
ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817
ಚಿತ್ರದುರ್ಗ ಮೇ. 30 ಕಮಲ್ ಹಾಸನ್ ಅವರ “ಥಗ್ಲೈಪ್” ಸಿನಿಮಾವನ್ನು ಕರ್ನಾಟಕದಲ್ಲಿ ಬಿಡುಗಡೆ ಮಾಡದಂತೆ ತಡೆಯುವಂತೆ ಆಗ್ರಹಿಸಿ ಇಂದು ಟಿ.ಎ. ನಾರಾಯಣ ಗೌಡ ನೇತೃತ್ವದ ಕರ್ನಾಟಕ ರಕ್ಷಣಾ ವೇದಿಕೆ ಪ್ರತಿಭಟನೆಯನ್ನು ನಡೆಸಿ ಜಿಲ್ಲಾಡಳಿತಕ್ಕೆ ಮನವಿ ಮಾಡಿತು.
ಕನ್ನಡಿಗರ ಭಾವನೆಗಳಿಗೆ ಧಕ್ಕೆ ತರುವಂತೆ ತಮಿಳು ಭಾಷೆಯಿಂದ ಕನ್ನಡ ಭಾಷೆಯ ಉಗಮವಾಯಿತು ಎಂಬ ತಪ್ಪು ಮತ್ತು
ದುರುದ್ದೇಶಪೂರಿತ ಹೇಳಿಕೆಯನ್ನು ನಟ-ರಾಜಕಾರಣಿ ಕಮಲ್ ಹಾಸನ್ ಅವರು ಹೇಳಿಕೆ ನೀಡಿರುವುದು ಸುಳ್ಳು ಮತ್ತು ಆಧಾರತಹಿರ ಹೇಳಿಕೆಯು ಕನ್ನಡ ಭಾಷೆಯ ಶ್ರೀಮಂತ ಇತಿಹಾಸ, ಸಂಸ್ಕೃತಿ ಮತ್ತು ಸ್ವಾಭಿಮಾನಕ್ಕೆ ತೀವ್ರ ಅಘಾತವನ್ನುಂಟು ಮಾಡಿದೆ.
ಕನ್ನಡಿಗರಿಂದ ತೀವ್ರ ಖಂಡನೆ ಮತ್ತು ವಿರೋಧ ವ್ಯಕ್ತವಾದರೂ ಕಮಲ್‌ಹಾಸನ್ ಅವರು ತಮ್ಮ ತಪ್ಪನ್ನು ಒಪ್ಪಿಕೊಂಡು
ಕ್ಷಮೆಯಾಚಿಸದೇ ತಮ್ಮ ಹೇಳಿಕೆಗೆ ಬದ್ದರಾಗಿರುವುದು ಕನ್ನಡಿಗರ ತೀವ್ರ ಆಕ್ರೋಶವನ್ನು ಮತ್ತಷ್ಟು ಹೆಚ್ಚಿಸಿದೆ ಕನ್ನಡ ಭಾಷೆ ಮತ್ತು
ಸಂಸ್ಕೃತಿಯ ರಕ್ಷಣೆಗಾಗಿ ಕಾರ್ಯನಿರ್ವಹಿಸುತ್ತಿರುವ ಕರ್ನಾಟಕ ರಕ್ಷಣಾ ವೇದಿಕೆಯು ಕಮಲ್ ಹಾಸನ್ ಅವರ ಈ ಧೋರಣೆಯನ್ನು ತೀವ್ರವಾಗಿ ಖಂಡಿಸುತ್ತದೆ.
ಈ ಹಿನ್ನೆಲೆಯಲ್ಲಿ ಅವರ ಹೊಸ ಚಿತ್ರ “ಥಗ್‌ಲೈಪ್” ಇದರ ಬಿಡುಗಡೆ ಜೂನ್ ೫ ರಂದು ನಿಗಧಿಯಾಗಿರುವ ಈ ಸಿನಿಮಾವನ್ನು
ಕರ್ನಾಟಕದಲ್ಲಿ ಬಿಡುಗಡೆ ಮಾಡದಂತೆ ತಡೆಯುವ ನಿರ್ಧಾರವನ್ನು ನಾವು ಕೈಗೊಂಡಿದ್ದು, ಈ ಚಿತ್ರದ ವಿತರಕರು ತಮ್ಮ
ಹೂಡಿಕೆಯನ್ನು ರಕ್ಷಿಸಿಕೊಳ್ಳಲು ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕೆಂದು ಒತ್ತಾಯಿಸಿದ್ದು, ಅದರೆ ಕರ್ನಾಟಕದಲ್ಲಿ ಈ ಚಿತ್ರದ
ಬಿಡುಗಡೆಗೆ ಯಾವುದೇ ಸಹಕಾರವನ್ನು ನೀಡದಂತೆ ಮೂಲಕ ಕರ್ನಾಟಕ ವಾಣಿಜ್ಯ ಮಂಡಳಿಗೆ, ಕನ್ನಡ ಚಿತ್ರರಂಗಕ್ಕೆ ಮತ್ತು
ಸರ್ಕಾರವನ್ನು ಕರ್ನಾಟಕ ರಕ್ಷಣಾ ವೇದಿಕೆ ಚಿತ್ರದುರ್ಗ ಜಿಲ್ಲಾ ಸಮಿತಿಯು ಒತ್ತಾಯಿಸಿದೆ.
ಇದೇ ಸಂದರ್ಭದಲ್ಲಿ ನಟ ಕಮಲ್‌ಹಾಸನ್ ರವರ ಭಾವಚಿತ್ರಕ್ಕೆ ಬೆಂಕಿ ಹಚ್ಚುವುದರ ಮೂಲಕ ತಮ್ಮ ಆಕ್ರೋಶವನ್ನು ಕರ್ನಾಟಕ
ರಕ್ಷಣಾ ವೇದಿಕೆಯ ಕಾರ್ಯಕರ್ತರು ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷರಾದ ಟಿ.ರಮೇಶ್, ಪ್ರಧಾನ ಕಾರ್ಯದರ್ಶಿ ವಿಜಯಕುಮಾರ್, ಚಿತ್ರದುರ್ಗ ತಾಲೂಕು ಅಧ್ಯಕ್ಷ
ರಾಜಪ್ಪ, ನಗರ ಅಧ್ಯಕ್ಷ ಪಿ.ರಮೇಶ್‌ಪ್ರಧಾನ ಸಂಚಾಲಕ ಎಸ್.ಬಿ.ಗಣೇಶ್, ಜಿಲ್ಲಾ ಉಪಾಧ್ಯಕ್ಷ ಆರ್.ಬಿ.ಲಕ್ಷ್ಮಣ, ತಾಲ್ಲೂಕು
ಪ್ರಧಾನ ಕಾರ್ಯದರ್ಶಿ ನೀಲಕಂಠ,ಜಿಲ್ಲಾ ಯುವಘಟಕ ಅಧ್ಯಕ್ಷ ಘನಶ್ಯಾಮ್, ಜಿ. ಸಂಚಾಲಕ ಪ್ರಸಾದ್ ಮಲ್ಲ, ಜಿ.ಸಂ.ಕಾಯದರ್ಶಿ ರಮೇಶ್, ವಿದ್ಯಾರ್ಥಿಘಟಕ ರಾಮು.ಹಿರಿಯೂರು ತಾಲ್ಲೂಕು ಅಧ್ಯಕ್ಷರು ರಾಮಕೃಷ್ಣಪ್ಪ, ಪ್ರಧಾನ ಕಾರ್ಯದರ್ಶಿ
ದಾದಾಪೀರ್, ಮಹಿಳಾಘಟಕ ಜಿಲ್ಲಾಧ್ಯಕ್ಷ ಚಂದ್ರಕಲಾ, ತಾಲೂಕು ಅಧ್ಯಕ್ಷೆ ದ್ರಾಕ್ಷಾಯಿಣಿ. ಸಂಘಟನಾ ಕಾರ್ಯದರ್ಶಿ ಮಂಜುಳ
ಸುಮ ಅಂಬಿಕಾ ವಿದ್ಯಾರ್ಥಿಘಟಕದ ಮನು ಮಹದೇವಯ್ಯ ಉಮೇಶ್ ರಮೇಶ್ ಜಯಪ್ಪ ಹೆಚ್.ಪ್ರಶಾಂತ್‌ರೆಡ್ಡಿ ಮಾಧ್ಯಮ
ಸಲಹೆಗಾರರು ಕಾರ್ತಿಕ ರಾಜೀವ ರುದ್ರೇಶ್ ಭಾಗವಹಿಸಿದ್ದರು.
ನಮ್ಮ ಸಮಗ್ರ ಸುದ್ದಿಗಳಿಗಾಗಿ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು WhatsApp Group:https://chat.whatsapp.com/KnDIfiBURQ9G5sLEJLqshk
Facebook page: https://www.facebook.com/samagrasudii
Sharechat: https://sharehat.com/profile/edu514826335?d=n
Twitter: https://twitter.com/SuddiSamagra
Threads: https://www.threads.net/@samagrasuddi.co.in
Instagram: https://www.instagram.com/samagrasuddi.co.in/
Telegram: https://t.me/+E1ubNzdguQ5jN2Y1