
ಚಂದ್ರಯಾನ-3 ಗಗನ ನೌಕೆಯ ಲ್ಯಾಂಡರ್ ವಿಕ್ರಮ್ ಚಂದ್ರನ ದಕ್ಷಿಣ ಧ್ರುವದಲ್ಲಿ ಯಶಸ್ವಿಯಾಗಿ ಸಾಫ್ಟ್ ಲ್ಯಾಂಡಿಂಗ್ ಆಗಿದೆ. ಈ ಮೂಲಕ ಇಸ್ರೋ ವಿಜ್ಞಾನಿಗಳು ಬಾಹ್ಯಾಕಾಶ ಲೋಕದಲ್ಲಿ ಹೊಸ ಚರಿತ್ರೆ ನಿರ್ಮಿಸಿದ್ದಾರೆ.
ನವದೆಹಲಿ: ಬಾಹ್ಯಾಕಾಶ ಕ್ಷೇತ್ರದಲ್ಲಿ ಇಂದು ಭಾರತ ಐತಿಹಾಸಿಕ ಮೈಲಿಗಲ್ಲು ಸ್ಥಾಪಿಸಿದೆ.
ಇಡೀ ವಿಶ್ವವೇ ಎದುರು ನೀಡುತ್ತಿದ್ದ ಚಂದ್ರಯಾನ-3 ಗಗನ ನೌಕೆಯ ಲ್ಯಾಂಡರ್ ವಿಕ್ರಮ್ ಅನ್ನು ಇಸ್ರೋ ವಿಜ್ಞಾನಿಗಳು ಸಂಜೆ 6:04ಕ್ಕೆ ಚಂದ್ರನ ಮೇಲೆ ಸಾಫ್ಟ್ ಲ್ಯಾಂಡಿಂಗ್ ಮಾಡಿದ್ದಾರೆ. ಈ ಮೂಲಕ ಚಂದ್ರನ ದಕ್ಷಿಣ ಧ್ರುವದಲ್ಲಿ ನೌಕೆಯನ್ನು ಯಶಸ್ವಿಯಾಗಿ ಇಳಿಸಿದ ಮೊದಲ ದೇಶವೆಂಬ ಹೆಗ್ಗಳಿಕೆಗೆ ಭಾರತ ಪಾತ್ರವಾಗಿದೆ.