ಅ,18: ಕರ್ನಾಟಕದಲ್ಲಿ ವಿವಿಧ ಸರ್ಕಾರಿ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ರಾಜ್ಯ ಹೈಕೋರ್ಟ್ ಮಹತ್ವದ ಆದೇಶವೊಂದನ್ನು ನೀಡಿದೆ. ಹಳೆಯ ನೇಮಕಾತಿ ಪ್ರಕ್ರಿಯೆಗಳಿಗೆ 2023ರ ಫೆಬ್ರವರಿ 1ರಂದು ಸರ್ಕಾರ ಹೊರಡಿಸಿದ್ದ ಹೊಸ ಸುತ್ತೋಲೆಯನ್ನು ಅನ್ವಯಿಸಿರುವುದು ಕಾನೂನುಬಾಹಿರ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದ್ದು, ಈ ಹಿಂದಿನ ಆಯ್ಕೆಪಟ್ಟಿ ಹಾಗೂ ವೃಂದ ಹಂಚಿಕೆಯನ್ನು (Cadre Allocation) ಮರುಪರಿಶೀಲಿಸುವಂತೆ ಸರ್ಕಾರಕ್ಕೆ ನಿರ್ದೇಶನ ನೀಡಿದೆ.
ನ್ಯಾಯಮೂರ್ತಿ ಡಿ.ಕೆ. ಸಿಂಗ್ ಹಾಗೂ ಹೆಚ್. ಶಾಂತಿಭೂಷಣ್ ಅವರಿದ್ದ ದ್ವಿಸದಸ್ಯ ಪೀಠ ಈ ಆದೇಶ ಹೊರಡಿಸಿದೆ. ರಾಜ್ಯದಲ್ಲಿ ಈ ಹಿಂದೆ ನಡೆದಿದ್ದ ಸಹಾಯಕ ಇಂಜಿನಿಯರ್, ಪ್ರಾಥಮಿಕ ಶಾಲಾ ಶಿಕ್ಷಕರು, ವಿಶೇಷ ಮೀಸಲುಪಡೆಯ (KSRP) ಸಬ್ ಇನ್ಸ್ಪೆಕ್ಟರ್ ಹಾಗೂ ಸಹಾಯಕ ಪ್ರಾಧ್ಯಾಪಕರ ಹುದ್ದೆಗಳ ನೇಮಕಾತಿ ಪ್ರಕ್ರಿಯೆಗಳಿಗೆ ಈ ಆದೇಶ ಅನ್ವಯವಾಗಲಿದೆ.
ಪ್ರಕರಣದ ಹಿನ್ನೆಲೆ ಮತ್ತು ಕೋರ್ಟ್ ಸೂಚನೆ: 2023ರ ಫೆಬ್ರವರಿಯಲ್ಲಿ ಸರ್ಕಾರವು ನೇಮಕಾತಿ ನಿಯಮಗಳು ಹಾಗೂ ಕಲ್ಯಾಣ ಕರ್ನಾಟಕದ 371(ಜೆ) ಮೀಸಲಾತಿ ನಿಯಮಗಳಲ್ಲಿ ಬದಲಾವಣೆ ತಂದು ಸುತ್ತೋಲೆ ಹೊರಡಿಸಿತ್ತು. ಆದರೆ, ನೇಮಕಾತಿ ಅಧಿಸೂಚನೆ ಹೊರಡಿಸಿದಾಗ ಚಾಲ್ತಿಯಲ್ಲಿದ್ದ ನಿಯಮಗಳ ಆಧಾರದ ಮೇಲೆಯೇ ವೃಂದ ಹಂಚಿಕೆ ನಡೆಯಬೇಕು; ಮಧ್ಯದಲ್ಲಿ ಬಂದ ಹೊಸ ನಿಯಮಗಳನ್ನು ಪೂರ್ವಾನ್ವಯಗೊಳಿಸುವಂತಿಲ್ಲ ಎಂದು ಹೈಕೋರ್ಟ್ ತಿಳಿಸಿದೆ.
ಅಲ್ಲದೆ, ನ್ಯಾಯಾಲಯವು ಒಂದು ಸ್ಪಷ್ಟ ಷರತ್ತನ್ನು ವಿಧಿಸಿದ್ದು, ಕೇವಲ ವೃಂದಗಳ ಹಂಚಿಕೆಯನ್ನು ಮಾತ್ರ ಹಳೆಯ ನಿಯಮಾವಳಿಗಳ ಪ್ರಕಾರ ಮರುಪರಿಶೀಲಿಸಬೇಕು. ಯಾವುದೇ ಕಾರಣಕ್ಕೂ ಈಗಾಗಲೇ ಆಯ್ಕೆಯಾಗಿರುವ ಅಭ್ಯರ್ಥಿಗಳ ಅರ್ಹತೆ ಅಥವಾ ಅಂಕಪಟ್ಟಿಗಳನ್ನು ಮತ್ತೆ ಪರಿಶೀಲಿಸುವಂತಿಲ್ಲ ಎಂದು ಆದೇಶದಲ್ಲಿ ಕಟ್ಟುನಿಟ್ಟಾಗಿ ಉಲ್ಲೇಖಿಸಿದೆ.
ನಮ್ಮ ಸಮಗ್ರ ಸುದ್ದಿಗಳಿಗಾಗಿ ಕೆಳಗಿನ Social Media ಪುಟಗಳಿಗೆ Follow / Subscribe ಮಾಡಿ.
🟢 WhatsApp Group
Join WhatsApp Group
🔵 Facebook Page
Follow Facebook Page
⚫ Twitter / X
Follow on X (Twitter)
🟣 Threads
Follow on Threads
Follow on Instagram
🔵 Telegram
Join Telegram Channel
🟢 WhatsApp Channel
Follow WhatsApp Channel
📰 ಸಮಗ್ರ ಸುದ್ದಿ
ನಿಖರತೆಗೆ ಮತ್ತೊಂದು ಹೆಸರು
📢 ಸುದ್ದಿ • ಮಾಹಿತಿ • ಶಿಕ್ಷಣ • ಉದ್ಯೋಗ • ಕರ್ನಾಟಕ • ದೇಶ • ಜಗತ್ತು