ಸಾಮಾಜಿಕ ನ್ಯಾಯಕ್ಕಾಗಿ ಚಳ್ಳಕೆರೆಯಲ್ಲಿ ಜು.19ಕ್ಕೆ ಜಾಗೃತಿ ಸಮಾವೇಶ; ಎಸ್‌ಟಿ ಸಮುದಾಯಕ್ಕೆ ಕಲುವೇಹಳ್ಳಿ ಮಹಾಂತೇಶ್ ಕರೆ.

ಚಿತ್ರದುರ್ಗ ಜು. 17

ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817

ರಾಜ್ಯದಲ್ಲಿ ಮೂರನೇ ಸ್ಥಾನದಲ್ಲಿರುವ ನಾಯಕ ಸಮುದಾಯಕ್ಕೆ ಸಂವಿಧಾನ ಬದ್ಧವಾಗಿ ನೀಡಬೇಕಾಗಿದ್ದ ಮೀಸಲಾತಿ ವಿಚಾರದಲ್ಲಿ ಅನ್ಯಾಯವಾಗಿದೆ ಎಂದು ರಾಜ್ಯ ಎಸ್.ಟಿ. ಮೋರ್ಚಾದ ಕಾರ್ಯದರ್ಶಿ ಕಲುವೇಹಳ್ಳಿ ಮಹಾಂತೇಶ್ ಆರೋಪಿಸಿದರು.

ಚಿತ್ರದುರ್ಗ ನಗರದ ಪತ್ರಿಕಾ ಭವನದಲ್ಲಿ ಶುಕ್ರವಾರ ಜುಲೈ 19ರಂದು ಚಳ್ಳಕೆರೆಯಲ್ಲಿ ರಾಘವೇಂದ್ರ ಕಲ್ಯಾಣ ಮಂಟಪದಲ್ಲಿ ನಡೆಯಲಿರುವ ಸಾಮಾಜಿಕ ನ್ಯಾಯಕ್ಕಾಗಿ ಜಾಗೃತಿ ಸಮಾವೇಶದ ಹಿನ್ನೆಲೆಯಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು. ನಮ್ಮ ಸಂವಿಧಾನಕ್ಕೆ ಅನುಗುಣವಾಗಿ ಮೀಸಲಾತಿಯನ್ನು ಯಾವುದೇ ಸರ್ಕಾರಗಳು ನೀಡುತ್ತಿಲ್ಲ. 2022 ಅಕ್ಟೋಬರ್‍ನಲ್ಲಿ ಬಿಜೆಪಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಎಸ್ಸಿ ಮೀಸಲಾತಿ 15% ರಿಂದ 17% ಎಸ್ ಟಿ ಮೀಸಲಾತಿ 3% ರಿಂದ 7% ಕೈ ಹೆಚ್ಚಿಸುವ ನಿರ್ಧಾರ ಕೈಗೊಂಡರು. ಆದೇ ಸಂದರ್ಭದಲ್ಲಿ ಸರ್ವಪಕ್ಷಗಳ ಸಭೆ ಕರೆದು ಅಭಿಪ್ರಾಯ ಪಡೆದರು. ಜನಾಂಗಕ್ಕೆ ಸರ್ಕಾರದಲ್ಲಿ ವಾಲ್ಮೀಕಿ ಜನಾಂಗಕ್ಕೆ ಮೀಸಲಾತಿ ನೀಡಿ ವಿಧೇಯಕ ಶಾಸನಸಭೆಯ ಒಪ್ಪಿಗೆ ಪಡೆದು ರಾಜ್ಯಪಾಲರ ಅಂಗೀಕಾರವಾಗಿತ್ತು, ಕಾಂಗ್ರೆಸ್ ಸರ್ಕಾರ ಇದನ್ನು ಜಾರಿಗೊಳಿಸದೆ, ಮೋಸ ಮಾಡುತ್ತಿದೆ ಎಂದು ದೂರಿದ ಅವರು. ಮೀಸಲಾತಿಯನ್ನು ಹೆಚ್ಚಿಸಿ ಕಾನೂನಾತ್ಮಕ ಹಾಗೂ ಶಾಸನಬದ್ಧ ಅಧಿಕಾರ ನೀಡಿದ್ದ ಸರಕಾರದ ಆಶಯವನ್ನು ನಾವು ಜನರಿಗೆ ತಿಳಿಸುವಲ್ಲಿ ವಿಫಲರಾಗಿದ್ದೇವೆ. ಕಾಂಗ್ರೆಸ್ ಸರಕಾರವು ಮೀಸಲಾತಿ ವಿಷಯದಲ್ಲಿ ಅಪಪ್ರಚಾರ ಮಾಡಿ ದಿಕ್ಕುತಪ್ಪಿಸಿದೆ ಎಂದರು.

ಕಳೆದ 30 ವರ್ಷಗಳಿಂದಲೂ ಮೀಸಲಾತಿ ನೀಡುವಂತೆ ಹೋರಾಟ ನಡೆಸುತ್ತಾ ಬಂದಿದ್ದರೂ ಸರಕಾರಗಳು ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ನೀಡುವಲ್ಲಿ ವಿಫಲವಾಗಿವೆ. ಇದರಲ್ಲಿ ಕಳೆದ ಆಡಳಿತದ ಬಿಜೆಪಿ ಮೀಸಲಾತಿ ಹೆಚ್ಚಿಸಿತ್ತು. ಕಾಂಗ್ರೆಸ್ ಸರಕಾರಕ್ಕೆ ಮೀಸಲಾತಿ ನೀಡುವ ಇಚ್ಚಾಶಕ್ತಿಯ ಕೊರತೆ ಇದೆ. ಜುಲೈ 19ರಂದು ಚಳ್ಳಕೆರೆಯಲ್ಲಿ ಸಾಮಾಜಿಕ ನ್ಯಾಯಕ್ಕಾಗಿ ಜಾಗೃತಿ ಸಮಾವೇಶ ನಡೆಸಲಾಗುತ್ತಿದೆ. ಈ ಸಮಾವೇಶಕ್ಕೆ ಸಮುದಾಯದ ಆ ಎಲ್ಲರೂ ಪಕ್ಷಾತೀತವಾಗಿ ಆಗಮಿಸಿ ಸಮುದಾಯದ ಬಲ ಪ್ರದರ್ಶಿಸಬೇಕಿದೆ. ಈ ಸಂಬಂಧ ಸ್ಥಳೀಯ ಮುಖಂಡರು ತಮ್ಮ ವ್ಯಾಪ್ತಿಯ ನಾಯಕ ಸಮುದಾಯದವರಿಗೆ ಅಗತ್ಯ ಮಾಹಿತಿ ನೀಡಿ ಸಮಾವೇಶಕ್ಕೆ ಬರಲು ಪ್ರೇರೇಪಿಸಬೇಕು ಎಂದು ಮನವಿ ಮಾಡಿದರು.

ರಾಜ್ಯ ಎಸ್‍ಟಿ ಮೋರ್ಚಾ ಉಪಾಧ್ಯಕ್ಷರಾದ ಅನಿಲ್ ಕುಮಾರ್ ಮಾತನಾಡಿ, ಈ ಹಿಂದೆ ಬಿಜೆಪಿ ಹೆಚ್ಚಳ ಮಾಡಿದ್ದ ಎಸ್ಸಿ ಎಸ್ಟಿ ಮೀಸಲಾತಿ ಕಡಿತದ ಹಿಂದೆ ಕಾಂಗ್ರೆಸ್ ಸರ್ಕಾರದ ಕೈವಾಡ ಇದೆ. ನಮ್ಮ ಕರ್ನಾಟಕ ರಾಜ್ಯದಲ್ಲಿ ಮೂರನೇ ಅತಿ ದೊಡ್ಡ ಸಮುದಾಯವಾಗಿರುವ ನಾಯಕ ಸಮುದಾಯಕ್ಕೆ, ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ನೀಡಬೇಕು ಎಂದು ಸುಮಾರು 30 ವರ್ಷಗಳಿಂದ ಹೋರಾಟ ಮಾಡುತ್ತಾ ಬಂದಿದ್ದೇವೆ. ಯಾವುದೇ ಸರ್ಕಾರಗಳು ಕೂಡ. ನಮ್ಮ ಮನವಿಯನ್ನು ಗಂಭೀರವಾಗಿ ಪರಿಗಣಿಸುತ್ತಿಲ್ಲ. ಆದ್ದರಿಂದ ಅಂಬೇಡ್ಕರ್ ಅವರ ಸಂವಿಧಾನದ ಪ್ರಕಾರ ಎಸ್ಸಿ ಎಸ್ಟಿ ಅವರಿಗೆ ಮೀಸಲಾತಿಯನ್ನು ನೀಡಲೇ ಬೇಕು ಎಂಬ ಉದ್ದೇಶಕ್ಕಾಗಿ ಬರುವ ಭಾನುವಾರ ಜುಲೈ 19ನೇ ರಂದು ಚಳ್ಳಕೆರೆ ಪಟ್ಟಣದಲ್ಲಿ ದೊಡ್ಡ ಸಮಾವೇಶವನ್ನು ಮಾಡಲಿದ್ದೇವೆ. ಆದ್ದರಿಂದ ಈ ಭಾಗದ ಎಲ್ಲಾ ನಾಯಕ ಸಮುದಾಯದ ಬಂಧುಗಳು ಅತಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಅದೇ ರೀತಿ ಸರ್ಕಾರಕ್ಕೆ ಬಿಸಿ ಮುಟ್ಟಿಸುವ ಕೆಲಸವಾಗಬೇಕು ಎಂದರು.

ಬಿಜೆಪಿಯ ಜಿಲ್ಲಾಧ್ಯಕ್ಷರಾದ ಕೆ.ಟಿ.ಕುಮಾರಸ್ವಾಮಿ, ಮಾತನಾಡಿ. “ಕಳೆದ 30 ವರ್ಷಗಳಿಂದ ನಮ್ಮ ಹೋರಾಟ ನಿರಂತರವಾಗಿ ನಡೆಯುತ್ತಿದೆ. ಅಂಬೇಡ್ಕರ್ ಅವರು ನೀಡಿರುವ ಸಂವಿಧಾನದ ಪ್ರಕಾರ ನಮ್ಮ ಮೀಸಲಾತಿ ಯನ್ನು ನೀಡಬೇಕು. ನೀಡದಿದ್ದರೆ ಮುಂದಿನ ದಿನಗಳಲ್ಲಿ ವಾಲ್ಮೀಕಿ ಜನಾಂಗ ನಿಮಗೆ ತಕ್ಕ ಪಾಠ ಕಲಿಸುತ್ತದೆ ಎಂದು ಎಚ್ಚರಿಸಿ ಮೀಸಲಾತಿ ಹೆಚ್ಚಳ ಮಾಡಿದ್ದು ಮಾತ್ರವಲ್ಲ ಕಾನೂನಾತ್ಮಕ ಸುರಕ್ಷತೆ ಒದಗಿಸಿ ವಿಧೇಯಕ ರೂಪಿಸಿ, ಶಾಸನ ಸಭೆಯ ಒಪ್ಪಿಗೆ ಪಡೆದು ರಾಜ್ಯಪಾಲರ ಅಂಗೀಕಾರ ಪಡೆಯಲಾಗಿತ್ತು. ಆದರೆ ಕಾಂಗ್ರೆಸ್ ಸರ್ಕಾರ ಇದನ್ನು ಪರಿಗಣಿಸದೆ ಇತರೆ ಜಾತಿಗಳನ್ನು ಎಸ್‍ಟಿಗೆ ಸೇರ್ಪಡೆ ಮಾಡಲು ಹೊರಟಿದೆ. ನಮ್ಮ ಮೀಸಲಾತಿ ದಿನಗಳಲ್ಲಿ ನೀಡದಿದ್ದಲ್ಲಿ ್ಲ ನಾವು ವಿಧಾನಸೌಧಕ್ಕೆ ಮುತ್ತಿಗೆ ಹಾಕುತ್ತೇವೆ ಎಂದರು.

ಕಾರ್ಯಕ್ರಮದಲ್ಲಿ ಮಾಜಿ ಸಚಿವರಾದ ರಮೇಶ್ ಜಾರಕಿಹೊಳಿ, ಬಿ. ಶ್ರೀರಾಮುಲು, ಶಿವನಗೌಡ ನಾಯಕ, ರಾಜುಗೌಡ, ಬಿಜೆಪಿ ಎಸ್.ಟಿ. ಮೋರ್ಚಾ ರಾಜ್ಯಾಧ್ಯಕ್ಷ ಶ್ರೀ ಬಂಗಾರ ಹನುಮಂತ, ವಿಧಾನ ಪರಿಷತ್ ಸದಸ್ಯೆ ಶ್ರೀಮತಿ ಹೇಮಲತಾ ನಾಯಕ, ಶಾಂತರಾಮ್ ಸಿದ್ದಿ, ಮಾಜಿ ಶಾಸಕರಾದ ತಿಪ್ಪೇಸ್ವಾಮಿ ಎಸ್., ಎಸ್.ವಿ. ರಾಮಚಂದ್ರಪ್ಪ, ತಿಪ್ಪರಾಜ್, ಮಾಜಿ ವಿಧಾನ ಪರಿಷತ್ ಸದಸ್ಯ ಸಿದ್ದರಾಜು, ಮಾಜಿ ಸಂಸದ, ಪಕೀರಪ್ಪ, ಶ್ರೀ ದೇವೇಂದ್ರಪ್ಪ, ಬಿ.ವಿ. ನಾಯಕ, ರಾಜಾ ಅಮರೇಶ್ ನಾಯಕ ಸೇರಿದಂತೆ ಎಸ್.ಟಿ. ಸಮುದಾಯದ ಬಿಜೆಪಿ ಮುಖಂಡರು, ಜಿಲ್ಲೆಯ ನಾಯಕರು, ವಿವಿಧ ಹಂತಗಳ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ.

ಎಸ್.ಟಿ. ಮೋರ್ಚಾದ ಜಿಲ್ಲಾಧ್ಯಕ್ಷ ಜೆ.ಬಿ.ರಾಜು ಮಾತನಾಡಿ ಬರುವ ಭಾನುವಾರದ ಸಮಾವೇಶಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಈ ಕಾರ್ಯಕ್ರಮ ಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿದರು.

ಬಿಜೆಪಿಯ ಎಸ್‍ಟಿ ಮೋರ್ಚಾ ಕಾರ್ಯಕಾರಣಿ ಮಾಜಿ ಸದಸ್ಯರಾದ ಪಾಪೇಶ್ ನಾಯಕ್, ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯರಾದ ರಾಮ್‍ದಾಸ್, ಜಿಲ್ಲಾ ಕಾರ್ಯದರ್ಶಿ ಪಾಲಯ್ಯ, ಜಿಲ್ಲಾ ವಕ್ತಾರ ನಾಗರಾಜ್ ಬೇದ್ರೇ, ರಾಜ್ಯ ಎಸ್.ಟಿ. ಮೋರ್ಚಾದ ಕಾರ್ಯಕಾರಿಣಿ ಸದಸ್ಯರಾದ ಕವನ ರಾಘವೇಂದ್ರ, ಯುವ ಮುಖಂಡರಾದ ಕಾಂಚನ ಭಾಗವಹಿಸಿದ್ದರು.

Follow the ಸಮಗ್ರ ಸುದ್ದಿ Telegram Channel: https://t.me/SamagraSuddi

ಸಮಗ್ರ ಸುದ್ದಿ channel on WhatsApp: https://whatsapp.com/channel/0029VbDbOsBD8SE2H0L3d40j

Leave a Reply

Your email address will not be published. Required fields are marked *