ವರದಿ ಮತ್ತು ಫೋಟೋ ಕೃಪೆ ವೇದಮೂರ್ತಿ ಭೀಮಸಮುದ್ರ ಮೊ : 8088076203
ಭೀಮಸಮುದ್ರ:
ಸ್ವಚ್ಛತಾ ಹಿ ಸೇವಾ ಅಭಿಯಾನದ ಅಂಗವಾಗಿ ಭೀಮಸಮುದ್ರ ಗ್ರಾಮದ ಜೆಎಸ್ಡಬ್ಲ್ಯು ಬೊಮ್ಮನ್ ಕಂಪನಿ ಹಾಗೂ ಚಿತ್ರದುರ್ಗ ಫೋರ್ಟ್ ಲಯನ್ಸ್ ರಕ್ತದಾನ ಕೇಂದ್ರದ ಸಹಯೋಗದಲ್ಲಿ ಜೆಎಸ್ಡಬ್ಲ್ಯು ಕೇಂದ್ರದಲ್ಲಿ ರಕ್ತದಾನ ಶಿಬಿರವನ್ನು ಆಯೋಜಿಸಲಾಗಿತ್ತು.
ಶಿಬಿರದಲ್ಲಿ ಜೆಎಸ್ಡಬ್ಲ್ಯು ಗಣಿಯ ಅಧಿಕಾರಿಗಳು, ಸಿಬ್ಬಂದಿ ಹಾಗೂ ಕಾರ್ಮಿಕರು ಉತ್ಸಾಹದಿಂದ ಭಾಗವಹಿಸಿ 20ಕ್ಕೂ ಹೆಚ್ಚು ಮಂದಿ ರಕ್ತದಾನ ಮಾಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಜೆಎಸ್ಡಬ್ಲ್ಯು ಗಣಿಯ ಡೆಪ್ಯುಟಿ ಮ್ಯಾನೇಜರ್ ರವಿಕಿರಣ್, ರಕ್ತದಾನವು ಅತ್ಯಂತ ಶ್ರೇಷ್ಠವಾದ ಮಾನವೀಯ ಸೇವೆಯಾಗಿದೆ. ಅಪಘಾತ, ಹೃದಯಾಘಾತ ಸೇರಿದಂತೆ ತುರ್ತು ಸಂದರ್ಭಗಳಲ್ಲಿ ರಕ್ತದ ಅವಶ್ಯಕತೆ ಹೆಚ್ಚಿರುತ್ತದೆ. ರಕ್ತದಾನ ಮಾಡುವ ಮೂಲಕ ಮತ್ತೊಬ್ಬರ ಜೀವ ಉಳಿಸಲು ಸಾಧ್ಯವಾಗುತ್ತದೆ. ಆರೋಗ್ಯವಂತ ವ್ಯಕ್ತಿಗಳು ನಿಯಮಿತವಾಗಿ ರಕ್ತದಾನ ಮಾಡುವ ಮೂಲಕ ಸಮಾಜಕ್ಕೆ ಅಮೂಲ್ಯವಾದ ಸೇವೆ ಸಲ್ಲಿಸಬಹುದು ಎಂದು ತಿಳಿಸಿದರು.
ರಕ್ತದಾನ ಶಿಬಿರವನ್ನು ಯಶಸ್ವಿಗೊಳಿಸಲು ಚಿತ್ರದುರ್ಗ ಫೋರ್ಟ್ ಲಯನ್ಸ್ ರಕ್ತ ಕೇಂದ್ರದ ವೈದ್ಯಕೀಯ ತಂಡದ ಡಾ. ನಾಗಾರ್ಜುನ (MBBS), ತಂತ್ರಜ್ಞರಾದ ಸಿದ್ದೇಶ್, ಕಿರಣ್ ಕುಮಾರ್ ಹಾಗೂ ಓಂಪ್ರಕಾಶ್, ಶುಶ್ರೂಷಕಿಯರಾದ ಶ್ರೀಮತಿ ರೇಣುಕಾ ಮತ್ತು ಶ್ರೀ ನಿಶಾ ಅವರು ಸಹಕರಿಸಿದರು.
ಕಾರ್ಯಕ್ರಮದ ಕೊನೆಯಲ್ಲಿ ಜೆಎಸ್ಡಬ್ಲ್ಯು ಗಣಿಯ ಡೆಪ್ಯುಟಿ ಮ್ಯಾನೇಜರ್ ರವಿಕಿರಣ್ ಅವರು ರಕ್ತದಾನ ಮಾಡಿದ ಎಲ್ಲ ದಾನಿಗಳು ಹಾಗೂ ಶಿಬಿರದ ಯಶಸ್ಸಿಗೆ ಸಹಕರಿಸಿದ ವೈದ್ಯಕೀಯ ತಂಡಕ್ಕೆ ಧನ್ಯವಾದಗಳನ್ನು ಸಲ್ಲಿಸಿದರು.
ನಮ್ಮ ಸಮಗ್ರ ಸುದ್ದಿಗಳಿಗಾಗಿ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು WhatsApp Group:https://chat.whatsapp.com/KnDIfiBURQ9G5sLEJLqshk
Facebook page: https://www.facebook.com/samagrasudii
Sharechat: https://sharehat.com/profile/edu514826335?d=n
Twitter: https://twitter.com/SuddiSamagra
Threads: https://www.threads.net/@samagrasuddi.co.in
Instagram: https://www.instagram.com/samagrasuddi.co.in/
Telegram: https://t.me/+E1ubNzdguQ5jN2Y1
Whats App Channel: https://whatsapp.com/channel/0029VbDbOsBD8SE2H0L3d40j