ಕಳಸಾ ಬಂಡೂರಿ ಯೋಜನೆಗೆ ಸಿಕ್ತು ಕೇಂದ್ರ ಸರ್ಕಾರದಿಂದ ಗ್ರೀನ್ ಸಿಗ್ನಲ್..!

ಬೆಂಗಳೂರು: ಕಳಸಾ ಭಂಡೂರಿ ಯೋಜನೆಗೆ ಕೇಂದ್ರ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ. ಈ ಬಗ್ಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮಾಹಿತಿ ಹಂಚಿಕೊಂಡಿದ್ದಾರೆ. ಕೇಂದ್ರ ಜಲ ಆಯೋಗವು ಕರ್ನಾಟಕದ ಕಳಸಾ ಬಂಡೂರಿ ವಿಸ್ತೃತ ಯೋಜನಾ ವರದಿಗೆ ಚಾಲನೆ ನೀಡಲು ಅಸ್ತು ಎಂದಿದೆ ಎಂದಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಪ್ರಹ್ಲಾದ್ ಜೋಶಿ ಅವರು, ಕರ್ನಾಟಕದ ಕಳಸಾ ಭಂಡೂರಿ ವಿಸ್ತೃತ ವರದಿಗೆ ಕೇಂದ್ರ ಸರ್ಕಾರವೂ ಅನುಮತಿಯನ್ನು ನೀಡಿದೆ. ಕರ್ನಾಟಕಕ್ಕೆ ಅತ್ಯಂತ ಅವಶ್ಯವಾಗಿದ್ದ ಈ ಯೋಜನೆಗೆ ಅನುಮತಿ ನಿಡೀದ್ದಕ್ಕಾಗಿ ಪ್ರಧಾನಿ ಮೋದಿ, ಗೃಹ ಸಚಿವ ಅಮಿತ್ ಶಾ, ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರಿಗೆ ಧನ್ಯವಾದ ತಿಳಿಸುತ್ತೇನೆ. ಜೊತೆಗೆ ಕಳಸಾ ಭಂಡೂರಿ ಯೋಜನೆಯ ಅನುಮೋದನೆಗಾಗಿ ರಚನಾತ್ಮಕ ಯೋಜನಾ ವರದಿಯನ್ನು ನಿರೂಪಿಸಿದ ಸಿಎಂ ಬಸವರಾಜ್ ಬೊಮ್ಮಾಯಿ, ಬಿಎಸ್ ಯಡಿಯೂರಪ್ಪ ಹಾಗೂ ನೀರಾವರಿ ಸಚಿವ ಗೋವಿಂದ ಕಾರಜೋಳ ಅವರಿಗೆ ಧನ್ಯವಾದ ತಿಳಿಸುತ್ತೇನೆ ಎಂದಿದ್ದಾರೆ.

The post ಕಳಸಾ ಬಂಡೂರಿ ಯೋಜನೆಗೆ ಸಿಕ್ತು ಕೇಂದ್ರ ಸರ್ಕಾರದಿಂದ ಗ್ರೀನ್ ಸಿಗ್ನಲ್..! first appeared on Kannada News | suddione.

from ರಾಷ್ಟ್ರೀಯ ಸುದ್ದಿ – Kannada News | suddione https://ift.tt/ohtJylC
via IFTTT

Leave a Reply

Your email address will not be published. Required fields are marked *