ಬೆಳಗಾವಿ: ಗೆಜೆಟೆಡ್ ಪ್ರೊಬೇಷನರ್ಸ್ ಹುದ್ದೆ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್ ಒಂದು ಹೊರಬಿದ್ದಿದೆ. ರಾಜ್ಯದಲ್ಲಿ ಖಾಲಿ ಇರುವಂತ 504 ಹುದ್ದೆಗಳ ಭರ್ತಿಗೆ ಆರ್ಥಿಕ ಇಲಾಖೆ ಗ್ರೀನ್ ಸಿಗ್ನಲ್ ನೀಡಿದೆ. ಈ ಮೂಲಕ ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ ನೀಡಿದೆ.

ಬೆಳಗಾವಿಯ ಸುವರ್ಣಸೌಧದಲ್ಲಿ ನಡೆಯುತ್ತಿರುವಂತ ಅಧಿವೇಶನದಲ್ಲಿ ವಿಧಾನಪರಿಷತ್ತಿನಲ್ಲಿ ಸದಸ್ಯ ನಿರಾಣಿ ಹಣಮಂತ್ ರುದ್ರಪ್ಪ ಕೇಳಿದಂತ ಪ್ರಶ್ನೆಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಉತ್ತರಿಸಿದ್ದಾರೆ.
ರಾಜ್ಯದ ಯಾವ ಯಾವ ಇಲಾಖೆಗಳಿಂದ ಖಾಲಿಯಿರುವ ಕೆಎಎಸ್ ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳ ನೇಮಕಾತಿಗಾಗಿ ಆರ್ಥಿ ಇಲಾಖೆಗೆ ಪ್ರಸ್ತಾವನೆ ಸಲ್ಲಿಕೆಯಾಗಿವೆ ಅಂತ ಕೇಳಿದ್ದಾರೆ. ಅದಕ್ಕೆ ಸಿಎಂ ಸಿದ್ಧರಾಮಯ್ಯ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ, ಗ್ರಾಮೀಣಾಭಿವೃದ್ಧಿ, ಕಂದಾಯ, ಪೊಲೀಸ್ ಇಲಾಖೆ, ಕಾರಾಗೃಹ ಇಲಾಖೆ, ವಾಣಿಜ್ಯ ತೆರಿಗೆಗಳ ಇಲಾಖೆ, ಖಜಾನೆ ಇಲಾಖೆ, ಸಹಕಾರ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಕಾರ್ಮಿಕ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಹುದ್ದೆಗಳ ನೇಮಕಾತಿಗೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದಿದ್ದಾರೆ.
ಎಷ್ಟು ಕೆಎಎಸ್ ಹುದ್ದೆಗಳ ನೇಮಕಾತಿಗೆ ಆರ್ಥಿಕ ಇಲಾಖೆ ಒಪ್ಪಿಗೆ ನೀಡಿದೆ ಎನ್ನುವ ಪ್ರಶ್ನೆಗೆ ಉತ್ತರಿಸಿರುವಂತ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು, ಆಡಳಿತ ಇಲಾಖೆಗೆ 656 ಹುದ್ದೆಗಳ ಭರ್ತಿಗೆ ಕೋರಲಾಗಿತ್ತು. ಅವುಗಳಲ್ಲಿ 504 ಹುದ್ದೆಗಳ ಭರ್ತಿಗೆ ಅನುಮತಿ ನೀಡಲಾಗಿದೆ ಎಂದು ತಿಳಿಸಿದ್ದಾರೆ.
ಯಾವ ಇಲಾಖೆಯಲ್ಲಿ ಎಷ್ಟು KAS ಹುದ್ದೆಗಳ ಭರ್ತಿಗೆ ಗ್ರೀನ್ ಸಿಗ್ನಲ್?
- ಸಿಬ್ಬಂದಿ ಮತ್ತು ಆಡಜಳಿತ ಸುಧಾರಣಾ ಇಲಾಖೆ – 85
- ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ – 55
- ಕಂದಾಯ ಇಲಾಖೆ – 76
- ಪೊಲೀಸ್ ಇಲಾಖೆ – 10
- ಕಾರಾಗೃಹ ಇಲಾಖೆ -03
- ವಾಣಿಜ್ಯ ತೆರಿಗೆ ಇಲಾಖೆ – 140
- ಖಜಾನೆ ಇಲಾಖೆ -48
- ಅಬಕಾರಿ ಇಲಾಖೆ – 10
- ಸಹಕಾರ ಇಲಾಖೆ – 21
- ಸಮಾಜ ಕಲ್ಯಾಣ ಇಲಾಖೆ – 27
- ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ – 07
- ಕಾರ್ಮಿಕ ಇಲಾಖೆ – 04
- ಕೌಶಲ್ಯಾಭಿವೃದ್ಧಿ ಇಲಾಖೆ – 03
- ಪ್ರವಾಸೋದ್ಯ ಇಲಾಖೆ – 02
- ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆ – 09
- ಯುವಜನ ಸಬಲೀಕರಣ ಮತ್ತು ಕ್ರೀಢಾ ಇಲಾಖೆ – 04


ನಮ್ಮ ಸಮಗ್ರ ಸುದ್ದಿಗಳಿಗಾಗಿ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
WhatsApp Group : https://chat.whatsapp.com/KnDIfiBURQ9G5sLEJLqshk
Facebook page: https://www.facebook.com/samagrasudii
Sharechat: https://sharechat.com/profile/edu514826335?d=n
Twitter: https://twitter.com/SuddiSamagra
Threads: https://www.threads.net/@samagrasuddi.co.in
Instagram: https://www.instagram.com/samagrasuddi.co.in/
Telegram: https://t.me/+E1ubNzdguQ5jN2Y1