ರಾಜ್ಯ ರಾಜಕಾರಣದಲ್ಲಿ ಸ್ಟಿಂಗ್ ಆಪರೇಷನ್ ಸಂಚಲನ: ಸಚಿವ ಮಧು ಬಂಗಾರಪ್ಪ ವಿರುದ್ಧ ಹರತಾಳು ಹಾಲಪ್ಪ ಗಂಭೀರ ಆರೋಪ.

ಅ, 18: ರಾಜ್ಯ ರಾಜಕಾರಣದಲ್ಲಿ ಪ್ರಸ್ತುತ ‘ಸ್ಟಿಂಗ್ ಆಪರೇಷನ್’ ವಿವಾದ ತೀವ್ರ ಸ್ವರೂಪ ಪಡೆದುಕೊಂಡಿದ್ದು, ದಿನಕ್ಕೊಂದು ಹೊಸ ತಿರುವು ಪಡೆಯುತ್ತಿದೆ. ರಾಜಕೀಯ ನಾಯಕರನ್ನು ಬ್ಲ್ಯಾಕ್‌ಮೇಲ್ ಮಾಡುವ ಹಾಗೂ ಸರ್ಕಾರವನ್ನು ಅಸ್ಥಿರಗೊಳಿಸುವ ಆರೋಪ-ಪ್ರತ್ಯಾರೋಪಗಳ ನಡುವೆ, ಮಾಜಿ ಸಚಿವ ಹರತಾಳು ಹಾಲಪ್ಪ ಅವರು ಶಿಕ್ಷಣ ಸಚಿವ ಮಧು ಬಂಗಾರಪ್ಪ ವಿರುದ್ಧ ಸ್ಫೋಟಕ ಆರೋಪಗಳನ್ನು ಮಾಡಿದ್ದಾರೆ.

ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಆನವಟ್ಟಿ ಗ್ರಾಮದಲ್ಲಿ ಮಾತನಾಡಿದ ಹರತಾಳು ಹಾಲಪ್ಪ, “ರಾಜ್ಯದಲ್ಲಿ ಸ್ಟಿಂಗ್ ಆಪರೇಷನ್‌ಗಳಿಗೆ ಮೊದಲು ಬಲಿಯಾಗಿದ್ದೇ ನಾನು. ದೇವಸ್ಥಾನದ ಮುಂದೆ ನಿಂತು ಪ್ರಮಾಣ ಮಾಡಿ ಹೇಳುತ್ತೇನೆ, ನನ್ನ ಮೇಲಾದ ಸ್ಟಿಂಗ್ ಆಪರೇಷನ್‌ನ ಮೂಲ ಕರ್ತೃ ಸಚಿವ ಮಧು ಬಂಗಾರಪ್ಪ. ಅವರೇ ಈ ಸ್ಟಿಂಗ್ ಆಪರೇಷನ್‌ಗಳ ಪಿತಾಮಹ,” ಎಂದು ನೇರ ವಾಗ್ದಾಳಿ ನಡೆಸಿದ್ದಾರೆ.

ನ್ಯಾಯಾಲಯದಲ್ಲಿ ದಾಖಲಾದ 192 ಕರೆಗಳ ಉಲ್ಲೇಖ ಹಳೆಯ ಪ್ರಕರಣವೊಂದನ್ನು ಮೆಲುಕು ಹಾಕಿದ ಹಾಲಪ್ಪ, “ಆ ಮಹಿಳೆ ದೂರು ನೀಡಿದ್ದರೆ ಮತ್ತು ಡಿಎನ್‌ಎ ಪರೀಕ್ಷೆ ನಡೆದಿದ್ದರೆ ಶಿಕ್ಷಣ ಸಚಿವರು ಜೈಲಿಗೆ ಹೋಗುತ್ತಿದ್ದರು. ಆರು ತಿಂಗಳ ಅವಧಿಯಲ್ಲಿ ಸಚಿವರ ಮನೆಯಿಂದ ಆಕೆಗೆ 192 ಬಾರಿ ಕರೆ ಮಾಡಲಾಗಿದ್ದು, ಇದು ನ್ಯಾಯಾಲಯದಲ್ಲಿ ದಾಖಲಾಗಿದೆ. ಆದರೆ ಆ ಮಹಿಳೆ ದೂರು ನೀಡಲು ಸಿದ್ಧರಿರಲಿಲ್ಲ,” ಎಂದು ಗಂಭೀರ ಆರೋಪ ಮಾಡಿದ್ದಾರೆ.

ಬಿ.ಎಸ್. ಯಡಿಯೂರಪ್ಪ ಬಗ್ಗೆ ಮಾತನಾಡದಂತೆ ಎಚ್ಚರಿಕೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಬಗ್ಗೆ ಆಧಾರರಹಿತವಾಗಿ ಮಾತನಾಡುವುದನ್ನು ನಿಲ್ಲಿಸುವಂತೆ ಮಧು ಬಂಗಾರಪ್ಪ ಅವರಿಗೆ ಹಾಲಪ್ಪ ಎಚ್ಚರಿಕೆ ನೀಡಿದ್ದಾರೆ. “ನಮಗೂ ಜೈಲಿಗೆ ಕಳುಹಿಸಿದ ದಿನಗಳು ನೆನಪಿವೆ, ಅದನ್ನು ನಾವು ಮರೆತಿಲ್ಲ. ಯಾರು ಏನೇ ಮಾಡಿದರೂ ನಾವು ಬಿಡುವುದಿಲ್ಲ. ನಾನಾಗಲಿ ಅಥವಾ ಯಡಿಯೂರಪ್ಪ ಅವರಾಗಲಿ ಸುಳ್ಳು ಪ್ರಕರಣಗಳನ್ನು ಎದುರಿಸಿ, ಕಾನೂನು ಹೋರಾಟದ ಮೂಲಕ ನ್ಯಾಯಾಲಯದಲ್ಲಿ ಗೆದ್ದು ಬಂದಿದ್ದೇವೆ. ಸಮಯ ಬಂದರೆ ಟಿವಿ ಮಾಧ್ಯಮಗಳ ಮುಂದೆ ನಿಂತು ಎಲ್ಲವನ್ನೂ ಎಳೆಎಳೆಯಾಗಿ ಬಿಚ್ಚಿಡುತ್ತೇನೆ,” ಎಂದು ಎಚ್ಚರಿಸಿದ್ದಾರೆ.

ರಾಜ್ಯದಲ್ಲಿ ಸ್ಟಿಂಗ್ ಆಪರೇಷನ್ ಕುರಿತು ಸಿಸಿಬಿ ತನಿಖೆ ನಡೆಯುತ್ತಿರುವ ಬೆನ್ನಲ್ಲೇ, ಹರತಾಳು ಹಾಲಪ್ಪ ಅವರ ಈ ಬಹಿರಂಗ ಹೇಳಿಕೆಗಳು ರಾಜ್ಯ ರಾಜಕಾರಣದಲ್ಲಿ ಹೊಸ ಸಂಚಲನ ಮೂಡಿಸಿವೆ.

ನಮ್ಮ ಸಮಗ್ರ ಸುದ್ದಿಗಳಿಗಾಗಿ ಕೆಳಗಿನ Social Media ಪುಟಗಳಿಗೆ Follow / Subscribe ಮಾಡಿ.

🟢 WhatsApp Group
Join WhatsApp Group

🔵 Facebook Page
Follow Facebook Page

⚫ Twitter / X
Follow on X (Twitter)

🟣 Threads
Follow on Threads

🟠 Instagram
Follow on Instagram

🔵 Telegram
Join Telegram Channel

🟢 WhatsApp Channel
Follow WhatsApp Channel

📰 ಸಮಗ್ರ ಸುದ್ದಿ

ನಿಖರತೆಗೆ ಮತ್ತೊಂದು ಹೆಸರು

📢 ಸುದ್ದಿ • ಮಾಹಿತಿ • ಶಿಕ್ಷಣ • ಉದ್ಯೋಗ • ಕರ್ನಾಟಕ • ದೇಶ • ಜಗತ್ತು

Leave a Reply

Your email address will not be published. Required fields are marked *