ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ರಾಜಸ್ಥಾನ್ ನಡುವಿನ ಐಪಿಎಲ್ 2025ರ 32ನೇ ಪಂದ್ಯದಲ್ಲಿ ಪಂದ್ಯ ರೋಚಕ ಅಂತ್ಯಕಂಡಿದೆ. ಡೆಲ್ಲಿ ಕ್ಯಾಪಿಟಲ್ಸ್ ಸೂಪರ್ ಓವರ್ನಲ್ಲಿ ಗೆಲುವು ಸಾಧಿಸಿದೆ. ಮೊದಲು ಬ್ಯಾಟಿಂಗ್ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್ 20 ಓವರ್ಗಳಲ್ಲಿ 5 ವಿಕೆಟ್ ಕಳೆದುಕೊಂಡು 188 ರನ್ಗಳಿಸಿದರೆ, ಇದಕ್ಕೆ ಉತ್ತರವಾಗಿ ರಾಜಸ್ಥಾನ್ ರಾಯಲ್ಸ್ 20 ಓವರ್ಗಳಲ್ಲಿ 5 ವಿಕೆಟ್ ಕಳೆದುಕೊಂಡು ಅಷ್ಟೇ ರನ್ಗಳಿಸಿತು.

ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ರಾಜಸ್ಥಾನ್ ನಡುವಿನ ಐಪಿಎಲ್ 2025ರ 32ನೇ ಪಂದ್ಯದಲ್ಲಿ ಪಂದ್ಯ ರೋಚಕ ಅಂತ್ಯಕಂಡಿದೆ. ಡೆಲ್ಲಿ ಕ್ಯಾಪಿಟಲ್ಸ್ ಸೂಪರ್ ಓವರ್ನಲ್ಲಿ ಗೆಲುವು ಸಾಧಿಸಿದೆ. ಮೊದಲು ಬ್ಯಾಟಿಂಗ್ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್ 20 ಓವರ್ಗಳಲ್ಲಿ 5 ವಿಕೆಟ್ ಕಳೆದುಕೊಂಡು 188 ರನ್ಗಳಿಸಿದರೆ, ಇದಕ್ಕೆ ಉತ್ತರವಾಗಿ ರಾಜಸ್ಥಾನ್ ರಾಯಲ್ಸ್ 20 ಓವರ್ಗಳಲ್ಲಿ 5 ವಿಕೆಟ್ ಕಳೆದುಕೊಂಡು ಅಷ್ಟೇ ರನ್ಗಳಿಸಿತು. ಆದರೆ ಸೂಪರ್ ಓವರ್ನಲ್ಲಿ ರಾಜಸ್ಥಾನ್ ಇನ್ನೊಂದು ಎಸೆತವಿರುವಂತೆ 11 ರನ್ಗಳಿಸಿತು. 12 ರನ್ಗಳ ಸೂಪರ್ ಓವರ್ ಗುರಿಯನ್ನ ಬೆನ್ನಟ್ಟಿದ ಡೆಲ್ಲಿ ತಂಡ 4 ಎಸೆತಗಳಲ್ಲಿ 13 ರನ್ಗಳಿಸಿ ಗೆಲುವು ಸಾಧಿಸಿತು. ರಾಹುಲ್ 7, ಟ್ರಿಸ್ಟಾನ್ ಸ್ಟಬ್ಸ್ 6 ರನ್ಗಳಿಸಿ ಗೆಲುವು ತಂದುಕೊಟ್ಟರು.
189ರನ್ಗಳ ಗುರಿಯನ್ನ ಬೆನ್ನಟ್ಟಿದ ಡೆಲ್ಲಿ ರಾಜಸ್ಥಾನ್ ರಾಯಲ್ಸ್ ಭರ್ಜರಿ ಆರಂಭ ಪಡೆದುಕೊಂಡಿತು. ಸಂಜು ಸ್ಯಾಮ್ಸನ್ ಹಾಗೂ ಯಶಸ್ವಿ ಮೊದಲ ವಿಕೆಟ್ಗೆ 63 ರನ್ಗಳ ಜೊತೆಯಾಟ ನೀಡಿದರು. 19 ಎಸೆತಗಳಲ್ಲಿ 2 ಬೌಂಡರಿ, 3 ಸಿಕ್ಸರ್ ಸಹಿತ 31 ರನ್ಗಳಿಸಿದ್ದ ಸಂಜು ಸ್ಯಾಮ್ಸನ್ ರಿಟೈರ್ಟ್ ಹರ್ಟ್ ತೆಗೆದುಕೊಂಡರು. ನಂತರ ಬಂದ ರಿಯಾನ್ ಪರಾಗ್ 11 ಎಸೆತಗಳಲ್ಲಿ ಕೇವಲ 8 ರನ್ಗಳಿಸಿ ಅಕ್ಷರ್ ಪಟೇಲ್ ಬೌಲಿಂಗ್ನಲ್ಲಿ ಬೌಲ್ಡ್ ಆದರು.
3ನೇ ವಿಕೆಟ್ಗೆ ನಿತೀಶ್ ರಾಣಾ ಮತ್ತು ಜೈಸ್ವಾಲ್ 36 ರನ್ಗಳಿಸಿದರು. ಜೈಸ್ವಾಲ್ 37 ಎಸೆತಗಳಲ್ಲಿ 3 ಬೌಂಡರಿ, 4 ಸಿಕ್ಸರ್ಗಳ ಸಹಿತ 51 ರನ್ಗಳಿಸಿ ಔಟ್ ಆದರು. ನಿತೀಶ್ ರಾಣಾ 28 ಎಸೆತಗಳಲ್ಲಿ 6 ಬೌಂಡರಿ, 2 ಸಿಕ್ಸರ್ಗಳ ಸಹಿತ 51 ರನ್ಗಳಿಸಿದರು. ಅವರು ಔಟ್ ಆಗುವ ಮುನ್ನ ಧ್ರುವ್ ಜುರೆಲ್ ಜೊತೆ 26 ಎಸೆತಗಳಲ್ಲಿ 49 ರನ್ಗಳ ಮ್ಯಾಚ್ ವಿನ್ನಿಂಗ್ ಜೊತೆಯಾಟ ನಡೆಸಿದ್ದರು.
ನಂತರ ಧ್ರುವ್ ಜುರೆಲ್ ಹಾಗೂ ಹೆಟ್ಮೆಯರ್ 14 ಎಸೆತಗಳಲ್ಲಿ 27 ರನ್ ಜೊತೆಯಾಟ ನಡೆಸಿ ಪಂದ್ಯವನ್ನ ಟೈ ಮಾಡಿದರು. ಕೊನೆಯ ಓವರ್ನಲ್ಲಿ ರಾಜಸ್ಥಾನ್ ಗೆಲುವಿಗೆ 9 ರನ್ಗಳ ಅಗತ್ಯವಿತ್ತು. ಆದರೆ ಸ್ಟಾರ್ಕ್ ಒಂದೂ ಬೌಂಡರಿ ಕೊಡದೆ ಕೇವಲ 8 ರನ್ ಮಾತ್ರ ಬಿಟ್ಟುಕೊಟ್ಟು ಪಂದ್ಯ ಟೈ ಆಗಲು ನೆರವಾದರು. ಜುರೆಲ್ 17 ಎಸೆತಗಳಲ್ಲಿ 26, ಶಿಮ್ರಾನ್ ಹೆಟ್ಮೆಯರ್ 9 ಎಸೆತಗಳಲ್ಲಿ 15 ರನ್ಗಳಿಸಿ ಅಜೇಯರಾಗಿ ಉಳಿದರು. ಕೊನೆಯ ಎಸೆತದಲ್ಲಿ 2 ರನ್ಗಳ ಅಗತ್ಯವಿತ್ತು. ಜುರೆಲ್ ಕೇವಲ 1 ರನ್ಗಳಿಸಿ ರನ್ಔಟ್ ಆದರು.

ಮುಂದುವರಿದ ಡೆಲ್ಲಿ ತಂಡದ ಆರಂಭಿಕ ವೈಫಲ್ಯ
ಟಾಸ್ ಗೆದ್ದ ರಾಜಸ್ಥಾನ್ ರಾಯಲ್ಸ್ ಅತಿಥೇಯ ತಂಡಕ್ಕೆ ಬ್ಯಾಟಿಂಗ್ ನೀಡಿತು. ಬ್ಯಾಟಿಂಗ್ಗೆ ಇಳಿದ ಡೆಲ್ಲಿಗೆ ಇಂದೂ ಕೂಡ ಉತ್ತಮ ಆರಂಭ ಸಿಗಲಿಲ್ಲ. ಆಸೀಸ್ ಯುವ ಬ್ಯಾಟರ್ ಜೇಕ್ ಪ್ರೇಸರ್ ಮೆಕ್‌ಗರ್ಕ್ ಕೇವಲ 9 ರನ್ಗಳಿಸಿ ಜೋಫ್ರಾ ಆರ್ಚರ್ ಬೌಲಿಂಗ್ನಲ್ಲಿ ಜೈಸ್ವಾಲ್ಗೆ ಕ್ಯಾಚ್ ನೀಡಿ ಔಟ್ ಆದರು. ನಂತರ ಬಂದ ಕಳೆದ ಪಂದ್ಯದಲ್ಲಿ 89 ರನ್ಗಳಿಸಿದ್ದ ಕನ್ನಡಿಗ ಕರುಣ್ ನಾಯರ್ ರನ್ ಕದಿಯುವ ಆತುರದಲ್ಲಿ ಒಂದೂ ರನ್ಗಳಿಸದೇ ರನ್ಔಟ್ ಆಗಿ ಪೆವಿಲಿಯನ್ ಸೇರಿಕೊಂಡರು.
ಅಭಿಷೇಕ್-ರಾಹುಲ್ರಿಂದ ಚೇತರಿಕೆಯ ಆಟ
3ನೇ ವಿಕೆಟ್ಗೆ ಅಭಿಷೇಕ್ ಪೊರೆಲ್ ಹಾಗೂ ಕೆಎಲ್ ರಾಹುಲ್ 63 ರನ್ಗಳಿಸಿದರು. ಆದರೆ ಇವರಿಬ್ಬರು ವೇಗವಾಗಿ ರನ್ಗಳಿಸುವಲ್ಲಿ ವಿಫಲರಾದರು. 63 ರನ್ಗಳಿಗಾಗಿ 57 ಎಸೆತಗಳನ್ನೆದುರಿಸಿದರು. 7 ಎಸೆತಗಳಲ್ಲಿ 24 ರನ್ಗಳಿಸಿದ್ದ ಪೊರೆಲ್ ಒಟ್ಟಾರೆ 37 ಎಸೆತಗಳಲ್ಲಿ 5 ಬೌಂಡರಿ, 1 ಸಿಕ್ಸರ್ ಸಹಿತ 49 ರನ್ಗಳಿಸಿ ಔಟ್ ಆದರು. ಪವರ್ ಪ್ಲೇನ 2ನೇ ಓವರ್ನಲ್ಲೆ 4 ಬೌಂಡರಿ, 1 ಸಿಕ್ಸರ್ ಸಿಡಿಸಿದ್ದ ಪೊರೆಲ್ ನಂತರ 30 ಎಸೆತಗಳಲ್ಲಿ ಕೇವಲ 1 ಬೌಂಡರಿ ಮಾತ್ರ ಸಿಡಿಸಿದರು. ಇನ್ನೂ ರಾಹುಲ್ ಕೂಡ ತಮ್ಮ ಸಾಮರ್ಥ್ಯಕ್ಕೆ ತಕ್ಕಂತೆ ಆಡಲಿಲ್ಲ. ಅವರು 32 ಎಸೆತಗಳಲ್ಲಿ 2 ಬೌಂಡರಿ, 2 ಸಿಕ್ಸರ್ಗಳ ಸಹಿತ 38 ರನ್ಗಳಿಸಿ ಆರ್ಚರ್ಗೆ ವಿಕೆಟ್ ನೀಡಿದರು.
ಪಟೇಲ್-ಸ್ಟಬ್ಸ್ ಅಬ್ಬರ
ನಾಯಕ ಅಕ್ಷರ್ ಪಟೇಲ್ 14 ಎಸೆತಗಳಲ್ಲಿ 4 ಬೌಂಡರಿ, 2 ಸಿಕ್ಸರ್ ಸಹಿತ 32, ಟ್ರಿಸ್ಟಾನ್ ಸ್ಟಬ್ಸ್ 18 ಎಸೆತಗಳಲ್ಲಿ ತಲಾ 2 ಬೌಂಡರಿ, ಸಿಕ್ಸರ್ ಸಹಿತ ಅಜೇಯ 32, ಅಶುತೋಷ್ ಶರ್ಮಾ 11 ಎಸೆತಗಳಲ್ಲಿ ಅಜೇಯ 15 ರನ್ಗಳಿಸಿ ತಂಡದ ಮೊತ್ತವನ್ನ ಹೆಚ್ಚಿಸಿದರು.
ರಾಜಸ್ಥಾನ್ ರಾಯಲ್ಸ್ ಪರ ಜೋಫ್ರಾ ಆರ್ಚರ್ 32ಕ್ಕೆ2, ವನಿಂದು ಹಸರಂಗ 38ಕ್ಕೆ1, ಮಹೀಶ್ ತೀಕ್ಷಣ 40ಕ್ಕೆ1 ವಿಕೆಟ್ ಪಡೆದು ಮಿಂಚಿದರು.
ಹೆಡ್ ಟು ಹೆಡ್ ದಾಖಲೆ
ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ರಾಜಸ್ಥಾನ್ ರಾಯಲ್ಸ್ ತಂಡಗಳು ಇಲ್ಲಿಯವರೆಗೆ 29 ಬಾರಿ ಮುಖಾಮುಖಿಯಾಗಿದ್ದು, ಡೆಲ್ಲಿ 14 ಹಾಗೂ ರಾಜಸ್ಥಾನ್ 15ರಲ್ಲಿ ಗೆಲುವು ಸಾಧಿಸಿವೆ. ಅರುಣ್ ಜೇಟ್ಲಿ ಮೈದಾನದಲ್ಲಿ ನಡೆದಿರುವ 9 ಪಂದ್ಯಗಳಲ್ಲಿ ಡೆಲ್ಲಿ 6ರಲ್ಲಿ ಗೆದ್ದಿದ್ದರೆ, ರಾಯಲ್ಸ್ 3ರಲ್ಲಿ ಮಾತ್ರ ಗೆಲುವು ಸಾಧಿಸಿದೆ.
ರಾಜಸ್ಥಾನ್ ವಿರುದ್ಧ ಡೆಲ್ಲಿ ತಂಡ ಈ ಮೈದಾನದಲ್ಲಿ ಪ್ರಾಬಲ್ಯ ಸಾಧಿಸಿದರೂ ಒಟ್ಟಾರೆ ಇಲ್ಲಿ ನಡೆದಿರುವ 86 ಪಂದ್ಯಗಳಲ್ಲಿ 38ರಲ್ಲಿ ಗೆಲುವು ಸಾಧಿಸಿದ್ದರೆ, 46 ಸೋಲು ಕಂಡಿದೆ. ಒಂದು ಪಂದ್ಯ ರದ್ದು, ಒಂದು ಟೈ ಆಗಿದೆ.
ಪ್ಲೇಯಿಂಗ್ ಇಲೆವೆನ್
ಡೆಲ್ಲಿ ಕ್ಯಾಪಿಟಲ್ಸ್ ಪ್ಲೇಯಿಂಗ್ XI: ಜೇಕ್ ಫ್ರೇಸರ್-ಮೆಕ್‌ಗರ್ಕ್, ಅಭಿಷೇಕ್ ಪೊರೆಲ್, ಕರುಣ್ ನಾಯರ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಅಕ್ಷರ್ ಪಟೇಲ್ (ನಾಯಕ), ಟ್ರಿಸ್ಟಾನ್ ಸ್ಟಬ್ಸ್, ಅಶುತೋಷ್ ಶರ್ಮಾ, ವಿಪ್ರಜ್ ನಿಗಮ್, ಮಿಚೆಲ್ ಸ್ಟಾರ್ಕ್, ಕುಲದೀಪ್ ಯಾದವ್, ಮೋಹಿತ್ ಶರ್ಮಾ
ರಾಜಸ್ಥಾನ್ ರಾಯಲ್ಸ್ ಪ್ಲೇಯಿಂಗ್ XI: ಯಶಸ್ವಿ ಜೈಸ್ವಾಲ್, ಸಂಜು ಸ್ಯಾಮ್ಸನ್ (ನಾಯಕ/ವಿಕೀ), ನಿತೀಶ್ ರಾಣಾ, ರಿಯಾನ್ ಪರಾಗ್, ಧ್ರುವ ಜುರೆಲ್, ಶಿಮ್ರಾನ್ ಹೆಟ್ಮೆಯರ್, ವನಿಂದು ಹಸರಂಗ, ಜೋಫ್ರಾ ಆರ್ಚರ್, ಮಹೇಶ್ ತೀಕ್ಷಣ, ಸಂದೀಪ್ ಶರ್ಮಾ, ತುಷಾರ್ ದೇಶಪಾಂಡೆ
News 18 Kannada
ನಮ್ಮ ಸಮಗ್ರ ಸುದ್ದಿಗಳಿಗಾಗಿ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
WhatsApp Group:https://chat.whatsapp.com/KnDIfiBURQ9G5sLEJLqshk
Facebook page: https://www.facebook.com/samagrasudii
Sharechat: https://sharehat.com/profile/edu514826335?d=n
Twitter: https://twitter.com/SuddiSamagra
Threads: https://www.threads.net/@samagrasuddi.co.in
Instagram: https://www.instagram.com/samagrasuddi.co.in/
Telegram: https://t.me/+E1ubNzdguQ5jN2Y1