ರಾಜಸ್ಥಾನ ರಾಯಲ್ಸ್ ವಿರುದ್ಧದ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ತಂಡ 44 ರನ್‌ಗಳ ಅಂತರದಲ್ಲಿ ಸುಲಭ ಗೆಲವು ಸಾಧಿಸಿತು.

18ನೇ ಆವೃತ್ತಿಯ ಎರಡನೇ ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್ ಮತ್ತು ಎಸ್‌ಆರ್‌ಹೆಚ್ ತಂಡಗಳು ಮುಖಾಮುಖಿಯಾಗಿದ್ದವು, ಈ ಪಂದ್ಯದಲ್ಲಿ ಅಮೋಘ ಬ್ಯಾಟಿಂಗ್ ಪ್ರದರ್ಶಿಸಿದ ಸನ್‌ರೈಸರ್ಸ್ ಹೈದರಾಬಾದ್ ತಂಡ ಬರೋಬ್ಬರಿ 44 ರನ್‌ಗಳ ಅಂತರದಲ್ಲಿ ಸುಲಭ ಗೆಲವುದು ದಾಖಲಿಸಿತು.

ಸನ್‌ರೈಸರ್ಸ್ ಹೈದರಾಬಾದ್ ತಂಡದ ಬ್ಯಾಟರ್ಗಳು 2025ರ ಆವೃತ್ತಿಯಲ್ಲೂ ತಮ್ಮ ಸ್ಫೋಟಕ ಬ್ಯಾಟಿಂಗ್ ಆಟವನ್ನು ಮುಂದುವರಿಸಿದ್ದಾರೆ. ಕಳೆದ ವರ್ಷ ಆವೃತ್ತಿ ಪೂರ್ತಿ ಸಿಡಿಲಬ್ಬರದ ಬ್ಯಾಟಿಂಗ್ ಮೂಲಕ ದಾಖಲೆ ಮೇಲೆ ದಾಖಲೆ ಬರೆದಿದ್ದ ಹೈದರಾಬಾದ್ ತಂಡದ ಬ್ಯಾಟರ್ಗಳು, ಅದೇ ಮೈಂಡ್ಸೆಟ್ನಲ್ಲಿ ಆಡುತ್ತಿದ್ದಾರೆ. ಹೈದರಾಬಾದ್ನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಸ್ಟೇಡಿಯಂನಲ್ಲಿ ರಾಜಸ್ಥಾನ್ ರಾಯಲ್ಸ್ ಬೌಲರ್ಗಳನ್ನ ಬೆಂಡೆತ್ತುವ ಮೂಲಕ 18ನೇ ಆವೃತ್ತಿಯ ಮೊದಲ 200+ ಸ್ಕೋರ್ ಬಾರಿಸಿದೆ.
ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಹೈದರಾಬಾದ್ 20 ಓವರ್ಗಳಲ್ಲಿ 6 ವಿಕೆಟ್ ಕಳೆದುಕೊಂಡು 286 ರನ್‌ಗಳ ಬೃಹತ್ ಮೊತ್ತ ದಾಖಲಿಸಿದೆ. ಎಂದಿನಂತೆ ಟ್ರಾವಿಸ್ ಹೆಡ್ (67) ಸ್ಫೋಟಕ ಅರ್ಧಶತಕ ಸಿಡಿಸಿದರೆ, ಇದೇ ಆವೃತ್ತಿಯಲ್ಲಿ ಹೈದರಾಬಾದ್ ಸೇರಿರುವ ಇಶಾನ್ ಕಿಶನ್ ಅಜೇಯ ಶತಕ(106) ಸಿಡಿಸಿ ಬೃಹತ್ ಮೊತ್ತಕ್ಕೆ ಕಾರಣರಾದರು.
Source: News Kannada18