ಕರ್ನಾಟಕ ಉಚ್ಛ ನ್ಯಾಯಾಲಯವು (Karnataka High Court) ‘ಡಿ’ ದರ್ಜೆ ನೌಕರರ ಭರ್ತಿಗೆ ಅಧಿಕೃತ ಅಧಿಸೂಚನೆ ಹೊರಡಿಸಿದೆ. ಜವಾನ, ವಾಚ್ಮನ್ ಸೇರಿದಂತೆ ಒಟ್ಟು 101 ಹುದ್ದೆಗಳಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಎಸ್ಎಸ್ಎಲ್ಸಿ (SSLC) ಅಥವಾ 10ನೇ ತರಗತಿ ಉತ್ತೀರ್ಣರಾದ ಉದ್ಯೋಗಾಕಾಂಕ್ಷಿಗಳಿಗೆ ಇದು ಅತ್ಯುತ್ತಮ ಅವಕಾಶವಾಗಿದೆ. ಈ ನೇಮಕಾತಿಯ ಸಂಪೂರ್ಣ ವಿವರ ಈ ಕೆಳಗಿನಂತಿದೆ:
ಹುದ್ದೆಗಳ ವರ್ಗೀಕರಣ (ಒಟ್ಟು ಹುದ್ದೆಗಳು: 101)
| ಹುದ್ದೆಯ ಹೆಸರು | ಖಾಲಿ ಇರುವ ಹುದ್ದೆಗಳ ಸಂಖ್ಯೆ |
| ಜವಾನ / ವಾಚ್ಮನ್ | 93 |
| ಲಿಫ್ಟ್ ಅಟೆಂಡೆಂಟ್ | 05 |
| ಸಹಾಯಕ ಬೈಂಡರ್ | 01 |
| ಟೈಲರ್ | 01 |
| ದೋಬಿ | 01 |
ಶೈಕ್ಷಣಿಕ ಅರ್ಹತೆ ಮತ್ತು ವಯೋಮಿತಿ
- ವಿದ್ಯಾರ್ಹತೆ: ಅಭ್ಯರ್ಥಿಗಳು ಮಾನ್ಯತೆ ಪಡೆದ ಶಿಕ್ಷಣ ಮಂಡಳಿಯಿಂದ ಕಡ್ಡಾಯವಾಗಿ 10ನೇ ತರಗತಿ (SSLC) ಉತ್ತೀರ್ಣರಾಗಿರಬೇಕು.
- ವಯೋಮಿತಿ: ಅರ್ಜಿ ಸಲ್ಲಿಸಲು ಕನಿಷ್ಠ 18 ವರ್ಷ ಪೂರೈಸಿರಬೇಕು ಹಾಗೂ ಗರಿಷ್ಠ 40 ವರ್ಷ ಮೀರಿರಬಾರದು.
- ವಯೋಮಿತಿ ಸಡಿಲಿಕೆ (Age Relaxation):
- ಪ್ರವರ್ಗ 2A, 2B, 3A, 3B ಅಭ್ಯರ್ಥಿಗಳಿಗೆ: 3 ವರ್ಷ
- ಪರಿಶಿಷ್ಟ ಜಾತಿ (SC), ಪರಿಶಿಷ್ಟ ಪಂಗಡ (ST) ಮತ್ತು ಪ್ರವರ್ಗ-1ರ ಅಭ್ಯರ್ಥಿಗಳಿಗೆ: 5 ವರ್ಷ
ಅರ್ಜಿ ಶುಲ್ಕದ ವಿವರ
- ಸಾಮಾನ್ಯ ಮತ್ತು ಇತರೆ ಹಿಂದುಳಿದ ವರ್ಗದ (OBC) ಅಭ್ಯರ್ಥಿಗಳಿಗೆ: ₹200/-
- ಪರಿಶಿಷ್ಟ ಜಾತಿ (SC), ಪರಿಶಿಷ್ಟ ಪಂಗಡ (ST) ಮತ್ತು ಪ್ರವರ್ಗ-1ರ ಅಭ್ಯರ್ಥಿಗಳಿಗೆ: ₹100/-
ಪ್ರಮುಖ ದಿನಾಂಕಗಳು ಹಾಗೂ ಅರ್ಜಿ ಸಲ್ಲಿಸುವ ವಿಧಾನ
- ಅರ್ಜಿ ಸಲ್ಲಿಕೆ ಆರಂಭ ದಿನಾಂಕ: ಏಪ್ರಿಲ್ 22
- ಅರ್ಜಿ ಸಲ್ಲಿಸಲು ಕಡೆಯ ದಿನಾಂಕ: ಮೇ 21
- ಅರ್ಜಿ ಸಲ್ಲಿಕೆ ವಿಧಾನ: ಆನ್ಲೈನ್ (Online)
ಅರ್ಜಿ ಸಲ್ಲಿಸುವುದು ಹೇಗೆ?
ಅರ್ಹ ಅಭ್ಯರ್ಥಿಗಳು ನಿಗದಿತ ದಿನಾಂಕದೊಳಗೆ ಆನ್ಲೈನ್ ಮೂಲಕವೇ ತಮ್ಮ ಅರ್ಜಿಯನ್ನು ಸಲ್ಲಿಸಬೇಕಿರುತ್ತದೆ. ಹುದ್ದೆಗಳಿಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿ, ನೇಮಕಾತಿ ಪ್ರಕ್ರಿಯೆ ಮತ್ತು ಅಧಿಕೃತ ಅಧಿಸೂಚನೆ (Official Notification) ಓದಲು ಕರ್ನಾಟಕ ಉಚ್ಛ ನ್ಯಾಯಾಲಯದ ಅಧಿಕೃತ ವೆಬ್ಸೈಟ್ judiciary.karnataka.gov.in ಗೆ ಭೇಟಿ ನೀಡಿ.


