ಉದ್ಯೋಗದ ನಿರೀಕ್ಷೆಯಲ್ಲಿರುವ ಪದವೀಧರರಿಗೆ ಕರ್ನಾಟಕ ಉಚ್ಛ ನ್ಯಾಯಾಲಯವು (ಹೈಕೋರ್ಟ್) ಭರ್ಜರಿ ಸಿಹಿಸುದ್ದಿ ನೀಡಿದೆ. ನ್ಯಾಯಾಲಯದಲ್ಲಿ ಖಾಲಿ ಇರುವ ಒಟ್ಟು 101 ಹುದ್ದೆಗಳ ಭರ್ತಿಗೆ ಎರಡು ಪ್ರತ್ಯೇಕ ಅಧಿಸೂಚನೆಗಳನ್ನು ಹೊರಡಿಸಲಾಗಿದ್ದು, ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅಸಿಸ್ಟೆಂಟ್ ಕೋರ್ಟ್ ಸೆಕ್ರೆಟರಿ (73 ಹುದ್ದೆಗಳು) ಹಾಗೂ ಡೇಟಾ ಎಂಟ್ರಿ ಸಹಾಯಕ (28 ಹುದ್ದೆಗಳು) ಹುದ್ದೆಗಳಿಗೆ ನೇಮಕಾತಿ ನಡೆಯಲಿದ್ದು, ಇದರ ಸಂಪೂರ್ಣ ವಿವರಗಳು ಕೆಳಗಿನಂತಿವೆ.
1. ಅಸಿಸ್ಟೆಂಟ್ ಕೋರ್ಟ್ ಸೆಕ್ರೆಟರಿ (73 ಹುದ್ದೆಗಳು)
- ಹುದ್ದೆಗಳ ಹಂಚಿಕೆ: ಒಟ್ಟು 73 ಹುದ್ದೆಗಳಿದ್ದು, ಇದರಲ್ಲಿ 11 ಹುದ್ದೆಗಳನ್ನು ಕಲ್ಯಾಣ ಕರ್ನಾಟಕ ಭಾಗದ ಅಭ್ಯರ್ಥಿಗಳಿಗೆ ಮೀಸಲಿಡಲಾಗಿದೆ.
- ಶೈಕ್ಷಣಿಕ ಅರ್ಹತೆ: ಪದವಿಯೊಂದಿಗೆ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಅಥವಾ ಇತರ ಮಾನ್ಯತೆ ಹೊಂದಿರುವ ಮಂಡಳಿ ನಡೆಸುವ ಆಂಗ್ಲ ಶೀಘ್ರಲಿಪಿ (Shorthand) ಪ್ರೌಢ ದರ್ಜೆ ಅಥವಾ ಆಂಗ್ಲ ಶೀಘ್ರಲಿಪಿ ಮತ್ತು ಬೆರಳಚ್ಚು ಪ್ರೌಢ ದರ್ಜೆಯ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಅಥವಾ ತಾಂತ್ರಿಕ ಪರೀಕ್ಷಾ ಮಂಡಳಿ ನಡೆಸುವ ಆಂಗ್ಲ ಕಮರ್ಷಿಯಲ್ ಪ್ರಾಕ್ಟೀಸ್/ಸೆಕ್ರೆಟೇರಿಯಲ್ ಪ್ರಾಕ್ಟೀಸ್ ಡಿಪ್ಲೊಮಾ ಪರೀಕ್ಷೆಯಲ್ಲಿ ಪಾಸ್ ಆಗಿರಬೇಕು. ಸಾಮಾನ್ಯ ಕಂಪ್ಯೂಟರ್ ನಿರ್ವಹಣಾ ಜ್ಞಾನ ಕಡ್ಡಾಯ.
- ವೇತನ ಶ್ರೇಣಿ: ಮಾಸಿಕ ರೂ. 44,900 ರಿಂದ ರೂ. 1,42,400.
- ವಯೋಮಿತಿ: ಕನಿಷ್ಠ 18 ವರ್ಷ ಪೂರೈಸಿರಬೇಕು. ಗರಿಷ್ಠ ವಯೋಮಿತಿ: ಸಾಮಾನ್ಯ ವರ್ಗಕ್ಕೆ 40 ವರ್ಷ, ಪ್ರವರ್ಗ 2ಎ, 2ಬಿ, 3ಎ, 3ಬಿಗೆ 43 ವರ್ಷ ಹಾಗೂ ಪ.ಜಾ/ಪ.ಪಂ/ಪ್ರವರ್ಗ 1 ಅಭ್ಯರ್ಥಿಗಳಿಗೆ 45 ವರ್ಷ.
- ಅರ್ಜಿ ಶುಲ್ಕ: ಸಾಮಾನ್ಯ ಮತ್ತು ಒಬಿಸಿ (2A, 2B, 3A, 3B) ಅಭ್ಯರ್ಥಿಗಳಿಗೆ ರೂ. 500. ಪ.ಜಾ, ಪ.ಪಂ, ಪ್ರವರ್ಗ 1 ಮತ್ತು ವಿಕಲಚೇತನ ಅಭ್ಯರ್ಥಿಗಳಿಗೆ ರೂ. 250.
- ಆಯ್ಕೆ ವಿಧಾನ: ಶೀಘ್ರಲಿಪಿ ಪರೀಕ್ಷೆ ಹಾಗೂ ಸಂದರ್ಶನ.
- ಪ್ರಮುಖ ದಿನಾಂಕ: ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಜುಲೈ 30.
ಸೂಚನೆ: ಈ ಹುದ್ದೆಗಳಿಗೆ ಮಾರ್ಚ್ 2026 ರಲ್ಲಿಯೇ ಅಧಿಸೂಚನೆ ಪ್ರಕಟಿಸಲಾಗಿತ್ತು. ಆ ಸಂದರ್ಭದಲ್ಲಿ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಹೊಸದಾಗಿ ಅರ್ಜಿ ಸಲ್ಲಿಸುವುದು ಮತ್ತು ಶುಲ್ಕ ಪಾವತಿಸುವ ಅವಶ್ಯಕತೆ ಇಲ್ಲ
2. ಡೇಟಾ ಎಂಟ್ರಿ ಸಹಾಯಕ (28 ಹುದ್ದೆಗಳು)
- ಹುದ್ದೆಗಳ ಹಂಚಿಕೆ: ಒಟ್ಟು 28 ಹುದ್ದೆಗಳಿದ್ದು, ಇದರಲ್ಲಿ 7 ಹುದ್ದೆಗಳನ್ನು ಕಲ್ಯಾಣ ಕರ್ನಾಟಕ ಅಭ್ಯರ್ಥಿಗಳಿಗೆ ಮೀಸಲಿಡಲಾಗಿದೆ.
- ಶೈಕ್ಷಣಿಕ ಅರ್ಹತೆ: ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ ಉತ್ತೀರ್ಣರಾಗಿರಬೇಕು. ಕನ್ನಡ ಮತ್ತು ಇಂಗ್ಲಿಷ್ ಬೆರಳಚ್ಚು ಪ್ರೌಢ ದರ್ಜೆ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರಬೇಕು ಹಾಗೂ ಕಂಪ್ಯೂಟರ್ ನಿರ್ವಹಣಾ ಜ್ಞಾನ ಇರಬೇಕು.
- ವೇತನ ಶ್ರೇಣಿ: ಮಾಸಿಕ ರೂ. 25,500 ರಿಂದ ರೂ. 81,100.
- ವಯೋಮಿತಿ: ಗರಿಷ್ಠ ವಯೋಮಿತಿ: ಸಾಮಾನ್ಯ ವರ್ಗಕ್ಕೆ 40 ವರ್ಷ, ಪ್ರವರ್ಗ 2ಎ, 2ಬಿ, 3ಎ, 3ಬಿಗೆ 3 ವರ್ಷಗಳ ಸಡಿಲಿಕೆ (43 ವರ್ಷ) ಹಾಗೂ ಪ.ಜಾ/ಪ.ಪಂ ಮತ್ತು ಪ್ರವರ್ಗ 1 ಅಭ್ಯರ್ಥಿಗಳಿಗೆ 5 ವರ್ಷಗಳ ಸಡಿಲಿಕೆ (45 ವರ್ಷ) ನೀಡಲಾಗಿದೆ.
- ಅರ್ಜಿ ಶುಲ್ಕ: ಸಾಮಾನ್ಯ ಮತ್ತು ಒಬಿಸಿ (2A, 2B, 3A, 3B) ಅಭ್ಯರ್ಥಿಗಳಿಗೆ ರೂ. 350. ಪ.ಜಾ, ಪ.ಪಂ, ಮತ್ತು ಪ್ರವರ್ಗ 1 ಅಭ್ಯರ್ಥಿಗಳಿಗೆ ರೂ. 200.
- ಆಯ್ಕೆ ವಿಧಾನ: ಬೆರಳಚ್ಚು ಪರೀಕ್ಷೆ ಮತ್ತು ಸಂದರ್ಶನ.
- ಪ್ರಮುಖ ದಿನಾಂಕ: ಜೂನ್ 29 ರಿಂದ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಪ್ರಾರಂಭವಾಗಿದ್ದು, ಅರ್ಜಿ ಸಲ್ಲಿಸಲು ಜುಲೈ 28 ಕಡೆಯ ದಿನಾಂಕವಾಗಿದೆ.
ಅರ್ಜಿ ಸಲ್ಲಿಸುವ ವಿಧಾನ:
ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕರ್ನಾಟಕ ಹೈಕೋರ್ಟ್ನ ಅಧಿಕೃತ ವೆಬ್ಸೈಟ್ judiciary.karnataka.gov.in ಗೆ ಭೇಟಿ ನೀಡಿ, ಆನ್ಲೈನ್ ಮೂಲಕ ನಿಗದಿತ ದಿನಾಂಕದೊಳಗೆ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿ ಮತ್ತು ಅಧಿಕೃತ ಅಧಿಸೂಚನೆಗಳಿಗಾಗಿ ಇದೇ ಜಾಲತಾಣವನ್ನು ಸಂಪರ್ಕಿಸಬಹುದು.
Follow the ಸಮಗ್ರ ಸುದ್ದಿ Telegram Channel: https://t.me/SamagraSuddi
ಸಮಗ್ರ ಸುದ್ದಿ channel on WhatsApp: