Karnataka Rain : ಕರ್ನಾಟಕದ 25ಕ್ಕೂ ಅಧಿಕ ಜಿಲ್ಲೆಗಳಲ್ಲಿ ಮಳೆ ಅಬ್ಬರ ಶುರು.

ಬೆಂಗಳೂರು, ಮಾರ್ಚ್‌ 21: ಕರುನಾಡ ಜನತೆ ಬಿಸಿಲಿನಿಂದ ತತ್ತರಿಸಿದ ಹೋಗಿದ್ದು, ಇನ್ನು ಒಂದು ವಾರದಲ್ಲಿ ಮಳೆಯ ಸಿಂಚನವಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಈಗಾಗಲೇ ರಾಜ್ಯದ ವಿವಿಧ ಭಾಗದಲ್ಲಿ ಮಳೆಯಾಗುತ್ತಿದ್ದು, ಕರುನಾಡ ಜನತೆ ಸಂತಸ ವ್ಯಕ್ತಪಡಿದ್ದಾರೆ. ಇಂದಿನಿಂದ ಒಂದು ವಾರ ಶಿವಮೊಗ್ಗ, ಬೆಂಗಳೂರು ಸೇರಿ ಕರ್ನಾಟಕದ 25ಕ್ಕೂ ಅಧಿಕ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ತುಮಕೂರು, ಶಿವಮೊಗ್ಗ, ರಾಮನಗರ, ಮೈಸೂರು, ಮಂಡ್ಯ, ಕೋಲಾರ, ಕೊಡಗು, ಹಾಸನ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಯಾದಗಿರಿ, ವಿಜಯಪುರ, ರಾಯಚೂರು, ಕಲಬುರಗಿ, ಗದಗ, ಧಾರವಾಡ, ಬೀದರ್, ಬಾಗಲಕೋಟೆ, ಬೆಳಗಾವಿಯಲ್ಲೂ ಮಳೆಯಾಗಲಿದೆ.

ರಾಜ್ಯದಾದ್ಯಂತ ಅಲ್ಲಲ್ಲಿ ಗುಡುಗು, ಮಿಂಚು ಸಹಿತ ದಕ್ಷಿಣ ಒಳನಾಡು, ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಚದುರಿದಂತೆ ಸಾಧಾರಣ ಮಳೆ. ಉತ್ತರ ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಚದುರಿದಂತೆ ತುಂತುರು ಮಳೆಯಾಗುವ ಸಾಧ್ಯತೆಯಿದೆ. ಮುಂದಿನ ಐದು ದಿನಗಳ ರಾಜ್ಯದಾದ್ಯಂತ ಮೋಡ ಕವಿದ ವಾತಾವರಣದೊಂದಿಗೆ, ಗುಡುಗು, ಮಿಂಚು ಮತ್ತು ಬಿರುಗಾಳಿ ಸಹಿತ ಗಾಳಿಯ ವೇಗ ಗಂಟೆಗೆ 30-50 ಕಿಮೀ ತಲುಪುವ ಸಾದ್ಯತೆಯಿದ್ದು ಅಲ್ಲಲ್ಲಿ ಚದುರಿದಂತೆ ತುಂತುರು ಮಳೆಯಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಕರ್ನಾಟಕದ ದಕ್ಷಿಣ ಒಳನಾಡಿನ ಕೆಲವು ಭಾಗಗಳಲ್ಲಿ ಗುರುವಾರ ಮಳೆಯಾಗಿದ್ದು, ರಾಜ್ಯದಾದ್ಯಂತ ಮೋಡ ಕವಿದ ವಾತಾವರಣದೊಂದಿಗೆ, ಗುಡುಗು, ಮಿಂಚು ಮತ್ತು ಬಿರುಗಾಳಿ ಸಹಿತ ಗಾಳಿಯ ವೇಗ ಗಂಟೆಗೆ 30-50 ಕಿಮೀ ತಲುಪುವ ಸಾದ್ಯತೆಯಿದ್ದು ಅಲ್ಲಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಮಾರ್ಚ್ 25ರಿಂದ ಮಳೆಯಾಗಲಿದೆ. ಈಗಾಗಲೇ ಕರಾವಳಿ ಜಿಲ್ಲೆಗಳು ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಪೂರ್ವ ಮುಂಗಾರು ಆರ್ಭಟಿಸುತ್ತಿದೆ. ಹವಾಮಾನ ವೈಪರಿತ್ಯ ಹಿನ್ನೆಲೆ ರಾಜ್ಯದಲ್ಲಿ ಎರಡು ಬಗೆಯ ವಾತಾವರಣ ನಿರ್ಮಾಣವಾಗಿದೆ.

ಇನ್ನೂ ಬೆಂಗಳೂರಿನ ಕೆಲವೆಡೆ ಮಳೆಯಾಗಿತ್ತು. ಉತ್ತರ ಕರ್ನಾಟಕ ಭಾಗದಲ್ಲಿ ಬಿಸಿಲಿನ ಅಬ್ಬರ ತೀವ್ರಗೊಂಡಿದೆ. ಐಎಂಡಿ ಸೂಚನೆ ಪ್ರಕಾರ ಬೆಂಗಳೂರು ಸೇರಿ ಕರ್ನಾಟಕದ 12 ಜಿಲ್ಲೆಗಳಲ್ಲಿ ಮಾರ್ಚ್ 23 ರಿಂದ ಭರ್ಜರಿ ಮಳೆಯಾಗಲಿದೆ. ಮೈಸೂರು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಆಗಾಗ ಮಳೆಯಾಗುತ್ತಿದೆ. ಚಿಕ್ಕಮಗಳೂರು, ಶಿವಮೊಗ್ಗ, ದಾವಣಗೆರೆ, ತುಮಕೂರು, ರಾಮನಗರ, ಮೈಸೂರು, ಮಂಡ್ಯ, ಕೊಡಗು, ಕೋಲಾರ, ಹಾಸನ, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ತಿಳಿಸಿದರು. ಮುಂದಿನ ಐದು ದಿನಗಳ ನಂತರ ರಾಜ್ಯದ ವಿವಿಧ ಭಾಗಗಳಲ್ಲಿ ಉತ್ತಮ ಮಳೆಯಾಗಲಿದ್ದು,ಕೋಲಾರ, ಕೊಡಗು, ಹಾಸನ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಯಾದಗಿರಿಯಲ್ಲಿ ಮಳೆಯಾಗಲಿದೆ. ಇನ್ನೂ, ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ವಿಜಯನಗರ ಜಿಲ್ಲೆಗಳಲ್ಲಿ ಒಣಹವೆ ಮುಂದುವರೆಯಲಿದೆ.

Source : https://kannada.oneindia.com/news/karnataka/rain-forecast-for-more-than-25-districts-of-karnataka-including-bengaluru-from-march-22-405077.html

Leave a Reply

Your email address will not be published. Required fields are marked *