

ಭಾನುವಾರ ಡಬಲ್ ಹೆಡರ್ ದಿನದ ಎರಡನೇ ಪಂದ್ಯದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್, ನಾಲ್ಕು ಬಾರಿ ವಿಜೇತ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಅವರ ತವರು ಈಡನ್ ಗಾರ್ಡನ್ಸ್ ಕ್ರೀಡಾಂಗಣದಲ್ಲಿ ಎದುರಿಸುತ್ತಿದೆ. ಕೋಲ್ಕತ್ತಾ ತನ್ನ ಕೊನೆಯ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಎದುರು ಸೋಲನ್ನು ಎದುರಿಸಬೇಕಾಯಿತು. ಇತ್ತ ಚೆನ್ನೈ ತನ್ನ ಕೊನೆಯ ಪಂದ್ಯದಲ್ಲಿ ಸನ್ರೈಸರ್ಸ್ ಹೈದರಾಬಾದ್ ತಂಡವನ್ನು ಸೋಲಿಸಿತು. ಕೋಲ್ಕತ್ತಾ ತವರಿನಲ್ಲಿ ಗೆಲುವಿನ ಹಾದಿಗೆ ಮರಳಲು ಬಯಸುತ್ತಿದ್ದರೆ, ಚೆನ್ನೈ ತನ್ನ ಗೆಲುವಿನ ಸರಣಿಯನ್ನು ಉಳಿಸಿಕೊಳ್ಳಲು ಬಯಸುತ್ತದೆ.
Views: 0