ಪೋಟೋ ಮತ್ತು ವರದಿ ಸುರೇಶ್ ಪಟ್ಟಣ್
ಚಿತ್ರದುರ್ಗ ಮಾ. ೦7
“ಸರ್ವರಿಗೂ ಸಮಪಾಲು, ಸರ್ವರಿಗೂ ಸಮಬಾಳು” ಕೊಡುತ್ತೇವೆ ಎಂದು ಬೊಗಳೆ ಬಿಟ್ಟು ಅಧಿಕಾರಕ್ಕೆ ಬಂದ ಸಿದ್ದರಾಮಯ್ಯ ಸರ್ಕಾರ ಇಂದು ಕರ್ನಾಟಕದಲ್ಲಿ “ಸರ್ವರಿಗೂ ತೆರಿಗೆ, ಸರ್ವರಿಗೂ ಸಾಲ” ಎಂಬ ಸ್ಥಿತಿ ನಿರ್ಮಿಸಿದೆ ಎಂದು ವಾಣಿಜ್ಯೋದ್ಯಮಿಗಳು ಬಿಜೆಪಿ ಯುವ ಮುಖಂಡರಾದ ಅನೀತ್ ಕುಮಾರ್ ಜಿ ಎಸ್ ದೂರಿದ್ದಾರೆ.
ರಾಜ್ಯು ಸರ್ಕಾರದಲ್ಲಿ ಸಿದ್ದರಾಮಯ್ಯ ರವರು ಇಂದು ಮಂಡಿಸಿದ ಆಯವ್ಯಯದ ಬಗ್ಗೆ ಪ್ರತಿಕ್ರಿಯಿಸಿದ ಅವರು, ಜನರ ಕೆಂಗಣ್ಣಿಗೆ ಗುರಿಯಾಗಿ ಮುಜುಗರಕ್ಕೀಡಾಗುವ ಪರಿಸ್ಥಿತಿ ಬಂದಾಗಲೆಲ್ಲ ಕೇಂದ್ರ ಸರ್ಕಾರದ ಮೇಲೆ ಗೂಬೆ ಕೂರಿಸಿ ಜನರನ್ನು ದಿಕ್ಕು ತಪ್ಪಿಸುವ ಚಳಿಯನ್ನು ಬಜೆಟ್‌ನಲ್ಲಿಯೂ ಮುಂದುವರೆಸಿರುವ ಸಿದ್ದರಾಮಯ್ಯನವರು ಬಜೆಟ್ ಭಾಷಣದಲ್ಲೂ ಅದೇ ಚಾಳಿ ಪ್ರದರ್ಶನ ಮಾಡಿದ್ದಾರೆ.
ರಾಜ್ಯದ ಆರ್ಥಿಕ ಭವಿಷ್ಯಕ್ಕೆ ಸ್ಪಷ್ಟ ದಿಕ್ಕು ನೀಡಬೇಕಾದ ಬಜೆಟ್‌ನಲ್ಲಿ ವಾಸ್ತವ ಸ್ಥಿತಿಗತಿಗಳನ್ನು ಪ್ರಾಮಾಣಿಕವಾಗಿ ಹೇಳುವ ಬದಲು ಕಟ್ಟು ಕಥೆಗಳನ್ನು ಹೇಳುತ್ತಾ ಕಾಲಹರಣ ಮಾಡಲಾಗಿದೆ. ಕಾಂಗ್ರೆಸ್ ಸರ್ಕಾರದ ಸಾಲದ ಪ್ರಮಾಣವೇ ಅದರ ಆರ್ಥಿಕ ನಿರ್ವಹಣೆಯ ನಿಜ ಮುಖವನ್ನು ಬಯಲಿಗೆಳೆಯುತ್ತದೆ ಎಂದಿದ್ದಾರೆ.
