

ಇಂದು ಐಪಿಎಲ್ 56ನೇ ಪಂದ್ಯದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ರಾಜಸ್ಥಾನ್ ರಾಯಲ್ಸ್ ಮಧ್ಯೆ ಪಂದ್ಯ ನಡೆಯುತ್ತಿದೆ. ಕೋಲ್ಕತ್ತಾದ ಈಡನ್ ಗಾರ್ಡನ್ಸ್ ಸ್ಟೇಡಿಯಂನಲ್ಲಿ ಪಂದ್ಯ ಶುರುವಾಗಿದೆ. ಟೂರ್ನಿಯಲ್ಲಿ ಎರಡೂ ತಂಡಗಳೂ ತಲಾ 11 ಪಂದ್ಯಗಳಲ್ಲಿ 5ರಲ್ಲಿ ಗೆಲುವು ದಾಖಲಿಸಿದ್ದು, ಇಂದಿನ ಪಂದ್ಯ ತೀವ್ರ ಕುತೂಹಲ ಮೂಡಿಸಿದೆ.