ಮಾದಾರ ಚೆನ್ನಯ್ಯ ಶ್ರೀಗಳಿಗೆ ಕೆಂಪೇಗೌಡ ಪ್ರಶಸ್ತಿ ರಾಷ್ಟ್ರೀಯ ಪ್ರಶಸ್ತಿ 

ಪುರಸ್ಕೃತರಿಗೆ 2 ಲಕ್ಷ ರೂ. ನಗದು ಹಾಗೂ 200 ಗ್ರಾಂ ಬೆಳ್ಳಿಯ ಸ್ಮರಣಿಕೆ ವಿತರಣೆ 

ಚಿತ್ರದುರ್ಗ ಜೂ. 26

ಪೋಟೋ ಮತ್ತು ವರದಿ ಸುರೇಶ್ ಪಟ್ಟಣ್

ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ ಸಾಧಕರಿಗೆ ಕೆಂಪೇಗೌಡರ 517ನೇ ಜನ್ಮ ದಿನಾಚರಣೆ ಪ್ರಯುಕ್ತ ನಾಡಪ್ರಭು ಕೆಂಪೇಗೌಡ ಪ್ರತಿಷ್ಠಾನ ನೀಡುವ ವಾರ್ಷಿಕ ಪ್ರಶಸ್ತಿಗೆ ಈ ಬಾರಿ ಇನ್ಫೋಸಿಸ್ ಸಂಸ್ಥೆಯ ಮಾಜಿ ಮುಖ್ಯಸ್ಥ ಟಿ.ವಿ.ಮೋಹನ್‍ದಾಸ್ ಪೈ ಹಾಗೂ ಚಿತ್ರದುರ್ಗದ ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮಿ ಸೇರಿದಂತೆ ಮತ್ತಿತರರು ಭಾಜನರಾಗಿದ್ದಾರೆ. ಜೂ.27ರಂದು ಸಂಜೆ 4 ಗಂಟೆಗೆ ಬೆಂಗಳೂರಿನ ಜ್ಞಾನಜ್ಯೋತಿ ಆಡಿಟೋರಿಯಂನಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಉಪರಾಷ್ಟ್ರಪತಿ ಸಿ.ಪಿ.ರಾಧಾಕೃಷ್ಣನ್ ಸೇರಿದಂತೆ ಮತ್ತಿತರ ಗಣ್ಯರು ಸಾಧಕರಿಗೆ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ರಾಷ್ಟ್ರೀಯ ಪ್ರಶಸ್ತಿ ಪುರಸ್ಕೃತರಿಗೆ 2 ಲಕ್ಷ ರೂ. ನಗದು ಹಾಗೂ 200 ಗ್ರಾಂ ಬೆಳ್ಳಿಯ ಸ್ಮರಣಿಕೆ ಮತ್ತು ರಾಜ್ಯ ಮಟ್ಟದ ಪ್ರಶಸ್ತಿ ಪುರಸ್ಕೃತರಿಗೆ 25 ಸಾವಿರ ರೂ. ನಗದು ನೀಡಿ ಗೌರವಿಸಲಾಗುತ್ತದೆ. 

ಇನ್ಫೋಸಿಸ್ ಸಂಸ್ಥೆಯ ಹಣಕಾಸು ವಿಭಾಗದ ಮಾಜಿ ಮುಖ್ಯಸ್ಥರು ಹಾಗೂ ಅಕ್ಷಯಪಾತ್ರೆ ಯೋಜನೆಯ ಸಹ ಸಂಸ್ಥಾಪಕ ಟಿ.ವಿ.ಮೋಹನದಾಸ್ ಪೈ, ಅಸ್ಪಶ್ಯತೆ ಆಚರಣೆ ಮತ್ತು ದೇವದಾಸಿ ಪದ್ದತಿಯ ನಿವಾರಣೆಗೆ ಶ್ರಮಿಸುತ್ತಿರುವ ಚಿತ್ರದುರ್ಗದ ಶಿವಶರಣ ಮಾದಾರ ಚೆನ್ನಯ್ಯ ಗುರುಪೀಠದ ಶ್ರೀ ಬಸವಮೂರ್ತಿ ಮಾದಾರ ಚೆನ್ನಯ್ಯ ಸ್ವಾಮೀಜಿ ಮತ್ತು ರಾಜ್ಯದ ಅರಣ್ಯ ಇಲಾಖೆಯ ನಿವೃತ್ತ ಕಾರ್ಯದರ್ಶಿಗಳಾಗಿ ಸೇವೆ ಸಲ್ಲಿಸಿದ್ದ ಎ.ಸಿ.ಲಕ್ಷ್ಮಣ್ ಅವರಿಗೆ ರಾಷ್ಟ್ರೀಯ ಪ್ರಶಸ್ತಿಯನ್ನು ನೀಡಲಾಗುತ್ತಿದೆ 

ಉಳಿದಂತೆ ನಾಡಪ್ರಭು ಕೆಂಪೇಗೌಡ ರಾಜ್ಯ ಮಟ್ಟದ ಪ್ರಶಸ್ತಿಗೆ ಆಡಳಿತ, ಶಿಕ್ಷಣ, ಸಂಸ್ಕೃತಿ, ಕೃಷಿ, ಪತ್ರಿಕೋದ್ಯಮ, ಸಾಹಿತ್ಯ, ಸಂಶೋಧನೆ,-ಮಹಿಳಾ ಸಬಲೀಕರಣ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ತಮ್ಮದೇ ಆದ ಸಾಧನೆ ಮಾಡಿರುವ 15 ಮಂದಿ ಅರ್ಹರನ್ನು ಆಯ್ಕೆ ಸಮಿತಿಯು ಆಯ್ಕೆ ಮಾಡಿದೆ. ಅದರಂತೆ ಎಸ್.ವಿ.ರಂಗನಾಥ್, ಎಚ್.ಎ.ರಂಗನಾಥ್, ಎಂ.ಆರ್.ಜೈಶಂಕರ್, ಬಿ.ಎಂ.ಕೊಕರೆ, ಡಾ.ವಾಮ ದೇವಪ್ಪ, ಕೇಶವ ಆಯ್ಕೆ, ವಿಕ್ರಮ್ ಮುತ್ತಣ್ಣ, ಜಯಪ್ರಕಾಶ್ ಗೌಡ, ರವಿಕುಮಾರ್, ಯಶಸ್ವಿನಿ ಶರ್ಮ, ಪ್ರೇಮಾ ಗಣೇಶ್, ರಶ್ಮಿ ಸಾವಂತ್, ತ್ರಿಸ್ಟಾ ರಾಮಮೂರ್ತಿ, ಧರ್ಮೇಂದ್ರ, ಮಹೇಶ್ ಗೌಡ ಅವರು ರಾಜ್ಯ ಮಟ್ಟದ ಪ್ರಶಸ್ತಿಗೆ ಭಾಜನರಾಗಿದ್ದಾರೆ 

ಅಂದಿನ ಕಾರ್ಯಕ್ರಮದಲ್ಲಿ ಶ್ರೀ ನಿರ್ಮಲಾನಂದ ಶ್ರೀಗಳ ಸಾನೀಧ್ಯದಲ್ಲಿ ನಡೆಯಲಿದ್ದು, ರಾಜ್ಯಪಾಲ ಥಾವರ್ ಚಂದ್ ಗೆಲ್ಲೋಟ್, ಕೇಂದ್ರ ಸಚಿವರಾದ ಎಚ್.ಡಿ. ಕುಮಾರ ಸ್ವಾಮಿ, ವಿ.ಸೋಮಣ್ಣ, ವಿಪಕ್ಷ ನಾಯಕ ಆರ್.ಅಶೋಕ್ ಮತ್ತಿತರರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. 

Leave a Reply

Your email address will not be published. Required fields are marked *