ಹೋರಾಟದಿಂದ ಮಾತ್ರ ವ್ಯಕ್ತಿತ್ವ ರೂಪುಗೊಂಡು ಸದೃಢರಾಗಿರಲು ಸಾಧ್ಯ.

ಚಿತ್ರದುರ್ಗ ಆ. 15

ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817

ಹೋರಾಟದಿಂದ ಮಾತ್ರ ವ್ಯಕ್ತಿತ್ವ ರೂಪುಗೊಂಡು ಸದೃಢರಾಗಿರಲು ಸಾಧ್ಯ. ಈ ನಿಟ್ಟಿನಲ್ಲಿ ಸಂಘಟಿತರಾಗಿ ಪಕ್ಷವನ್ನು ಮುನ್ನಡೆಸಿಕೊಂಡು ಹೋಗುವ ಜವಾಬ್ದಾರಿ ಎಸ್ಸಿ. ಮೋರ್ಚಾ ಪದಾಧಿಕಾರಿಗಳ ಮೇಲಿದೆ ಎಂದು ಸಂಸದ ಗೋವಿಂದ ಎಂ.ಕಾರಜೋಳ ತಿಳಿಸಿದರು.

ಚಿತ್ರದುರ್ಗ ನಗರದ ಪತ್ರಿಕಾ ಭವನದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಭಾರತೀಯ ಜನತಾ ಪಾರ್ಟಿ ಎಸ್ಸಿ. ಮೋರ್ಚಾ ಜಿಲ್ಲಾ ಘಟಕದ ಪದಗ್ರಹಣ ಹಾಗೂ ಪದಾಧಿಕಾರಿಗಳ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, 2022 ರಲ್ಲಿ ಬಸವರಾಜ್ಬೊಮ್ಮಾಯಿರವರು ರಾಜ್ಯದ ಮುಖ್ಯಮಂತ್ರಿಯಾಗಿದ್ದಾಗ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗದವರಿಗೆ ಮೀಸಲಾತಿಯನ್ನು ಹೆಚ್ಚಿಸಿದರು. 2026 ರಲ್ಲಿ ಕಾಂಗ್ರೆಸ್ ಎಸ್ಸಿ.ಎಸ್ಟಿ.ಗಳಿಗೆ ಘೋರ ಅನ್ಯಾಯವೆಸಗಿದೆ. ಜನಸಂಖ್ಯೆಗನುಗುಣವಾಗಿ ಮೀಸಲಾತಿಯನ್ನು ಹೆಚ್ಚಳ ಮಾಡಿದ ಕೀರ್ತಿ ಬಿಜೆಪಿ.ಗೆ ಸಲ್ಲಬೇಕು. ಲಂಬಾಣಿ, ಭೋವಿ ಜನಾಂಗದವರನ್ನು ಪರಿಶಿಷ್ಟರ ಪಟ್ಟಿಯಿಂದ ತೆಗೆಯುತ್ತಾರೆಂದು ಕಾಂಗ್ರೆಸ್ ನಮ್ಮ ಪಕ್ಷದ ಮೇಲೆ ಅಪ ಪ್ರಚಾರ ನಡೆಸಿತು. ಇದರ ವಿರುದ್ದ ನೀವುಗಳು ಜಾಗೃತರಾಗಿರ ಬೇಕೆಂದು ಸಂಸದರು ಎಸ್ಸಿ. ಮೋರ್ಚಾ
ಪದಾಧಿಕಾರಿಗಳಿಗೆ ಕರೆ ನೀಡಿದರು.

ಹತ್ತು ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ಸರ್ಕಾರ ಸುಳ್ಳು ಪ್ರಚಾರ ನಡೆಸಿ ಪರಿಶಿಷ್ಟ ಜನಾಂಗದವರಿಗೆ ತಪ್ಪು ತಿಳುವಳಿಕೆ ಮೂಡಿಸಿತು. ಪದಾಧಿಕಾರಿಗಳು ಜಿಲ್ಲೆಯಾದ್ಯಂತ ಸಂಚರಿಸಿ ಕಾಂಗ್ರೆಸ್ ವೈಫಲ್ಯಗಳನ್ನು ಜನತೆಗೆ ತಿಳಿಸಿ. ಕೇಂದ್ರ ಬಿಜೆಪಿ. ಸರ್ಕಾರ ಯಾವುದೇ ಕಾರಣಕ್ಕೂ ಸಂವಿಧಾನ ಬದಲಾವಣೆ ಮಾಡಲ್ಲ. ಅಸ್ಪøಶ್ಯತೆ ಅಸಮಾನತೆ ಎಲ್ಲಿಯವರೆಗೂ ಜೀವಂತವಾಗಿರುತ್ತದೋ ಅಲ್ಲಿಯತನಕ ಮೀಸಲಾತಿ ಇರುತ್ತದೆಂದು ಪ್ರಧಾನಿ ನರೇಂದ್ರಮೋದಿರವರು ಸ್ಪಷ್ಟ ಪಡಿಸಿದ್ದಾರೆ. ಗಂಗಾ ಕಲ್ಯಾಣ ಯೋಜನೆಯಡಿ ಒಂದೊಂದು ತಾಲ್ಲೂಕಿಗೆ ಕನಿಷ್ಠ ಐವತ್ತು ಬೋರ್‍ವೆಲ್‍ಗಳನ್ನಾದರೂ ಕೊಡಬೇಕು. ಎಂದು ಸರ್ಕಾರವನ್ನು ಆಗ್ರಹಿಸಿದರು.

ದೇಶಕ್ಕೆ ಸ್ವಾತಂತ್ರ್ಯ ಬಂದ ನಂತರ ದಲಿತರ ಉದ್ದಾರಕ್ಕಾಗಿ ವಿಶೇಷ ಅಧಿವೇಶನ ಕರೆದು ಸಂವಿಧಾನಕ್ಕೆ ತಿದ್ದುಪಡಿ ತಂದವರು ಯಾರಾದರು ಇದ್ದರೆ ಅದು ಅಟಲ್ ಬಿಹಾರಿ ವಾಜಪೇಯಿರವರು 1950 ರಲ್ಲಿ ಸಂವಿಧಾನಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಮೀಸಲಾತಿ ಕಲ್ಪಿಸಿ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗದವರ ಬದುಕು ಸುಧಾರಣೆಯಾಗ ಬೇಕೆಂಬ ಕನಸು ಕಂಡಿದ್ದರು. ಅದು ಈಡೇರದಿದ್ದಾಗ ಮಂತ್ರಿ ಸ್ಥಾನಕ್ಕೆ ರಾಜಿನಾಮೆ ನೀಡಿ ಹೊರಬಂದರು. ಆಗ ಡಾ.ಬಾಬುಜಗಜೀವನರಾಂ ನೆಹರು ಸರ್ಕಾರದಲ್ಲಿದ್ದರೆಂದು ಹೇಳಿದರು.

ಮಾಜಿ ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ ಮಾತನಾಡಿ ಕಾಂಗ್ರೆಸ್ ಅಪ ಪ್ರಚಾರದಲ್ಲಿ ತೊಡಗಿದ್ದರಿಂದ 2023 ರ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ.ಗೆ ತೊಂದರೆಯಾಯಿತು. ಬಡವರಿಗೆ ಸಹಾಯ ಮಾಡುವ ವ್ಯವಸ್ಥೆಗೆ ಬದಲಾಗಿ ರಾಜ್ಯ ಸರ್ಕಾರ ಪರಿಶಿಷ್ಟ ಜಾತಿ, ಪರಿಶಿಷ್ಠ ವರ್ಗಗಳ ಅಭಿವೃದ್ದಿಗೆ ಬಳಸಬೇಕಾಗಿರುವ ಹಣವನ್ನು ಗ್ಯಾರೆಂಟಿ ಯೋಜನೆಗಳಿಗೆ ಉಪಯೋಗಿಸಿಕೊಳ್ಳುತ್ತಿದೆ. ಡಾ.ಬಾಬು ಜಗಜೀವನರಾಂರವರು ದೇಶದ ಪ್ರಧಾನಿಯಾಗುವ ಅವಕಾಶ ತಪ್ಪಿತೆಂದು ನೋವಿನಿಂದ ಹೇಳಿಕೊಂಡಿದ್ದಾರೆ.

ದೇಶದ ಸ್ವಾತಂತ್ರ್ಯಕ್ಕಾಗಿ ಹುಟ್ಟಿಕೊಂಡ ಕಾಂಗ್ರೆಸ್ನ್ನು ರಾಜಕೀಯಕ್ಕಾಗಿ ಬಳಸಿಕೊಳ್ಳಬಾರದೆಂದು ಮಹಾತ್ಮಗಾಂಧಿಯೇ ಸೂಚಿಸಿದ್ದರು. ಜಿಲ್ಲೆಯಲ್ಲಿ ಬಿಜೆಪಿ.ಗೆ ಮತ ನೀಡುವವರು ಬಹಳಷ್ಟಿದ್ದಾರೆ. ನಾಯಕರುಗಳ ಕೊರತೆಯಿದೆ. ಮುಂಬರುವ ಎಲ್ಲಾ ಚುನಾವಣೆಯಲ್ಲಿ ಸ್ಪರ್ಧಿಸಲು ನೀವುಗಳು ತಯಾರಾಗಿ ಎಂದು ಎಸ್ಸಿ. ಮೋರ್ಚಾ ಪದಾಧಿಕಾರಿಗಳಿಗೆ ತಿಳಿಸಿ. ಆಗ್ನೇಯ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಯಾವುದೇ ಆಸೆ ಆಮಿಷಗಳಿಗೆ ಬಲಿಯಾಗದೆ ಮೊದಲ ಪ್ರಾಶಸ್ತ್ಯದ ಮತ ನೀಡಿ ಸುರೇಶ್ ರವರನ್ನು ಗೆಲ್ಲಿಸುವಂತೆ
ಪದವೀಧರರಲ್ಲಿ ಜಿ.ಹೆಚ್.ತಿಪ್ಪಾರೆಡ್ಡಿ ಮನವಿ ಮಾಡಿದರು.

ಜಿಲ್ಲಾ ಕಾರ್ಯದರ್ಶಿ ಜಿ.ಹೆಚ್.ಮೋಹನ್ ಪ್ರಾಸ್ತಾವಿಕವಾಗಿ ಮಾತನಾಡುತ್ತ ದೇಶಭಕ್ತಿ, ಸಂಘಟನೆ, ಸಾಮಾಜಿಕ ಭದ್ರತೆ ಹಿನ್ನೆಲೆಯಲ್ಲಿ ಎಸ್ಸಿ. ಮೋರ್ಚಾ ಪದಾಧಿಕಾರಿಗಳ ಪದಗ್ರಹಣ ಮುಖ್ಯ. ಮೂರು ವರ್ಷಗಳಿಂದಲೂ ಕಾಂಗ್ರೆಸ್ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗದವರಿಗೆ ಅನ್ಯಾಯ ಮಾಡುತ್ತಿದೆ. ನ್ಯಾಯ ಕೊಡಿಸುವ ನಾಯಕತ್ವವನ್ನು ನೀವುಗಳು ಬೆಳೆಸಿಕೊಳ್ಳಿ ಎಂದು ಹೇಳಿದರು.

ಬಿಜೆಪಿ. ಎಸ್ಸಿ. ಮೋರ್ಚಾ ಜಿಲ್ಲಾಧ್ಯಕ್ಷರಾಗಿ ನೇಮಕಗೊಂಡ ಪರಶುರಾಂರವರಿಗೆ ಹೀಮದಿನ ಅಧ್ಯಕ್ಷರಾದ ತಿಪ್ಪೇಸ್ವಾಮಿ ಪಕ್ಷದ ಭಾವುಟ ನೀಡಿದರು, ಇದೇ ಸಂದರ್ಭದಲ್ಲಿ ಇತರೆ ಪದಾಧಿಕಾರಿಗಳು ಪದಗ್ರಹಣ ಮಾಡಿದರು.

ಬಿಜೆಪಿ.ಜಿಲ್ಲಾಧ್ಯಕ್ಷ ಕೆ.ಟಿ.ಕುಮಾರಸ್ವಾಮಿ, ಉಪಾಧ್ಯಕ್ಷ ಡಾ.ಸಿದ್ದಾರ್ಥ ಗುಂಡಾರ್ಪಿ, ವಿಧಾನಪರಿಷತ್ ಸದಸ್ಯ ಕೆ.ಎಸ್.ನವೀನ್, ಆಗ್ನೇಯ ಪದವೀಧರ ಕ್ಷೇತ್ರದ ಅಭ್ಯರ್ಥಿ ಸುರೇಶ್, ಮಾಜಿ ಅಧ್ಯಕ್ಷ ಎ.ಮುರಳಿ ,ಭಾರ್ಗವಿ ದ್ರಾವಿಡ್, ಹನುಮಂತೆಗೌಡ ವಿಧಾನಪರಿಷತ್ ಮಾಜಿ ಸದಸ್ಯ ಡಾ.ಎ.ಎಚ್ .ಶಿವಯೋಗಿಸ್ವಾಮಿ, ಪ್ರಧಾನ ಕಾರ್ಯದರ್ಶಿ ಮಾಧುರಿ ಗಿರೀಶ್, ನಾಗರಾಜ್, ಮಲ್ಲೇಶ್, ಬಾಳೆಕಾಯಿ ರಾಂದಾಸ್, ಮಂಜುಳಮ್ಮ, ರಾಜಶೇಖರ್ ವೇದಿಕೆಯಲ್ಲಿದ್ದರು. ಎಸ್ಸಿ. ಮೋರ್ಚಾ ನಿಕಟ ಪೂರ್ವ ಅಧ್ಯಕ್ಷ ತಿಪ್ಪೇಸ್ವಾಮಿ ಸ್ವಾಗತಿಸಿದರು.ಕೃಷ್ಣ ಮೂರ್ತಿ ಕಾರ್ಯಕ್ರಮ ನಿರೂಪಿಸಿದರು.

ನಮ್ಮ ಸಮಗ್ರ ಸುದ್ದಿಗಳಿಗಾಗಿ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು WhatsApp Group:https://chat.whatsapp.com/KnDIfiBURQ9G5sLEJLqshk

Facebook page: https://www.facebook.com/samagrasudii

Sharechat: https://sharehat.com/profile/edu514826335?d=n

Twitter: https://twitter.com/SuddiSamagra

Threads: https://www.threads.net/@samagrasuddi.co.in

Instagram: https://www.instagram.com/samagrasuddi.co.in/

Telegram: https://t.me/+E1ubNzdguQ5jN2Y1

Whats App Channel: https://whatsapp.com/channel/0029VbDbOsBD8SE2H0L3d40j

Leave a Reply

Your email address will not be published. Required fields are marked *