
ಐಪಿಎಲ್ 2025ರ 62 ನೇ ಪಂದ್ಯ ಮಂಗಳವಾರ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ರಾಜಸ್ಥಾನ ರಾಯಲ್ಸ್ 6 ವಿಕೆಟ್ಗಳ ಭರ್ಜರಿ ಜಯ ಸಾಧಿಸಿದೆ. ಮೊದಲು ಬ್ಯಾಟಿಂಗ್ ಮಾಡಿದ ಚೆನ್ನೈ ಸೂಪರ್ ಕಿಂಗ್ಸ್ 20 ಓವರ್‌ಗಳಲ್ಲಿ 8 ವಿಕೆಟ್ ನಷ್ಟಕ್ಕೆ 187 ರನ್ ಗಳಿಸಿತ್ತು. ಗುರಿಯನ್ನ ಬೆನ್ನಟ್ಟಿದ ರಾಜಸ್ಥಾನ್ ರಾಯಲ್ಸ್ 17.1 ಓವರ್‌ಗಳಲ್ಲಿ 4 ವಿಕೆಟ್ ಕಳೆದುಕೊಂಡು ಗುರಿ ತಲುಪಿತು.
ಐಪಿಎಲ್ 2025ರ 62 ನೇ ಪಂದ್ಯ ಮಂಗಳವಾರ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ರಾಜಸ್ಥಾನ ರಾಯಲ್ಸ್ 6 ವಿಕೆಟ್ಗಳ ಭರ್ಜರಿ ಜಯ ಸಾಧಿಸಿದೆ. ಮೊದಲು ಬ್ಯಾಟಿಂಗ್ ಮಾಡಿದ ಚೆನ್ನೈ ಸೂಪರ್ ಕಿಂಗ್ಸ್ 20 ಓವರ್‌ಗಳಲ್ಲಿ 8 ವಿಕೆಟ್ ನಷ್ಟಕ್ಕೆ 187 ರನ್ ಗಳಿಸಿತ್ತು. ಚೆನ್ನೈ ಪರ ಆಯುಷ್ ಮ್ಹಾತ್ರೆ 43 ಮತ್ತು ಡೆವಾಲ್ಡ್ ಬ್ರೆವಿಸ್ 42 ರನ್ ಗಳಿಸಿದ್ದರು. 188 ರನ್‌ಗಳ ಗುರಿಯನ್ನ ಬೆನ್ನಟ್ಟಿದ ರಾಜಸ್ಥಾನ್ ರಾಯಲ್ಸ್ 17.1 ಓವರ್‌ಗಳಲ್ಲಿ 4 ವಿಕೆಟ್ ಕಳೆದುಕೊಂಡು ಗುರಿ ತಲುಪಿತು. 14 ವರ್ಷದ ವೈಭವ್ ಸೂರ್ಯವಂಶಿ ಅರ್ಧಶತಕ ಸಿಡಿಸಿ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿತು.
188 ರನ್‌ಗಳ ಗುರಿ ಬೆನ್ನತ್ತಿದ ರಾಜಸ್ಥಾನ್ ರಾಯಲ್ಸ್‌ಗೆ ಯಶಸ್ವಿ ಜೈಸ್ವಾಲ್ ಹಾಗೂ ವೈಭವ್ ಉತ್ತಮ ಆರಂಭ ನೀಡಿದರು. ಅಬ್ಬರದ ಆಟಕ್ಕೆ ಮುಂದಾದ ಜೈಸ್ವಾಲ್ ನಾಲ್ಕನೇ ಓವರ್‌ನಲ್ಲಿ ಪೆವಿಲಿಯನ್‌ಗೆ ಮರಳಿದರು. ಆದರೆ ಕೇವಲ 19 ಎಸೆತಗಳಲ್ಲಿ 5 ಬೌಂಡರಿ, 2 ಸಿಕ್ಸರ್ ಸಹಿತ 36 ರನ್ ಗಳಿಸಿ ಸ್ಫೋಟಕ ಆರಂಭ ಒದಗಿಸಿದರು. ಆದರೆ ಸೂರ್ಯವಂಶಿ ಪವರ್ ಪ್ಲೇ ನಲ್ಲಿ ಮಂಕಾದರೂ ಆ ನಂತರ ಸಿಎಸ್ಕೆ ಬೌಲರ್ಗಳನ್ನ ಬೆಂಡೆತ್ತಿದ್ದರು. 33 ಎಸೆತಗಳನ್ನೆದುರಿಸಿದ ಅವರು ತಲಾ 4 ಬೌಂಡರಿ, 4 ಸಿಕ್ಸರ್ಗಗಳ ಸಹಿತ 57ರನ್ಗಳಿಸಿ 14ನೇ ಓವರ್‌ನಲ್ಲಿ ಔಟ್ ಆದರು.
ಜೈಸ್ವಾಲ್ ಔಟಾದಾಗ ಕೇವಲ 1 ರನ್ಗಳಿಸಿದ್ದ ವೈಭವ್ ನಾಯಕ ಸಂಜು ಸ್ಯಾಮ್ಸನ್ ಜೊತೆಗೂಡಿ 2ನೇ ವಿಕೆಟ್ಗೆ 59 ಎಸೆತಗಳಲ್ಲಿ 98 ರನ್‌ಗಳ ಜೊತೆಯಾಟ ನೀಡಿ ಪಂದ್ಯವನ್ನ ಸಿಎಸ್ಕೆಯಿಂದ ದೂರ ಮಾಡಿದ್ದರು. ನಾಯಕ ಸ್ಯಾಮ್ಸನ್ ಕೂಡ ಉತ್ತಮ ಪ್ರದರ್ಶನ ತೋರಿದರು. 31 ಎಸೆತಗಳಲ್ಲಿ 3 ಬೌಂಡರಿ ಹಾಗೂ 2 ಸಿಕ್ಸರ್ಗಳ ಸಹಿತ 41 ರನ್ಗಳಿಸಿ ಔಟ್ ಆದರು. ಇವರಿಬ್ಬರ ನಂತರ ಬಂದ ರಿಯಾನ್ ಪರಾಗ್ ಕೇವಲ 3 ರನ್ಗಳಿಸಿ ನೂರ್ ಅಹ್ಮದ್ ಬೌಲಿಂಗ್ನಲ್ಲಿ ಬೌಲ್ಡ್ ಆದರು.
ನಂತರ 4ನೇ ವಿಕೆಟ್ಗೆ ಜೊತೆಗೂಡಿದ ಧ್ರುವ್ ಜುರೆಲ್ ಹಾಗೂ ಶಿಮ್ರೋನ್ ಹೆಟ್ಮೇಯರ್ ಕೇವಲ 9 ಎಸೆತಗಳಲ್ಲಿ ಅಜೇಯ 30 ರನ್‌ಗಳ ಜೊತೆಯಾಟ ನೀಡಿ ತಂಡವನ್ನ ಗೆಲುವಿನ ಗಡಿ ದಾಟಿಸಿದರು.
ಚೆನ್ನೈ ಸೂಪರ್ ಕಿಂಗ್ಸ್ ಪರ ರವಿಚಂದ್ರನ್ ಅಶ್ವಿನ್ 41ಕ್ಕೆ 2, ನೂರ್ ಅಹ್ಮದ್ 42ಕ್ಕೆ1 ಅನ್ಶುಲ್ ಕಾಂಬೋಜ್ 21ಕ್ಕೆ1 ವಿಕೆಟ್ ಪಡೆದರು.
ತನ್ನ ಕೊನೆಯ ಲೀಗ್ ಪಂದ್ಯವನ್ನ ಇನ್ನು 17 ಎಸೆತಗಳಿರುವಂತೆ ಗೆದ್ದ ರಾಜಸ್ಥಾನ ರಾಯಲ್ಸ್ ಅಂಕಪಟ್ಟಿಯಲ್ಲಿ 9ನೇ ಸ್ಥಾನಿಯಾಗಿ ಅಂತ್ಯಗೊಳಿಸಿತು. ಇತ್ತ ಹೀನಾಯವಾಗಿ ಸೋತ ಚೆನ್ನೈ ಸೂಪರ್ ಕಿಂಗ್ಸ್ 10ನೇ ಸ್ಥಾನದಲ್ಲಿಯೇ ಉಳಿದುಕೊಂಡಿತು. ಸಿಎಸ್ಕೆ ತನ್ನ ಕೊನೆಯ ಪಂದ್ಯವನ್ನ ಗುಜರಾತ್ ಟೈಟನ್ಸ್ ವಿರುದ್ಧ ಮೇ 25 ರಂದು ಆಡಲಿದೆ. ಆ ಪಂದ್ಯವನ್ನ ಗೆದ್ದರೂ ಕೂಡ ಅಂಕಪಟ್ಟಿಯಲ್ಲಿ 10ನೇ ಸ್ಥಾನದಲ್ಲಿಯೇ ಉಳಿಯಲಿದೆ.
News 18 Kannada
ನಮ್ಮ ಸಮಗ್ರ ಸುದ್ದಿಗಳಿಗಾಗಿ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು WhatsApp Group:https://chat.whatsapp.com/KnDIfiBURQ9G5sLEJLqshk
Facebook page: https://www.facebook.com/samagrasudii
Sharechat: https://sharehat.com/profile/edu514826335?d=n
Twitter: https://twitter.com/SuddiSamagra
Threads: https://www.threads.net/@samagrasuddi.co.in
Instagram: https://www.instagram.com/samagrasuddi.co.in/
Telegram: https://t.me/+E1ubNzdguQ5jN2Y1