LSG vs RCB IPL 2025 Match 70 Weather Report: ಲಕ್ನೋ ಸೂಪರ್ ಜೈಂಟ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವೆ ಐಪಿಎಲ್ 2025ರ 70ನೇ ಪಂದ್ಯ ನಡೆಯಲಿದೆ. ಏಕಾನಾ ಕ್ರೀಡಾಂಗಣದ ಪಿಚ್ ಬ್ಯಾಟ್ಸ್‌ಮನ್‌ಗಳಿಗೆ ಅನುಕೂಲಕರವಾಗಿದೆ. ಹವಾಮಾನ ಸ್ಪಷ್ಟವಾಗಿದ್ದು, ಮಳೆಯ ಸಾಧ್ಯತೆಗಳಿಲ್ಲ. ಬೆಂಗಳೂರು ಪ್ಲೇಆಫ್ ಖಚಿತಪಡಿಸಿಕೊಂಡಿದ್ದರೆ, ಲಕ್ನೋ ತನ್ನ ಸ್ಥಾನವನ್ನು ಉತ್ತಮಪಡಿಸಲು ಹೋರಾಡುತ್ತಿದೆ.

ಲಕ್ನೋ ಸೂಪರ್ ಜೈಂಟ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು (LSG vs RCB) ನಡುವಿನ ಐಪಿಎಲ್ 2025 (IPL 2025)ರ 70 ನೇ ಪಂದ್ಯವು ಲಕ್ನೋದ ಏಕಾನಾ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಲಿದೆ. ಭಾರತೀಯ ಕಾಲಮಾನ ಸಂಜೆ 7.30ಕ್ಕೆ ಪಂದ್ಯ ಆರಂಭವಾಗಲಿದೆ. ಬೆಂಗಳೂರು ತಂಡ ಈಗಾಗಲೇ ಪ್ಲೇಆಫ್ ತಲುಪಿದೆ ಆದರೆ ಈ ಪಂದ್ಯವನ್ನು ಗೆಲ್ಲುವ ಮೂಲಕ ಅಗ್ರ 2 ರಲ್ಲಿ ಸ್ಥಾನ ಪಡೆಯಲು ಬಯಸಿದೆ. ಇತ್ತ ಲಕ್ನೋಗೂ ಇದು ಕೊನೆಯ ಪಂದ್ಯವಾಗಿದ್ದು, ಈ ಪಂದ್ಯ ಸೋಲು ಅಥವಾ ಗೆಲುವು ಪಾಯಿಂಟ್ ಪಟ್ಟಿಯಲ್ಲಿ ತಂಡವನ್ನು ಸ್ಥಾನವನ್ನು ಬದಲಿಸುವಲ್ಲಿ ನೆರವಾಗಲಿದೆ. ಇದನ್ನು ಹೊರತುಪಡಿಸಿ ಲಕ್ನೋ ತಂಡಕ್ಕೆ ಇದು ಕೇವಲ ಔಪಚಾರಿಕವಾಗಿದೆ. ಈ ಪಂದ್ಯಕ್ಕೂ ಮುನ್ನ ಏಕಾನಾ ಪಿಚ್ ಹೇಗಿರುತ್ತದೆ? ಪಂದ್ಯಕ್ಕೆ ಮಳೆ ಅಡ್ಡಿಪಡಿಸುತ್ತಾ ಎಂಬುದನ್ನು ನೋಡೋಣ
ಏಕಾನಾ ಪಿಚ್ ಹೇಗಿರುತ್ತದೆ?
ಲಕ್ನೋದ ಏಕಾನಾ ಕ್ರೀಡಾಂಗಣದ ಮೇಲ್ಮೈ ಸಾಮಾನ್ಯವಾಗಿ ಬ್ಯಾಟ್ಸ್‌ಮನ್‌ಗಳಿಗೆ ಅನುಕೂಲಕರವಾಗಿರುತ್ತದೆ. ಮೊದಲು, ಇದು ಸ್ಪಿನ್ನರ್‌ಗಳ ಸ್ವರ್ಗವಾಗಿತ್ತು ಆದರೆ ಇತ್ತೀಚಿನ ದಿನಗಳಲ್ಲಿ ಪಿಚ್ನ ಸ್ವರೂಪ ಬಹಳಷ್ಟು ಬದಲಾಗಿದೆ. ಇಲ್ಲಿ ಮೊದಲು ಬೌಲಿಂಗ್ ಮಾಡುವುದು ಸೂಕ್ತವಾಗಿದ್ದು, 190 ಕ್ಕಿಂತ ಹೆಚ್ಚಿನ ರನ್ ಕಲೆಹಾಕಿದರೆ ಗೆಲುವಿಗೆ ಸನಿಹವಾಗಬಹುದು. ಎರಡೂ ತಂಡಗಳ ಬ್ಯಾಟಿಂಗ್ ಘಟಕವು ತುಂಬಾ ಬಲಿಷ್ಠವಾಗಿರುವುದರಿಂದ ಅಭಿಮಾನಿಗಳು ಹೆಚ್ಚಿನ ಸ್ಕೋರಿಂಗ್ ಪಂದ್ಯವನ್ನು ವೀಕ್ಷಿಸಬಹುದು.
ಲಕ್ನೋ ಹವಾಮಾನ ವರದಿ
ಅಕ್ಯೂವೆದರ್ ವರದಿಯ ಪ್ರಕಾರ, ಲಕ್ನೋದಲ್ಲಿ ಶುಕ್ರವಾರ ಹವಾಮಾನವು ಸಂಪೂರ್ಣವಾಗಿ ಸ್ಪಷ್ಟವಾಗಿರುತ್ತದೆ. ಟಾಸ್ ನಡೆಯುವ ವೇಳೆಗೆ ತಾಪಮಾನವು ಸುಮಾರು 33 ಡಿಗ್ರಿ ಸೆಲ್ಸಿಯಸ್ ಇರುತ್ತದೆ. ಹಗಲಿನಲ್ಲಿ ತಾಪಮಾನ 38 ಡಿಗ್ರಿ ಸೆಲ್ಸಿಯಸ್‌ಗೆ ಏರಿಕೆಯಾಗುವ ಸಾಧ್ಯತೆಯಿದೆ. ಪಂದ್ಯ ಮುಂದುವರೆದಂತೆ, ರಾತ್ರಿಯ ಸಮಯದಲ್ಲಿ ತಾಪಮಾನದಲ್ಲಿ ಸ್ವಲ್ಪ ಇಳಿಕೆ ಕಂಡುಬರಬಹುದು, ಇದು ಆಟಗಾರರಿಗೆ ಸ್ವಲ್ಪ ಸಮಾಧಾನವನ್ನು ನೀಡುತ್ತದೆ. ಒಳ್ಳೆಯ ಸುದ್ದಿ ಏನೆಂದರೆ ಪಂದ್ಯದುದ್ದಕ್ಕೂ ಮಳೆ ಬರುವ ಸಾಧ್ಯತೆ ಇಲ್ಲ. ಹೀಗಾಗಿ ಅಭಿಮಾನಿಗಳು ಪೂರ್ಣ 40 ಓವರ್‌ಗಳ ಪಂದ್ಯವನ್ನು ವೀಕ್ಷಿಸಬಹುದು.
ಏಕಾನಾ ಕ್ರೀಡಾಂಗಣದಲ್ಲಿ ಐಪಿಎಲ್ ದಾಖಲೆ
ಏಕಾನಾ ಕ್ರಿಕೆಟ್ ಕ್ರೀಡಾಂಗಣದಲ್ಲಿ ಇದುವರೆಗೆ ಒಟ್ಟು 21 ಐಪಿಎಲ್ ಪಂದ್ಯಗಳು ನಡೆದಿದ್ದು, ಮೊದಲು ಬ್ಯಾಟ್ ಮಾಡಿದ ತಂಡ 9 ಪಂದ್ಯಗಳನ್ನು ಗೆದ್ದಿದ್ದರೆ, ಗುರಿಯನ್ನು ಬೆನ್ನಟ್ಟಿದ ತಂಡ 11 ಪಂದ್ಯಗಳನ್ನು ಗೆದ್ದಿದೆ.
ಹೆಡ್ ಟು ಹೆಡ್ ರೆಕಾರ್ಡ್
ಐಪಿಎಲ್‌ನಲ್ಲಿ ಇಲ್ಲಿಯವರೆಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಲಕ್ನೋ ಸೂಪರ್ ಜೈಂಟ್ಸ್ ನಡುವೆ 5 ಪಂದ್ಯಗಳು ನಡೆದಿದ್ದು, ಆರ್‌ಸಿಬಿ ತಂಡ 3 ಪಂದ್ಯಗಳನ್ನು ಗೆದ್ದರೆ, ಲಕ್ನೋ ಸೂಪರ್ ಜೈಂಟ್ಸ್ ಎರಡು ಪಂದ್ಯಗಳನ್ನು ಗೆದ್ದಿದೆ. ಇಬ್ಬರ ನಡುವಿನ ಕೊನೆಯ ಪಂದ್ಯ 2024 ರಲ್ಲಿ ನಡೆದಿತ್ತು. ಈ ಆವೃತ್ತಿಯಲ್ಲಿ ಎರಡೂ ತಂಡಗಳು ಮೊದಲ ಬಾರಿಗೆ ಮುಖಾಮುಖಿಯಾಗಲಿವೆ.
TV9kannada
ನಮ್ಮ ಸಮಗ್ರ ಸುದ್ದಿಗಳಿಗಾಗಿ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು WhatsApp Group:https://chat.whatsapp.com/KnDIfiBURQ9G5sLEJLqshk
Facebook page: https://www.facebook.com/samagrasudii
Sharechat: https://sharehat.com/profile/edu514826335?d=n
Twitter: https://twitter.com/SuddiSamagra
Threads: https://www.threads.net/@samagrasuddi.co.in
Instagram: https://www.instagram.com/samagrasuddi.co.in/
Telegram: https://t.me/+E1ubNzdguQ5jN2Y1