ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (KEA) 2026ನೇ ಸಾಲಿನ UGCET 3ನೇ ಹಾಗೂ ಅಂತಿಮ ಸುತ್ತಿನ ಸೀಟು ಹಂಚಿಕೆಯ ಫಲಿತಾಂಶವನ್ನು ಅಧಿಕೃತವಾಗಿ ಪ್ರಕಟಿಸಿದೆ. ಎಂಜಿನಿಯರಿಂಗ್, ಕೃಷಿ ವಿಜ್ಞಾನ, ಪಶುವೈದ್ಯಕೀಯ, ಫಾರ್ಮಸಿ ಮತ್ತು ನರ್ಸಿಂಗ್ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್ಗಳ ಪ್ರವೇಶಾತಿಗಾಗಿ ಕಾಯುತ್ತಿದ್ದ ಅಭ್ಯರ್ಥಿಗಳು ಕೆಇಎ ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ ತಮ್ಮ ಲಾಗಿನ್ ವಿವರಗಳನ್ನು ಬಳಸಿ ಫಲಿತಾಂಶವನ್ನು ಪರಿಶೀಲಿಸಿಕೊಳ್ಳಬಹುದು.
ಶುಲ್ಕ ಪಾವತಿ ಹಾಗೂ ಕಾಲೇಜಿಗೆ ವರದಿ ಮಾಡುವ ಪ್ರಕ್ರಿಯೆ: ಸೀಟು ಹಂಚಿಕೆಯಾದ ಅಭ್ಯರ್ಥಿಗಳು ಸೆಪ್ಟೆಂಬರ್ 8 ರಿಂದ ಸೆಪ್ಟೆಂಬರ್ 10, 2026ರ ಒಳಗಾಗಿ ನಿಗದಿತ ಶುಲ್ಕವನ್ನು (ಈಗಾಗಲೇ ಪಾವತಿಸದಿದ್ದಲ್ಲಿ ಮಾತ್ರ) ಪಾವತಿಸಬೇಕು. ಆ ಬಳಿಕ ‘ಸೀಟ್ ಕನ್ಫರ್ಮೇಷನ್ ಸ್ಲಿಪ್’ ಹಾಗೂ ಪ್ರವೇಶ ಪತ್ರವನ್ನು (Admission Order) ಕಡ್ಡಾಯವಾಗಿ ಡೌನ್ಲೋಡ್ ಮಾಡಿಕೊಳ್ಳಬೇಕು. ಪ್ರವೇಶ ಪತ್ರ ಪಡೆದ ವಿದ್ಯಾರ್ಥಿಗಳು ಸೆಪ್ಟೆಂಬರ್ 11, 2026ರ ಸಂಜೆ 6:00 ಗಂಟೆಯೊಳಗೆ ತಮಗೆ ಹಂಚಿಕೆಯಾದ ಕಾಲೇಜುಗಳಿಗೆ ಖುದ್ದಾಗಿ ಭೇಟಿ ನೀಡಿ ಪ್ರವೇಶ ಪ್ರಕ್ರಿಯೆಯನ್ನು ಪೂರ್ಣಗೊಳಿಸುವುದು ಕಡ್ಡಾಯವಾಗಿದೆ.
ಸೀಟು ವ್ಯರ್ಥ ಮಾಡಿದರೆ ಕಾನೂನು ಕ್ರಮ: ಇದು ಸಿಇಟಿ ಪ್ರವೇಶ ಪ್ರಕ್ರಿಯೆಯ ಅಂತಿಮ ಸುತ್ತಾಗಿರುವುದರಿಂದ, ಇಲ್ಲಿ ಸೀಟು ಪಡೆದ ಅಭ್ಯರ್ಥಿಗಳು ಕಾಲೇಜಿಗೆ ಸೇರ್ಪಡೆಯಾಗಲೇಬೇಕು. ಯಾವುದೇ ಕಾರಣಕ್ಕೂ ಸೀಟು ರದ್ದತಿಗೆ ಅಥವಾ ಬದಲಾವಣೆಗೆ ಅವಕಾಶವಿರುವುದಿಲ್ಲ. ಸೀಟು ಪಡೆದುಕೊಂಡು, ನಿಗದಿತ ದಿನಾಂಕದೊಳಗೆ ಕಾಲೇಜಿಗೆ ವರದಿ ಮಾಡದೆ ಸೀಟು ವ್ಯರ್ಥ ಮಾಡಿದರೆ, ಅಂತಹ ಅಭ್ಯರ್ಥಿಗಳ ವಿರುದ್ಧ ನಿಯಮಾನುಸಾರ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಎಚ್. ಪ್ರಸನ್ನ ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದ್ದಾರೆ. ವಿದ್ಯಾರ್ಥಿಗಳು ಅಂತಿಮ ಕ್ಷಣದವರೆಗೂ ಕಾಯದೆ ಆದಷ್ಟು ಬೇಗ ಪ್ರವೇಶ ಪ್ರಕ್ರಿಯೆ ಮುಗಿಸುವುದು ಸೂಕ್ತ.
ನಮ್ಮ ಸಮಗ್ರ ಸುದ್ದಿಗಳಿಗಾಗಿ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು WhatsApp Group:https://chat.whatsapp.com/KnDIfiBURQ9G5sLEJLqshk
Facebook page: https://www.facebook.com/samagrasudii
Sharechat: https://sharehat.com/profile/edu514826335?d=n
Twitter: https://twitter.com/SuddiSamagra
Threads: https://www.threads.net/@samagrasuddi.co.in
Instagram: https://www.instagram.com/samagrasuddi.co.in/
Telegram: https://t.me/+E1ubNzdguQ5jN2Y1
Whats App Channel: https://whatsapp.com/channel/0029VbDbOsBD8SE2H0L3d40j