ಕ್ವಿಂಟನ್ ಡಿಕಾಕ್ ಸಿಡಿಲಬ್ಬರದ ಬ್ಯಾಟಿಂಗ್ ಹಾಗೂ ಬೌಲರ್ಗಳ ಸಂಘಟಿತ ಪ್ರದರ್ಶನದ ನೆರವಿನಿಂದ ಕೆಕೆಆರ್ 8 ವಿಕೆಟ್ಗಳ ಸುಲಭ ಜಯ ಸಾಧಿಸಿದೆ. ರಾಜಸ್ಥಾನ್ ರಾಯಲ್ಸ್ ನೀಡಿದ್ದ 152 ರನ್‌ಗಳ ಗುರಿಯನ್ನ ಬೆನ್ನಟ್ಟಿದ ಹಾಲಿ ಚಾಂಪಿಯನ್ ಕೋಲ್ಕತ್ತಾ ನೈಟ್ ರೈಡರ್ಸ್ ಕೇವಲ 17.3 ಓವರ್‌ಗಳಲ್ಲಿ 3 ವಿಕೆಟ್ ಕಳೆದುಕೊಂಡು ಇನ್ನು 15 ಎಸೆತಗಳಿರುವಂತೆ ಗೆಲುವು ಸಾಧಿಸಿತು.

ಕ್ವಿಂಟನ್ ಡಿಕಾಕ್ ಸಿಡಿಲಬ್ಬರದ ಬ್ಯಾಟಿಂಗ್ ಹಾಗೂ ಬೌಲರ್ಗಳ ಸಂಘಟಿತ ಪ್ರದರ್ಶನದ ನೆರವಿನಿಂದ ಕೆಕೆಆರ್ 8 ವಿಕೆಟ್ಗಳ ಸುಲಭ ಜಯ ಸಾಧಿಸಿದೆ. ರಾಜಸ್ಥಾನ್ ರಾಯಲ್ಸ್ ನೀಡಿದ್ದ 152 ರನ್‌ಗಳ ಗುರಿಯನ್ನ ಬೆನ್ನಟ್ಟಿದ ಹಾಲಿ ಚಾಂಪಿಯನ್ ಕೋಲ್ಕತ್ತಾ ನೈಟ್ ರೈಡರ್ಸ್ ಕೇವಲ 17.3 ಓವರ್‌ಗಳಲ್ಲಿ 3 ವಿಕೆಟ್ ಕಳೆದುಕೊಂಡು ಇನ್ನು 15 ಎಸೆತಗಳಿರುವಂತೆ ಗೆಲುವು ಸಾಧಿಸಿತು.
152 ರನ್‌ಗಳ ಗುರಿ ಬೆನ್ನಟ್ಟಿದ ಕೆಕೆಆರ್ ತಂಡ ಉತ್ತಮ ಆರಂಭ ಪಡೆಯಲು ವಿಫಲವಾಯಿತು. ನರೈನ್ ಬದಲಿಗೆ ತಂಡ ಸೇರಿದ್ದ ಅನುಭವಿ ಮೊಯೀನ್ ಅಲಿ 12 ಎಸೆತಗಳನ್ನಾಡಿ ಕೇವಲ 4 ರನ್ಗಳಿಸಿ ವಿಕೆಟ್ ಒಪ್ಪಿಸಿದರು. ರನ್ಗಳಿಸಲು ಪರದಾಡುತ್ತಿದ್ದ ಅಲಿ ರನೌಟ್ ಆಗಿಯೇ ಪೆವಿಲಿಯನ್ ಸೇರಿಕೊಂಡರು. ಕಳೆದ ಪಂದ್ಯದಲ್ಲಿ ಅರ್ಧಶತಕ ಸಿಡಿಸಿದ್ದ ನಾಯಕ ರಹಾನೆ ಇಂದು 18 ರನ್ ಗಳಿಸಿ ಕ್ಯಾಚ್ ಔಟ್ ಆದರು.

ಆದರೆ ಆರಂಭಿಕನಾಗಿ ಕಣಕ್ಕಿಳಿದಿದ್ದ ಡಿಕಾಕ್ ಕೊನೆಯವರೆಗೂ ಅದ್ಭುತವಾಗಿ ಆಡಿ ಪಂದ್ಯವನ್ನು ಗೆಲ್ಲಿಸಿದರು. 36 ಎಸೆತಗಳಲ್ಲಿ ಅರ್ಧಶತಕ ಪೂರೈಸಿದ ಆಫ್ರಿಕನ್ ಆಟಗಾರ ಈ ಪಂದ್ಯದಲ್ಲಿ 61 ಎಸೆತಗಳಲ್ಲಿ 6 ಸಿಕ್ಸರ್ ಮತ್ತು 8 ಬೌಂಡರಿಗಳೊಂದಿಗೆ ಅಜೇಯ 97 ರನ್ ಗಳಿಸಿದರು. ಇವರಿಗೆ ಸಾಥ್ ನೀಡಿದ ಅಂಗ್ಕ್ರಿಶ್ ರಘುವಂಶಿ 17 ಎಸೆತಗಳಲ್ಲಿ 2 ಬೌಂಡರಿಗಳೊಂದಿಗೆ ಅಜೇಯ 22 ರನ್ ಗಳಿಸಿ ತಂಡವನ್ನು ಗೆಲುವಿನ ಗಡಿ ದಾಡಿಸಿದರು.
ಈ ಇಬ್ಬರು ಮೂರನೇ ವಿಕೆಟ್‌ಗೆ ಮುರಿಯದ 83 ರನ್‌ಗಳ ಜೊತೆಯಾಟ ನಡೆಸಿದರು. ಕೊನೆಯ ಮೂರು ಓವರ್‌ಗಳಲ್ಲಿ ಕೆಕೆಆರ್‌ಗೆ 17 ರನ್‌ಗಳು ಬೇಕಾಗಿದ್ದವು. ಆ ಸಂದರ್ಭದಲ್ಲಿ ಜೋಫ್ರಾ ಆರ್ಚರ್ ಎಸೆದ 18 ನೇ ಓವರ್‌ನ ಮೊದಲ ಮೂರು ಎಸೆತಗಳಲ್ಲಿ ಡಿ ಕಾಕ್ ಒಂದು ಬೌಂಡರಿ ಮತ್ತು ಎರಡು ಸಿಕ್ಸರ್‌ಗಳನ್ನು ಬಾರಿಸಿ ಕೆಕೆಆರ್‌ಗೆ ಜಯ ತಂದುಕೊಟ್ಟರು.

ಮೊದಲ ಪಂದ್ಯದಲ್ಲಿ ಆರ್ಸಿಬಿ ವಿರುದ್ಧ ಸೋಲು ಕಂಡಿದ್ದ ಕೆಕೆಆರ್, ಇದೀಗ ರಾಜಸ್ಥಾನ್ ವಿರುದ್ಧ ಸುಲಭ ಜಯ ಸಾಧಿಸುವ ಮೂಲಕ ಅಂಕಪಟ್ಟಿಯಲ್ಲಿ ಖಾತೆ ತೆರೆಯಿತು.
ಇದಕ್ಕೂ ಮುನ್ನ ಟಾಸ್ ಸೋತು ಬ್ಯಾಟಿಂಗ್ ಮಾಡಿದ ರಾಜಸ್ಥಾನ್ ರಾಯಲ್ಸ್ 20 ಓವರ್‌ಗಳಲ್ಲಿ 9 ವಿಕೆಟ್ ಕಳೆದುಕೊಂಡು 151 ರನ್ಗಳಿಸಿತ್ತು.
ರಾಜಸ್ಥಾನದ ಇನ್ನಿಂಗ್ಸ್‌ನಲ್ಲಿ ಸಂಜು 13 ರನ್‌ಗಳ ಇನ್ನಿಂಗ್ಸ್ ಆಡಿದರು. ರಾಜಸ್ಥಾನ ಪರ ಆರಂಭಿಕನಾಗಿ ಬ್ಯಾಟಿಂಗ್ ಮಾಡಿದ ಸಂಜು ಸ್ಯಾಮ್ಸನ್ ಈ ಪಂದ್ಯದಲ್ಲಿ ತಮ್ಮ ಮ್ಯಾಜಿಕ್ ಪ್ರದರ್ಶಿಸಲು ವಿಫಲರಾದರು. ರಿಯಾನ್ ಪರಾಗ್ 25 ರನ್ ಗಳಿಸಿ ವರುಣ್ ಚಕ್ರವರ್ತಿ ಬೌಲಿಂಗ್ ನಲ್ಲಿ ಡಿ ಕಾಕ್ ಗೆ ಕ್ಯಾಚ್ ನೀಡಿ ಔಟಾದರು. ಯಶಸ್ವಿ ಜೈಸ್ವಾಲ್ 24 ಎಸೆತಗಳಲ್ಲಿ 29 ರನ್ ಗಳಿಸಿ ಮೊಯಿನ್ ಅಲಿ ಎಸೆತದಲ್ಲಿ ಹರ್ಷಿತ್ ರಾಣಾಗೆ ಕ್ಯಾಚ್ ನೀಡಿ ಔಟಾದರು. ಧ್ರುವ್ ಜುರೆಲ್ 28 ಎಸೆತಗಳಲ್ಲಿ 5 ಬೌಂಡರಿಗಳ ಸಹಿತ 33ರನ್ಗಳಿಸಿ ತಂಡದ ಮೊತ್ತ 150ರ ಗಡಿ ದಾಟುವಂತೆ ಮಾಡಿದರು.
ಉಳಿದಂತೆ ಹಸರಂಗ 4 ರನ್ ಗಳಿಸಿದರೆ, ನಿತೀಶ್ ರಾಣಾ 8 ರನ್ , ಶಿಮ್ರಾನ್ ಹೆಟ್ಮೆಯರ್ 7 ರನ್ ಗಳಿಸಿ ಔಟಾದರು. ಕೆಕೆಆರ್ ಪರ ಹರ್ಷಿತ್ ರಾಣಾ, ವರುಣ್ ಚಕ್ರವರ್ತಿ, ವೈಭವ್ ಅರೋರಾ ಮತ್ತು ಮೊಯಿನ್ ಅಲಿ ತಲಾ 2 ವಿಕೆಟ್ ಪಡೆದರೆ, ಸ್ಪೆನ್ಸರ್ ಜಾನ್ಸನ್ ಒಂದು ವಿಕೆಟ್ ಪಡೆದು ಮಿಂಚಿದರು.

ರಾಜಸ್ಥಾನ್ ತಂಡ ಸತತ ಎರಡು ಸೋಲುಗಳೊಂದಿಗೆ ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನಕ್ಕೆ ಕುಸಿತು. ರಾಜಸ್ಥಾನ್ 3ನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಭಾನುವಾರ ಕಣಕ್ಕಳಿಯಲಿದೆ. ಇತ್ತ ಗೆದ್ದ ಕೆಕೆಆರ್ ಮಾರ್ಚ್ 31 ರಂದು ಮುಂಬೈ ಇಂಡಿಯನ್ಸ್ ವಿರುದ್ಧ ಸೆಣಸಾಡಲಿದೆ.
Source : News 18 Kannada
ನಮ್ಮ ಸಮಗ್ರ ಸುದ್ದಿಗಳಿಗಾಗಿ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
WhatsApp Group:https://chat.whatsapp.com/KnDIfiBURQ9G5sLEJLqshk
Facebook page: https://www.facebook.com/samagrasudii
Sharechat: https://sharehat.com/profile/edu514826335?d=n
Twitter: https://twitter.com/SuddiSamagra
Threads: https://www.threads.net/@samagrasuddi.co.in
Instagram: https://www.instagram.com/samagrasuddi.co.in/
Telegram: https://t.me/+E1ubNzdguQ5jN2Y1