ಚಿತ್ರದುರ್ಗ ಜು. 29
ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817
ಜಿಲ್ಲೆಯ ಹಿರಿಯೂರಿನ ಉಪ ಚುನಾವಣೆಯಲ್ಲಿ ಸ್ಪರ್ಧಿಸಲು ಕಾಂಗ್ರೆಸ್ ಮುಖಂಡರು ಆಸಕ್ತಿ ತೋರುತ್ತಿರು ವುದರಿಂದ, ಆಸಕ್ತರಿಂದ ಅರ್ಜಿಗಳನ್ನು ಆಹ್ವಾನ ಮಾಡಿದೆ ಎಂದು ಚಿತ್ರದುರ್ಗ ಜಿಲ್ಲಾ ಕಾಂಗ್ರೆಸ್ನ ಜಿಲ್ಲಾಧ್ಯಕ್ಷರಾದ ಎಂ.ಕೆ.ತಾಜ್ಪೀರ್ ತಿಳಿಸಿದ್ದಾರೆ.
ಈ ಬಗ್ಗೆ ಪತ್ರಿಕಾ ಹೇಳಿಕೆಯನ್ನು ನೀಡಿರುವ ಅವರು, ಕೆಪಿಸಿಸಿ ಅಧ್ಯಕ್ಷರಾದ ಬಿ. ಕೆ. ಹರಿಪ್ರಸಾದ್ ಅವರ ಆದೇಶದ ಮೇರೆಗೆ ದಿನಾಂಕ: 01.08.2026 ರಿಂದ ಕೆಪಿಸಿಸಿವತಿಯಿಂದ ಬಿಡುಗಡೆ ಮಾಡುವ ನಿಗದಿತ ನಮೂನೆಯ ಅರ್ಜಿಯನ್ನು ಪಡೆದು, ವಿವರಗಳನ್ನು ಭರ್ತಿ ಮಾಡಿ, ರೂ. 1,000,00/-(ಒಂದು ಲಕ್ಷ ರೂಪಾಯಿ)ಗಳ ಡಿಡಿಯನ್ನು ಅಧ್ಯಕ್ಷರು, ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಹೆಸರಿಗೆ ಪಾವತಿಸಿ, ಭರ್ತಿ ಮಾಡಿದ ಅರ್ಜಿ ಸಹಿತ ಡಿಡಿಯನ್ನು ಕೆಪಿಸಿಸಿ ಕಚೇರಿಯಲ್ಲಿ ಖುದ್ದಾಗಿ ಸಲ್ಲಿಸಿ, ಒಂದು ಪ್ರತಿಯನ್ನು ಚಿತ್ರದುರ್ಗ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಸಲ್ಲಿಸಬೇಕೆಂದು ಸೂಚಿಸಿದ್ದಾರೆ.
Follow the ಸಮಗ್ರ ಸುದ್ದಿ Telegram Channel: https://t.me/SamagraSuddi
ಸಮಗ್ರ ಸುದ್ದಿ channel on WhatsApp: https://whatsapp.com/channel/0029VbDbOsBD8SE2H0L3d40j