KEA ನೇಮಕಾತಿ 2026: ಕಂದಾಯ ಇಲಾಖೆಯ 572 ಗ್ರೂಪ್ ‘ಸಿ’ (VAO) ಹುದ್ದೆಗಳಿಗೆ ಆನ್‌ಲೈನ್ ಅರ್ಜಿ ಆರಂಭ.

ರಾಜ್ಯ ಸರ್ಕಾರದ ಕಂದಾಯ ಇಲಾಖೆಯು ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿದ್ದ ಯುವಜನತೆಗೆ ಭರ್ಜರಿ ಸಿಹಿಸುದ್ದಿ ನೀಡಿದೆ. ಕಂದಾಯ ಇಲಾಖೆಯಲ್ಲಿ ಖಾಲಿ ಇರುವ ಗ್ರೂಪ್​ ‘ಸಿ’ ವೃಂದದ ಒಟ್ಟು 572 ಗ್ರಾಮ ಆಡಳಿತ ಅಧಿಕಾರಿ (VAO – Village Administrative Officer) ಹುದ್ದೆಗಳನ್ನು ಭರ್ತಿ ಮಾಡಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಇದೀಗ ಅಧಿಸೂಚನೆ ಹೊರಡಿಸಿದೆ.

ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಈ ಹುದ್ದೆಗಳು ಖಾಲಿ ಇದ್ದು, ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಒಟ್ಟು 572 ಹುದ್ದೆಗಳ ಪೈಕಿ 67 ಹುದ್ದೆಗಳನ್ನು ಕಲ್ಯಾಣ ಕರ್ನಾಟಕ ಭಾಗದ ಅಭ್ಯರ್ಥಿಗಳಿಗೆ ಮೀಸಲಿಡಲಾಗಿದೆ ಎಂದು ಪ್ರಾಧಿಕಾರ ತಿಳಿಸಿದೆ.

ಜಿಲ್ಲಾವಾರು ಖಾಲಿ ಇರುವ ಹುದ್ದೆಗಳ ವಿವರ:

  • ಬೆಂಗಳೂರು ನಗರ: 20
  • ಬೆಂಗಳೂರು ಗ್ರಾಮಾಂತರ: 29
  • ಚಿತ್ರದುರ್ಗ: 15
  • ಚಿಕ್ಕಬಳ್ಳಾಪುರ: 21
  • ತುಮಕೂರು: 50
  • ಶಿವಮೊಗ್ಗ: 18
  • ಕೋಲಾರ: 22
  • ಬೆಂಗಳೂರು ದಕ್ಷಿಣ: 30
  • ಮೈಸೂರು: 45
  • ಮಂಡ್ಯ: 50
  • ಹಾಸನ: 35
  • ಉಡುಪಿ: 10
  • ದಕ್ಷಿಣ ಕನ್ನಡ: 20
  • ಚಾಮರಾಜನಗರ: 31
  • ಚಿಕ್ಕಮಗಳೂರು: 10
  • ಬೆಳಗಾವಿ: 48
  • ಬಾಗಲಕೋಟೆ: 16
  • ಗದಗ: 14
  • ಹಾವೇರಿ: 15
  • ಬೀದರ್: 4
  • ರಾಯಚೂರು: 2

ಕಲ್ಯಾಣ ಕರ್ನಾಟಕ ಭಾಗದ ಮೀಸಲಾತಿ ಹುದ್ದೆಗಳು (ಒಟ್ಟು 67):

  • ಕಲಬುರಗಿ: 40
  • ಬೀದರ್: 17
  • ರಾಯಚೂರು: 10

ಶೈಕ್ಷಣಿಕ ಅರ್ಹತೆ ಮತ್ತು ವಯೋಮಿತಿ

  • ವಿದ್ಯಾರ್ಹತೆ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಕಡ್ಡಾಯವಾಗಿ ದ್ವಿತೀಯ ಪಿಯುಸಿ (PUC) ಅಥವಾ ಅದಕ್ಕೆ ತತ್ಸಮಾನವಾದ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.
  • ವಯೋಮಿತಿ: ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷಗಳ ವಯೋಮಿತಿ ನಿಗದಿಪಡಿಸಲಾಗಿದೆ. ಸರ್ಕಾರಿ ನಿಯಮಗಳ ಪ್ರಕಾರ, ಪ್ರವರ್ಗ 2ಎ, 2ಬಿ, 3ಎ, ಮತ್ತು 3ಬಿ ವರ್ಗದ ಅಭ್ಯರ್ಥಿಗಳಿಗೆ 3 ವರ್ಷ ಹಾಗೂ ಪರಿಶಿಷ್ಟ ಜಾತಿ (SC), ಪರಿಶಿಷ್ಟ ಪಂಗಡ (ST) ಮತ್ತು ಪ್ರವರ್ಗ 1ರ ಅಭ್ಯರ್ಥಿಗಳಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆ ಇರಲಿದೆ.

ವೇತನ ಶ್ರೇಣಿ ಮತ್ತು ಅರ್ಜಿ ಶುಲ್ಕ

  • ವೇತನ: ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ 34,100 ರೂ. ಗಳಿಂದ 67,600 ರೂ. ವರೆಗಿನ ಆಕರ್ಷಕ ವೇತನ ಶ್ರೇಣಿಯನ್ನು ನಿಗದಿಪಡಿಸಲಾಗಿದೆ.
  • ಅರ್ಜಿ ಶುಲ್ಕ:
    • ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ: 750 ರೂ.
    • ಪ.ಜಾ, ಪ.ಪಂ ಮತ್ತು ಪ್ರವರ್ಗ-1ರ ಅಭ್ಯರ್ಥಿಗಳಿಗೆ: 500 ರೂ.
    • ವಿಶೇಷ ಚೇತನ ಅಭ್ಯರ್ಥಿಗಳಿಗೆ: 250 ರೂ.

ಪ್ರಮುಖ ದಿನಾಂಕಗಳು

  • ಅರ್ಜಿ ಸಲ್ಲಿಕೆ ಆರಂಭ ದಿನಾಂಕ: ಜುಲೈ 11
  • ಅರ್ಜಿ ಸಲ್ಲಿಸಲು ಕಡೆಯ ದಿನಾಂಕ: ಜುಲೈ 30
  • ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ: ಜುಲೈ 31

ಅರ್ಜಿ ಸಲ್ಲಿಸುವ ವಿಧಾನ

ಅರ್ಹ ಅಭ್ಯರ್ಥಿಗಳು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಅಧಿಕೃತ ವೆಬ್‌ಸೈಟ್ cetonline.karnataka.gov.in/KEA/vaorpc2026 ಗೆ ಭೇಟಿ ನೀಡಿ ಆನ್‌ಲೈನ್ ಮುಖಾಂತರವೇ ಅರ್ಜಿಯನ್ನು ಸಲ್ಲಿಸಬೇಕು.

ವಿಶೇಷ ಸೂಚನೆ: ಒಬ್ಬ ಅಭ್ಯರ್ಥಿಯು ಕೇವಲ ಒಂದು ಜಿಲ್ಲೆಗೆ ಮಾತ್ರ ಅರ್ಜಿ ಸಲ್ಲಿಸಲು ಅವಕಾಶವಿರುತ್ತದೆ. ಹುದ್ದೆಗಳ ಕುರಿತ ಹೆಚ್ಚಿನ ಮಾಹಿತಿ ಹಾಗೂ ಅಧಿಕೃತ ಅಧಿಸೂಚನೆಗಾಗಿ ಕೆಇಎ ಅಧಿಕೃತ ಜಾಲತಾಣವನ್ನು ವೀಕ್ಷಿಸಬಹುದು.

ವಿಎಒ ಆರ್‌ಪಿಸಿ ವೃಂದದ ಅಧಿಸೂಚನೆಗೆ ಇಲ್ಲಿ ಕ್ಲಿಕ್‌ ಮಾಡಿ

https://cetonline.karnataka.gov.in/kea/vaorpc2026

ವಿಎಒ ಕಲ್ಯಾಣ ಕರ್ನಾಟಕ ವೃಂದದ ಅಧಿಸೂಚನೆಗೆ ಇಲ್ಲಿ ಕ್ಲಿಕ್‌ ಮಾಡಿ

https://cetonline.karnataka.gov.in/kea/vaokk2026

Follow the ಸಮಗ್ರ ಸುದ್ದಿ Telegram Channel: https://t.me/SamagraSuddi

ಸಮಗ್ರ ಸುದ್ದಿ channel on WhatsApp: https://whatsapp.com/channel/0029VbDbOsBD8SE2H0L3d40j

Leave a Reply

Your email address will not be published. Required fields are marked *