ರಾಜ್ಯ ಬಿಜೆಪಿ ನಾಯಕ ಜಗದೀಶ್ ಹಿರೇಮನಿ ನಿಧನಕ್ಕೆ ಕಂಬನಿ; ವಿಜಯೇಂದ್ರ ಸೇರಿ ಗಣ್ಯರಿಂದ ಶ್ರದ್ಧಾಂಜಲಿ.

ಚಿತ್ರದುರ್ಗ, ಮೇ. 07

ವರದಿ ಮತ್ತು ಪೋಟೋ ಕೃಪೆ, ಸುರೇಶ್ ಪಟ್ಟಣ್

ರಾಜ್ಯ ಬಿಜೆಪಿಯ ಪ್ರಬಲ ನಾಯಕ, ಪಕ್ಷದ ಮಾಜಿ ಕಾರ್ಯದರ್ಶಿ ಹಾಗೂ ಸಜ್ಜನ ರಾಜಕಾರಣಿ ಎಂದೇ ಗುರುತಿಸಿಕೊಂಡಿದ್ದ ಜಗದೀಶ್ ಹಿರೇಮನಿ (55) ಅವರು ಬುಧವಾರ ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರ ಅಕಾಲಿಕ ನಿಧನವು ಬಿಜೆಪಿ ವಲಯದಲ್ಲಿ ಹಾಗೂ ಅವರ ಅಭಿಮಾನಿಗಳಲ್ಲಿ ತೀವ್ರ ಆಘಾತವನ್ನುಂಟು ಮಾಡಿದೆ.

ಪ್ರಸ್ತುತ ರಾಜ್ಯ ಮೂಲಸೌಕರ್ಯ ಪುನರ್ನಿರ್ಮಾಣ ಸಮಿತಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಜಗದೀಶ್ ಹಿರೇಮನಿ ಅವರಿಗೆ ಇಂದು ದಿಢೀರ್ ಹೃದಯಾಘಾತ ಸಂಭವಿಸಿದೆ. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದಿದ್ದಾರೆ.

“ಜಗದೀಶ್ ಹಿರೇಮನಿ ಅವರು ಬಿಜೆಪಿಯ ಮಾಜಿ ಕಾರ್ಯದರ್ಶಿಯಾಗಿ ಪಕ್ಷದ ಸಂಘಟನೆಯಲ್ಲಿ ಮಹತ್ತರ ಪಾತ್ರ ವಹಿಸಿದ್ದರು. ನಿಷ್ಠಾವಂತ ಕಾರ್ಯಕರ್ತರಾಗಿ ಬೆಳೆದು ಬಂದಿದ್ದ ಅವರು, ಅನೇಕ ಯುವ ನಾಯಕರಿಗೆ ರಾಜಕೀಯ ಮಾರ್ಗದರ್ಶಕರಾಗಿದ್ದರು.

ಜಗದೀಶ್ ಹಿರೇಮನಿ ಅವರ ಪಾರ್ಥಿವ ಶರೀರವನ್ನು ಬಾಗಲಕೋಟೆಗೆ ಸಾಗಿಸುವ ಮಾರ್ಗ ಮಧ್ಯದಲ್ಲಿ ಇಂದು ರಾತ್ರಿ ಚಿತ್ರದುರ್ಗದ ಬಿಜೆಪಿ ಜಿಲ್ಲಾ ಕಚೇರಿ ಬಳಿ ಬಂದಾಗ ಮಾದಾರ ಚನ್ನಯ್ಯ ಗುರುಪೀಠದ ಶ್ರೀ ಬಸವಮೂರ್ತಿ ಮಾದಾರ ಚನ್ನಯ್ಯ ಶ್ರೀಗಳು, ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ.ವೈ.ವಿಜಯೇಂದ್ರ ಹಾಗೂ ಸಂಸದರಾದ ಗೋವಿಂದ ಕಾರಜೋಳ ಶಾಸಕರಾದ ಎಂ.ಚಂದ್ರಪ್ಪ ಸೇರಿದಂತೆ ಇತರರು ಉಪಸ್ಥಿತರಿದ್ದು ಶ್ರದ್ಧಾಂಜಲಿಯನ್ನು ಸಲ್ಲಿಸಿದರು.

Leave a Reply

Your email address will not be published. Required fields are marked *