
ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817
ಚಿತ್ರದುರ್ಗ ನ. 27: ಎಸ್.ಜೆ.ಎಂ. ದಂತ ಮಹಾವಿದ್ಯಾಲಯ ಮತ್ತು ಆಸ್ಪತ್ರೆವತಿಯಿಂದ ನ. 28ರ ಗುರುವಾರ ಬೆಳಿಗ್ಗೆ 10.30ಕ್ಕೆ ಕಾಲೇಜಿನ ಆವರಣದ ಶಿ.ಮು.ಶ.ಸಭಾಂಗಣದಲ್ಲಿ ಕನ್ನಡಕಲರವ 2024ರ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಕಾಲೇಜಿನ ಪ್ರಾಂಶುಪಾಲರಾದ
ಡಾ.ಎಂ.ಹೆಚ್.ರಘುನಾಥ್ ರೆಡ್ಡಿ ತಿಳಿಸಿದ್ದಾರೆ.
ಕಾರ್ಯಕ್ರಮದಲ್ಲಿ ಸಾಹಿತಿಗಳು, ಹಾಗೂ ಜಿಲ್ಲಾ ಶರಣ ಸಾಹಿತ್ಯ ಪರಿಷತ್ತು, ಕಾರ್ಯದರ್ಶಿಗಳಾದ ಹುರುಳಿ ಎಂ ಬಸವರಾಜ್ ಉಪನ್ಯಾಸನೀಡಲಿದ್ದಾರೆ. ಅಧ್ಯಕ್ಷತೆಯನ್ನು ಆಡಳಿತ ಮಂಡಳಿ, ಎಸ್.ಜೆ.ಎಂ. ವಿದ್ಯಾಪೀಠ (ರಿ) ಮತ್ತು ಶ್ರೀ ಜಗದ್ಗುರು ಮುರುಘರಾಜೇಂದ್ರ ಬೃಹನ್ಮಠ ಅಧ್ಯಕ್ಷರಾದ ಶಿವಯೋಗಿ ಸಿ. ಕಳಸದ ವಹಿಸಲಿದ್ದಾರೆ. ಸಾನಿಧ್ಯವನ್ನು ಎಸ್.ಜೆ.ಎಂ. ವಿದ್ಯಾಪೀಠ (ರಿ) ಮತ್ತು ಶ್ರೀ ಜಗದ್ಗುರು
ಮುರುಘರಾಜೇಂದ್ರ ಬೃಹನ್ಮಠದ ಆಡಳಿತ ಮಂಡಳಿ ಸದಸ್ಯರಾದ ಡಾ. ಬಸವಕುಮಾರ ಸ್ವಾಮೀಜಿ ವಹಿಸಲಿದ್ದಾರೆ. ಎಸ್.ಜೆ.ಎಂ. ವಿದ್ಯಾಪೀಠ (ರಿ) ಮತ್ತು ಶ್ರೀ ಜಗದ್ಗುರು ಮುರುಘರಾಜೇಂದ್ರ ಬೃಹನ್ಮಠದ ಆಡಳಿತ ಮಂಡಳಿ ಸದಸ್ಯರಾದ ಡಾ. ಪಿ.ಎಸ್. ಶಂಕರ್,ಎಸ್.ಎನ್. ಚಂದ್ರಶೇಖರ್ ಆಗಮಿಸಲಿದ್ದಾರೆ ಎಂದು ಪ್ರಾಂಶುಪಾಲರಾದ ಡಾ.ಎಂ.ಹೆಚ್. ರಘುನಾಥ ರೆಡ್ಡಿ ತಿಳಿಸಿದ್ದಾರೆ.