
ವರದಿ ಮತ್ತು ಪೋಟೋ ಸುರೇಶ್ ಪಟ್ಟಣ್
ಚಿತ್ರದುರ್ಗ ಜೂ. 18 ಗುಣಮಟ್ಟದ ಕಾಮಗಾರಿಯಿಂದ ಮಾತ್ರ ಕ್ಷೇತ್ರದಲ್ಲಿ ಹೆಸರು ಉಳಿಯಲು ಸಾಧ್ಯ ಆ ಒಂದು ನಿಟ್ಟಿನಲ್ಲಿ ವಿವಿಧ ಕಾಮಗಾರಿ ಭೂಮಿ ಪೂಜೆಯನ್ನು ನೆರವೇರಿಸಲಾಗಿದೆ ಎಂದು ಶಾಸಕ ಕೆ.ಸಿ ವೀರೇಂದ್ರ ಪಪ್ಪಿ ತಿಳಿಸಿದರು.
ಚಿತ್ರದುರ್ಗ ನಗರದ ತಿಮ್ಮಣ್ಣ ನಾಯಕನ ಕೆರೆ ಏರಿಯ ಮೇಲೆ ಎಡಭಾಗದಲ್ಲಿ ಪಾತ್ವೆ ಮತ್ತು ಅಲಂಕಾರಿಕ ವಿದ್ಯುತ್ ದೀಪಗಳು, ಜಿಮ್ ಮತ್ತು ಮಕ್ಕಳ ಆಟಿಕೆ ಸಾಮಾಗ್ರಿಗಳು ಹಾಗೂ ಕಾಂಕ್ರೀಟ್ ರಸ್ತೆ ನಿರ್ಮಾಣ ಕಾಮಗಾರಿ, ನಗರದ 2ನೇ ವಾರ್ಡ್‍ನಲ್ಲಿರುವ ಚಂದ್ರಮಾಸದ ಹೊಂಡದ ಪುಷ್ಕರಣೆ ಅಭಿವೃದ್ಧಿ ಕಾಮಗಾರಿ ಹಾಗೂ ಜಿಮ್ ಮಕ್ಕಳ ಆಟಿಕೆ ಸಾಮಾಗ್ರಿಗಳನ್ನು ಆಳವಡಿಸುವ ಕಾಮಗಾರಿ, ಐತಿಹಾಸಿಕ ಕೋಟೆಯ ಕುರವತ್ತಿ ಈಶ್ವರ ದೇವಸ್ಥಾನದ ರಾಮದೇವರ ವಡ್ಡು ಏರಿ ಅಭಿವೃದ್ಧಿ ಕಾಮಗಾರಿ, ಮೆದೇಹಳ್ಳಿ ಗ್ರಾಮದ ಉದ್ಯಾನವನ ನಿರ್ಮಾಣ ಕಾಮಗಾರಿ, ಕೆಳಗೋಟೆಯ ಚೆನ್ನಕೇಶವ ಸ್ವಾಮಿ ದೇವಸ್ಥಾನದ ಹಿಂಭಾಗದ ಉದ್ಯಾನವನ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಕೆ.ಸಿ ವೀರೇಂದ್ರ ಪಪ್ಪಿ ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು,
ಸಾರ್ವಜನಿಕ ಅನುಕೂಲಕ್ಕಾಗಿ ಉದ್ಯಾನವನದಲ್ಲಿ ಹಲವು ಅಭಿವೃದ್ಧಿ ಕಾರ್ಯಗಳನ್ನ ಮಾಡಲಾಗುತ್ತಿದೆ. ಸಾರ್ವಜನಿಕರು ಇದರ ಸದುಪಯೋಗ ಪಡೆಯಬೇಕು ಹಾಗೂ ಇಲಾಖೆ ಅಧಿಕಾರಿಗಳಿಗೆ ಅಭಿವೃದ್ಧಿ ಕಾರ್ಯಗಳು ಗುಣಮಟ್ಟದಲ್ಲಿ ಕೂಡಿರಬೇಕೆಂದು ಅಧಿಕಾರಿಗಳಿಗೆ ಸಲಹೆ ನೀಡಿದರು.
ಈ ಸಂದರ್ಭದಲ್ಲಿ ಸ್ಥಳೀಯ ಜನ ಪ್ರತಿನಿಧಿಗಳು ಇಲಾಖೆ ಅಧಿಕಾರಿಗಳು ಹಾಗೂ ಸಾರ್ವಜನಿಕರು ಹಾಜರಿದ್ದರು.
Views: 10