Dharmashala IPL Match Called off: ಭಾರತ ಮತ್ತು ಪಾಕಿಸ್ತಾನದ ನಡುವಿನ ಮಿಲಿಟರಿ ಉದ್ವಿಗ್ನತೆಯಿಂದಾಗಿ ಧರ್ಮಶಾಲೆಯಲ್ಲಿ ನಡೆಯುತ್ತಿದ್ದ ಐಪಿಎಲ್ ಪಂದ್ಯವಾದ ಪಂಜಾಬ್ ಕಿಂಗ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ನಡುವಿನ ಪಂದ್ಯವನ್ನು ರದ್ದುಗೊಳಿಸಲಾಗಿದೆ. ಪಂಜಾಬ್ ಕಿಂಗ್ಸ್ ಬ್ಯಾಟಿಂಗ್ ಮಾಡುತ್ತಿದ್ದಾಗ ಮೈದಾನದ ದೀಪಗಳನ್ನು ಆಫ್ ಮಾಡಲಾಗಿದ್ದು, ಆಟಗಾರರು ಮತ್ತು ಪ್ರೇಕ್ಷಕರು ಮೈದಾನವನ್ನು ತೊರೆಯುತ್ತಿದ್ದಾರೆ.

ಭಾರತ ಮತ್ತು ಪಾಕಿಸ್ತಾನ ನಡುವೆ ನಡೆಯುತ್ತಿರುವ ಮಿಲಿಟರಿ ಕಾರ್ಯಾಚರಣೆಯ ಮಧ್ಯೆ ಧರ್ಮಶಾಲಾದಲ್ಲಿ (Dharmashala) ನಡೆಯುತ್ತಿದ್ದ ಪಂಜಾಬ್ ಕಿಂಗ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ (PBKS vs DC) ನಡುವಿನ ಪಂದ್ಯವನ್ನು ರದ್ದುಗೊಳಿಸಲಾಗಿದೆ. ಪಂಜಾಬ್ ಕಿಂಗ್ಸ್ ತಂಡ ಬ್ಯಾಟಿಂಗ್ ಮಾಡುತ್ತಿದ್ದ ವೇಳೆ 9 ಗಂಟೆ 29 ನಿಮಿಷಕ್ಕೆ ಮೈದಾನದ ದೀಪಗಳನ್ನು ಆಫ್ ಮಾಡಲಾಯಿತು. ಹೀಗಾಗಿ ಮೈದಾನದಲ್ಲಿದ್ದ ಆಟಗಾರರು ಪೆವಿಲಿಯನ್ ಸೇರಿಕೊಂಡಿದ್ದರೆ, ಇತ್ತ ಕ್ರೀಡಾಂಗಣದಲ್ಲಿ ಕುಳಿತು ಪಂದ್ಯ ವೀಕ್ಷಿಸುತ್ತಿದ್ದ ಪ್ರೇಕ್ಷಕರು ಮೈದಾನದಿಂದ ನಿರ್ಗಮಿಸುತ್ತಿದ್ದಾರೆ. ಪಂದ್ಯ ರದ್ದಾದ ವಿಷಯವನ್ನು ಐಪಿಎಲ್ (IPL) ಅಧ್ಯಕ್ಷರಾದ ಅರುಣ್ ಧುಮಾಲ್ ಅವರೇ ಖಚಿತಪಡಿಸಿದ್ದಾರೆ.
ಪಾಕಿಸ್ತಾನದಿಂದ ಡ್ರೋನ್ ದಾಳಿ
ಭಾರತ ಇಂದು ಪಾಕಿಸ್ತಾನದ ಹಲವು ಕಡೆ ಡ್ರೋನ್ ದಾಳಿ ನಡೆಸಿತ್ತು. ಇದೀಗ ಪಾಕಿಸ್ತಾನ ಕೂಡ ಭಾರತದ ಹಲವು ನಗರಗಳ ಮೇಲೆ ಡ್ರೋನ್ ದಾಳಿಗಳನ್ನು ನಡೆಸಿದೆ. ಉಧಂಪುರ, ಜಮ್ಮು, ಅಖ್ನೂರ್, ಪಠಾಣ್‌ಕೋಟ್ ಮತ್ತು ಕಥುವಾಗಳಲ್ಲಿ ಪಾಕಿಸ್ತಾನ ಡ್ರೋನ್ ಮತ್ತು ಕ್ಷಿಪಣಿ ದಾಳಿಗಳನ್ನು ನಡೆಸಿದೆಯಾದರೂ, ಭಾರತ ಅವುಗಳನ್ನು ಹೊಡೆದುರುಳಿಸುವಲ್ಲಿ ಯಶಸ್ವಿಯಾಗಿದೆ. ಇದಲ್ಲದೆ, ರಾಜಸ್ಥಾನ ಮತ್ತು ಪಂಜಾಬ್‌ನ ಪ್ರಮುಖ ನಗರಗಳ ಮೇಲೆಯೂ ಕ್ಷಿಪಣಿಗಳು ಮತ್ತು ಡ್ರೋನ್‌ಗಳನ್ನು ಹಾರಿಸಲಾಗಿದೆ ಎಂದು ವರದಿಯಾಗಿದೆ.
ತಲಾ ಒಂದೊಂದು ಅಂಕ
ಪಂಜಾಬ್ ಮತ್ತು ಡೆಲ್ಲಿ ನಡುವಿನ ಪಂದ್ಯ ರದ್ದಾದ ಕಾರಣ ಈಗ ಎರಡೂ ತಂಡಗಳಿಗೆ ತಲಾ ಒಂದು ಅಂಕವನ್ನು ನೀಡಲಾಗಿದೆ. ವಾಸ್ತವವಾಗಿ ಈ ಪಂದ್ಯದಲ್ಲಿ ಪಂಜಾಬ್ ಮೇಲುಗೈ ಸಾಧಿಸಿತ್ತು. ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡುತ್ತಿದ್ದ ಪಂಜಾಬ್ 10 ಓವರ್ಗಳ ಅಂತ್ಯಕ್ಕೆ 1 ವಿಕೆಟ್ ಕಳೆದುಕೊಂಡು 122 ರನ್ ಕಲೆಹಾಕಿತ್ತು. ಆದ್ದರಿಂದ ಈ ಪಂದ್ಯ ರದ್ದಾಗಿರುವುದು ಪಂಜಾಬ್ ತಂಡಕ್ಕೆ ನಷ್ಟವನ್ನುಂಟು ಮಾಡಿದೆ.
ಇದು ಮಾತ್ರವಲ್ಲ ಜನರು ಮತ್ತು ಆಟಗಾರರ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಮುಂಬರುವ ಎಲ್ಲಾ ಐಪಿಎಲ್ ಪಂದ್ಯಗಳನ್ನು ಸಹ ಮುಂದೂಡುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ. ಈ ವಿಷಯದ ಕುರಿತು ಐಪಿಎಲ್ ಆಡಳಿತ ಮಂಡಳಿ ತುರ್ತು ಸಭೆ ಕರೆದಿದ್ದು, ಈ ಸೀಸನ್ನ ಮುಂಬರುವ ಪಂದ್ಯಗಳ ಕುರಿತು ನಿರ್ಧಾರ ತೆಗೆದುಕೊಳ್ಳಲಿದೆ.
TV9 Kannada
ನಮ್ಮ ಸಮಗ್ರ ಸುದ್ದಿಗಳಿಗಾಗಿ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
WhatsApp Group:https://chat.whatsapp.com/KnDIfiBURQ9G5sLEJLqshk
Facebook page: https://www.facebook.com/samagrasudii
Sharechat: https://sharehat.com/profile/edu514826335?d=n
Twitter: https://twitter.com/SuddiSamagra
Threads: https://www.threads.net/@samagrasuddi.co.in
Instagram: https://www.instagram.com/samagrasuddi.co.in/
Telegram: https://t.me/+E1ubNzdguQ5jN2Y1