instagram.com/samagrasuddi.co.in/

Telegram: https://t.me/+E1ubNzdguQ5jN2Y1

Source: News 18



















Leave a Reply

Your email address will not be published. Required fields are marked *