ಗ್ರಾಮ ಆಡಳಿತ ಅಧಿಕಾರಿ (VAO) ಪರೀಕ್ಷೆಯ ಕೀ ಉತ್ತರಗಳು ಪ್ರಕಟ: ಆಕ್ಷೇಪಣೆಗೆ ಅ. 8 ಕಡೇ ದಿನ.

ಅಕ್ಟೋಬರ್‌ ೦6: ಉಳಿಕೆ ಮೂಲ ವೃಂದದ (RPC) ಒಟ್ಟು 505 ಗ್ರಾಮ ಆಡಳಿತ ಅಧಿಕಾರಿ (VAO) ಹುದ್ದೆಗಳ ನೇಮಕಾತಿಗಾಗಿ ಅಕ್ಟೋಬರ್ 4ರಂದು ನಡೆದಿದ್ದ ಸ್ಪರ್ಧಾತ್ಮಕ ಪರೀಕ್ಷೆಯ ಕೀ ಉತ್ತರಗಳನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಬಿಡುಗಡೆ ಮಾಡಿದೆ. ಅಭ್ಯರ್ಥಿಗಳು ಪ್ರಾಧಿಕಾರದ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಪತ್ರಿಕೆ-1 ಮತ್ತು ಪತ್ರಿಕೆ-2ರ ಕೀ ಉತ್ತರಗಳನ್ನು ಪರಿಶೀಲಿಸಿಕೊಳ್ಳಬಹುದಾಗಿದೆ.

ಆಕ್ಷೇಪಣೆ ಸಲ್ಲಿಕೆಗೆ ನಿಯಮಗಳು ಮತ್ತು ಲಿಂಕ್ ಪ್ರಕಟಿತ ಕೀ ಉತ್ತರಗಳ ಕುರಿತು ಆಕ್ಷೇಪಣೆಗಳಿದ್ದಲ್ಲಿ, ಅಭ್ಯರ್ಥಿಗಳು ಕೆಇಎ ಒದಗಿಸಿರುವ ಅಧಿಕೃತ ಲಿಂಕ್ (https://cetonline.karnataka.gov.in/keaobjections/forms/login.aspx) ಮೂಲಕ ಅಕ್ಟೋಬರ್ 8ರ ಬೆಳಗ್ಗೆ 10.30ರ ಒಳಗೆ ಆಕ್ಷೇಪಣೆ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.

  • ಅಗತ್ಯ ಮಾಹಿತಿಗಳು: ಆಕ್ಷೇಪಣೆ ಸಲ್ಲಿಸುವಾಗ ಪತ್ರಿಕೆಯ ವಿವರ, ಪರೀಕ್ಷಾ ದಿನಾಂಕ, ವರ್ಷನ್ ಕೋಡ್ ಮತ್ತು ಪ್ರಶ್ನೆ ಸಂಖ್ಯೆಯನ್ನು ಕಡ್ಡಾಯವಾಗಿ ನಮೂದಿಸಬೇಕು. ಆಕ್ಷೇಪಣೆಯನ್ನು ಬೆಂಬಲಿಸುವ ಪೂರಕ ದಾಖಲೆಗಳನ್ನು ಪಿಡಿಎಫ್ (PDF) ರೂಪದಲ್ಲಿ ಅಪ್‌ಲೋಡ್ ಮಾಡುವುದು ಕಡ್ಡಾಯ.
  • ಶುಲ್ಕದ ವಿವರ: ಸಲ್ಲಿಸುವ ಪ್ರತಿಯೊಂದು ಆಕ್ಷೇಪಣೆಗೆ 25 ರೂ. ಶುಲ್ಕ ಪಾವತಿಸಬೇಕು (ಮರುಪಾವತಿಸಲಾಗುವುದಿಲ್ಲ).
  • ಸೂಚನೆ: ನಿಗದಿತ ಶುಲ್ಕ ಪಾವತಿಸದ, ಪೂರಕ ದಾಖಲೆಗಳಿಲ್ಲದ, ಹಾಗೂ ವರ್ಷನ್ ಕೋಡ್/ಪ್ರಶ್ನೆ ಸಂಖ್ಯೆ ನಮೂದಿಸದ ಆಧಾರರಹಿತ ಆಕ್ಷೇಪಣೆಗಳನ್ನು ಪರಿಗಣಿಸಲಾಗುವುದಿಲ್ಲ. ಈ ಬಗ್ಗೆ ವಿಷಯ ತಜ್ಞರ ಸಮಿತಿಯು ತೆಗೆದುಕೊಳ್ಳುವ ನಿರ್ಣಯವೇ ಅಂತಿಮವಾಗಿರುತ್ತದೆ ಎಂದು ಪ್ರಾಧಿಕಾರ ಸ್ಪಷ್ಟಪಡಿಸಿದೆ.

ಪರೀಕ್ಷೆಯ ಪ್ರಮುಖ ಅಂಕಿ-ಅಂಶಗಳು

  • ರಾಜ್ಯಾದ್ಯಂತ ಒಟ್ಟು 1,037 ಕೇಂದ್ರಗಳಲ್ಲಿ ವೆಬ್ ಕಾಸ್ಟಿಂಗ್ ಕಣ್ಗಾವಲಿನೊಂದಿಗೆ ಬಿಗಿ ಭದ್ರತೆಯಲ್ಲಿ ಪರೀಕ್ಷೆ ನಡೆಸಲಾಗಿತ್ತು. ಧಾರವಾಡ ಜಿಲ್ಲೆಯೊಂದರಲ್ಲೇ ಗರಿಷ್ಠ 60 ಕೇಂದ್ರಗಳಿದ್ದವು.
  • ಒಟ್ಟು 4,11,656 ಅಭ್ಯರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದರು. ಈ ಪೈಕಿ ಶೇ. 74ರಷ್ಟು ಮಂದಿ ಹಾಜರಾಗಿದ್ದು, ಬೆಳಗ್ಗಿನ ಸಾಮಾನ್ಯ ಜ್ಞಾನ ಪತ್ರಿಕೆಯನ್ನು 3,04,096 ಅಭ್ಯರ್ಥಿಗಳು ಹಾಗೂ ಮಧ್ಯಾಹ್ನದ ನಿರ್ದಿಷ್ಟ ಪತ್ರಿಕೆಯನ್ನು 3,03,058 ಅಭ್ಯರ್ಥಿಗಳು ಬರೆದಿದ್ದಾರೆ.

ನಮ್ಮ ಸಮಗ್ರ ಸುದ್ದಿಗಳಿಗಾಗಿ ಕೆಳಗಿನ Social Media ಪುಟಗಳಿಗೆ Follow / Subscribe ಮಾಡಿ.

🟢 WhatsApp Group

Join WhatsApp Group

🔵 Facebook Page

Follow Facebook Page

⚫ Twitter / X

Follow on X (Twitter)

🟣 Threads

Follow on Threads

🟠 Instagram

Follow on Instagram

🔵 Telegram

Join Telegram Channel

🟢 WhatsApp Channel

Follow WhatsApp Channel

📰 ಸಮಗ್ರ ಸುದ್ದಿ

ನಿಖರತೆಗೆ ಮತ್ತೊಂದು ಹೆಸರು

📢 ಸುದ್ದಿ • ಮಾಹಿತಿ • ಶಿಕ್ಷಣ • ಉದ್ಯೋಗ • ಕರ್ನಾಟಕ • ದೇಶ • ಜಗತ್ತು

Leave a Reply

Your email address will not be published. Required fields are marked *