KCET Results 2025: ನಾಳೆ ಕರ್ನಾಟಕ ಸಿಇಟಿ ಫಲಿತಾಂಶ; ರಿಸಲ್ಟ್ ಚೆಕ್‌ ಮಾಡುವ ವಿಧಾನ ಇಲ್ಲಿದೆ.

KCET Result 2025 Date: ಇಂಜಿನಿಯರಿಂಗ್ ಸೇರಿದಂತೆ ವಿವಿಧ ವೃತ್ತಿ ಶಿಕ್ಷಣ ಕೋರ್ಸ್​ಗಳ ಪ್ರವೇಶಕ್ಕೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸಿದ್ದ ಸಾಮಾನ್ಯ ಪ್ರವೇಶ ಪರೀಕ್ಷೆಯ(ಸಿಇಟಿ) ಫಲಿತಾಂಶ ನಾಳೆ ಅಂದರೆ ಮೇ 24ರಂದು ಪ್ರಕಟವಾಗಲಿದೆ. ಕಳೆದ ಮೂರ್ನಾಲ್ಕು ದಿನಗಳಿಂದ ಸಿಇಟಿ ರಿಸಲ್ಟ್ ಯಾವಾಗ ಎಂದು ವಿದ್ಯಾರ್ಥಿಗಳು ಹಾಗೂ ಅವರ ಪೋಷಕರು ಕಾತರರಿಂದ ಕಾಯುತ್ತಿದ್ದರು. ಇದೀಗ ಕೊನೆಗೂ ಫಲಿತಾಂಶಕ್ಕೆ ಮುಹೂರ್ತ ಫಿಕ್ಸ್ ಆಗಿದ್ದು, ಫಲಿತಾಂಶವನ್ನು ಹೇಗೆ ಚೆಕ್​ ಮಾಡಬೇಕೆನ್ನುವ ವಿಧಾನ ಈ ಕೆಳಗಿನಂತಿದೆ ನೋಡಿ.

ಬೆಂಗಳೂರು, ಮೇ 23): ವಿದ್ಯಾರ್ಥಿಗಳು ಸಾಕಷ್ಟು ಕಾತರದಿಂದ ಕಾಯುತ್ತಿದ್ದ ಆ ದಿನ ಬಂದಿದೆ. ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ 2025ರ (Karnataka Common Entrance Test) ಫಲಿತಾಂಶ ನಾಳೆ(ಮೇ 24) ರಂದು ಪ್ರಕಟವಾಗಲಿದೆ. ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಸಚಿವ ಎಂ.ಸಿ. ಸುಧಾಕರ್ (MC Sudhakar) ಅವರು ಶನಿವಾರ ಬೆಳಗ್ಗೆ 11:30ಕ್ಕೆ ಪ್ರಕಟ ಮಾಡಲಿದ್ದಾರೆ. ಬಳಿಕ ಮಧ್ಯಾಹ್ನ 2 ಗಂಟೆಗೆ ವೆಬ್‌ಸೈಟ್‌ನಲ್ಲಿ ಫಲಿತಾಂಶ ನೋಡಬಹುದು. ಹೀಗಾಗಿ cetonline.karnataka.gov.in ಅಥವಾ kea.kar.nic.in ನಲ್ಲಿ ತಮ್ಮ ಫಲಿತಾಂಶವನ್ನು ನೋಡಬಹುದಾಗಿದೆ.

ಕರ್ನಾಟಕ ಸಿಇಟಿ ಫಲಿತಾಂಶ ಪರಿಶೀಲಿಸುವುದು ಹೇಗೆ?

ಹಂತ 1: ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಅಧಿಕೃತ ಪೋರ್ಟಲ್ https://cetonline.karnataka.gov.in/kea ಗೆ ಹೋಗಿ.

ಹಂತ 2: ಮುಖಪುಟದಲ್ಲಿ “KCET ಫಲಿತಾಂಶಗಳು 2024” ಎಂದು ಲೇಬಲ್ ಮಾಡಲಾದ ಲಿಂಕ್ ಅನ್ನು ಹುಡುಕಿ ಮತ್ತು ಕ್ಲಿಕ್ ಮಾಡಿ.

ಹಂತ 3: ಗೊತ್ತುಪಡಿಸಿದ ಕ್ಷೇತ್ರಗಳಲ್ಲಿ ನಿಮ್ಮ ಹೆಸರಿನ ಮೊದಲ ನಾಲ್ಕು ಅಕ್ಷರಗಳೊಂದಿಗೆ ನಿಮ್ಮ KCET ನೋಂದಣಿ ಸಂಖ್ಯೆಯನ್ನು ನಮೂದಿಸಬೇಕು.

ಹಂತ 4: ಮುಂದುವರೆಯಲು “Submit” ಮೇಲೆ ಕ್ಲಿಕ್ ಮಾಡಿ.

ಹಂತ 5: ನಿಮ್ಮ KCET ಫಲಿತಾಂಶವನ್ನು ಪರದೆಯ ಮೇಲೆ ಬರುತ್ತದೆ.

ಹಂತ 6: ಈ ಫಲಿತಾಂಶವನ್ನು ಡೌನ್‌ಲೋಡ್‌ ಮಾಡಿಕೊಂಡು, ಪ್ರಿಂಟ್‌ಔಟ್‌ ತೆಗೆದಿಟ್ಟುಕೊಳ್ಳಬಹುದು.

ಇಂಜಿನಿಯರಿಂಗ್ ಸೇರಿದಂತೆ ವಿವಿಧ ವೃತ್ತಿ ಶಿಕ್ಷಣ ಕೋರ್ಸ್​ಗಳ ಪ್ರವೇಶಕ್ಕೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಏಪ್ರಿಲ್ 17, 17ರಂದು ಒಟ್ಟು 775 ಕೇಂದ್ರಗಳಲ್ಲಿ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ನಡೆಸಿದ್ದು, ಇದರ ಫಲಿತಾಂಶ ಪ್ರಟಕವಾಗಲಿದೆ. ಕರ್ನಾಟಕದಾದ್ಯಂತ ಇಂಜಿನಿಯರಿಂಗ್, ಫಾರ್ಮಸಿ ಮತ್ತು ಕೃಷಿ ಪದವಿಪೂರ್ವ ಕೋರ್ಸ್‌ಗಳ ಪ್ರವೇಶಕ್ಕೆ ನಿರ್ಣಾಯಕವಾಗಿದೆ.

ಸಿಇಟಿ ಫಲಿತಾಂಶ ಬಿಡುಗಡೆಯಾದ ನಂತರ, ಅಭ್ಯರ್ಥಿಗಳು ತಮ್ಮ ಅರ್ಜಿ ಸಂಖ್ಯೆ ಮತ್ತು ಅವರ ಹೆಸರಿನ ಮೊದಲ ನಾಲ್ಕು ಅಕ್ಷರಗಳನ್ನು ನಮೂದಿಸುವ ಮೂಲಕ cetonline.karnataka.gov.in ಅಥವಾ kea.kar.nic.in ನಲ್ಲಿ ತಮ್ಮ ಫಲಿತಾಂಶಗಳನ್ನು ಪರಿಶೀಲಿಸಬಹುದು.

ಸಿಇಟಿ ಫಲಿತಾಂಶ ಘೋಷಣೆಯ ನಂತರ KEA ಮೆರಿಟ್ ಪಟ್ಟಿಯನ್ನು ಪ್ರಕಟಿಸುತ್ತದೆ. ಕೌನ್ಸೆಲಿಂಗ್ ಪ್ರಕ್ರಿಯೆಯನ್ನು ಪ್ರಾರಂಭಿಸುತ್ತದೆ. ಇದರಲ್ಲಿ ನೋಂದಣಿ, ಆಯ್ಕೆ ಭರ್ತಿ, ಸೀಟು ಹಂಚಿಕೆ ಮತ್ತು ದಾಖಲೆ ಪರಿಶೀಲನೆ ಸೇರಿವೆ.

TV9 Kannada

ನಮ್ಮ ಸಮಗ್ರ ಸುದ್ದಿಗಳಿಗಾಗಿ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು WhatsApp Group:https://chat.whatsapp.com/KnDIfiBURQ9G5sLEJLqshk

Facebook page: https://www.facebook.com/samagrasudii

Sharechat: https://sharehat.com/profile/edu514826335?d=n

Twitter: https://twitter.com/SuddiSamagra

Threads: https://www.threads.net/@samagrasuddi.co.in

Instagram: https://www.instagram.com/samagrasuddi.co.in/

Telegram: https://t.me/+E1ubNzdguQ5jN2Y1

Leave a Reply

Your email address will not be published. Required fields are marked *