ಕರ್ನಾಟಕ ಲೋಕಸೇವಾ ಆಯೋಗವು (KPSC) ರಾಜ್ಯ ಲೆಕ್ಕಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆಯಲ್ಲಿ ಖಾಲಿ ಇರುವ ಗ್ರೂಪ್ ‘ಎ’ ಮತ್ತು ಗ್ರೂಪ್ ‘ಬಿ’ ವೃಂದದ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ವಾಣಿಜ್ಯ ವಿಭಾಗದಲ್ಲಿ ಸ್ನಾತಕೋತ್ತರ ಪದವಿ ಪಡೆದ ಅಭ್ಯರ್ಥಿಗಳಿಗೆ ಇದೊಂದು ಉತ್ತಮ ಅವಕಾಶವಾಗಿದ್ದು, ಆಸಕ್ತರು ಆನ್ಲೈನ್ ಮೂಲಕ ಸೆಪ್ಟೆಂಬರ್ 26ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ.
ಹುದ್ದೆಗಳ ವಿವರ (ಒಟ್ಟು 68 ಹುದ್ದೆಗಳು):
- ಗ್ರೂಪ್ ಎ (ಸಹಾಯಕ ನಿಯಂತ್ರಕರು): 15 ಹುದ್ದೆಗಳು
- ಗ್ರೂಪ್ ಬಿ (ಲೆಕ್ಕಪರಿಶೋಧಕರು): 53 ಹುದ್ದೆಗಳು
ಶೈಕ್ಷಣಿಕ ಅರ್ಹತೆ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯದಿಂದ ವಾಣಿಜ್ಯ ಸ್ನಾತಕೋತ್ತರ ಪದವಿಯನ್ನು (M.Com) ಪೂರ್ಣಗೊಳಿಸಿರಬೇಕು.
ವಯೋಮಿತಿ: ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ವಯಸ್ಸಾಗಿರಬೇಕು ಹಾಗೂ ಗರಿಷ್ಠ ವಯೋಮಿತಿ 40 ವರ್ಷ ನಿಗದಿಪಡಿಸಲಾಗಿದೆ.
- ಪ್ರವರ್ಗ 2ಎ, 2ಬಿ, 3ಎ ಮತ್ತು 3ಬಿ ಅಭ್ಯರ್ಥಿಗಳಿಗೆ 3 ವರ್ಷಗಳ ವಯೋಮಿತಿ ಸಡಿಲಿಕೆ ಇರುತ್ತದೆ.
- ಪರಿಶಿಷ್ಟ ಜಾತಿ (ಪ.ಜಾ) ಮತ್ತು ಪರಿಶಿಷ್ಟ ಪಂಗಡದ (ಪ.ಪಂ) ಅಭ್ಯರ್ಥಿಗಳಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆ ನೀಡಲಾಗಿದೆ.
ಅರ್ಜಿ ಶುಲ್ಕದ ವಿವರ:
- ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ: ರೂ. 600
- ಪ್ರವರ್ಗ 2ಎ, 2ಬಿ, 3ಎ ಮತ್ತು 3ಬಿ ಅಭ್ಯರ್ಥಿಗಳಿಗೆ: ರೂ. 300
- ಪ.ಜಾ, ಪ.ಪಂ ಅಭ್ಯರ್ಥಿಗಳಿಗೆ: ಶುಲ್ಕ ವಿನಾಯಿತಿ ನೀಡಲಾಗಿದೆ.
ಆಯ್ಕೆ ಪ್ರಕ್ರಿಯೆ: ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಪೂರ್ವಭಾವಿ ಸ್ಪರ್ಧಾತ್ಮಕ ಪರೀಕ್ಷೆ (ಪ್ರಿಲಿಮ್ಸ್), ಮುಖ್ಯ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
ಪ್ರಮುಖ ದಿನಾಂಕಗಳು:
- ಅರ್ಜಿ ಸಲ್ಲಿಕೆ ಆರಂಭ ದಿನಾಂಕ: ಆಗಸ್ಟ್ 28
- ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಸೆಪ್ಟೆಂಬರ್ 26
- ಪ್ರಿಲಿಮ್ಸ್ ಪರೀಕ್ಷೆಯ ದಿನಾಂಕ: ಡಿಸೆಂಬರ್ 6
ಅರ್ಜಿ ಸಲ್ಲಿಕೆ ಹೇಗೆ? ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಹುದ್ದೆಗಳ ಕುರಿತ ಹೆಚ್ಚಿನ ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆಯನ್ನು ಓದಲು ಕೆಪಿಎಸ್ಸಿಯ ಅಧಿಕೃತ ವೆಬ್ಸೈಟ್ kpsc.kar.nic.in ಗೆ ಭೇಟಿ ನೀಡಿ, ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ನಮ್ಮ ಸಮಗ್ರ ಸುದ್ದಿಗಳಿಗಾಗಿ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು WhatsApp Group:https://chat.whatsapp.com/KnDIfiBURQ9G5sLEJLqshk
Facebook page: https://www.facebook.com/samagrasudii
Sharechat: https://sharehat.com/profile/edu514826335?d=n
Twitter: https://twitter.com/SuddiSamagra
Threads: https://www.threads.net/@samagrasuddi.co.in
Instagram: https://www.instagram.com/samagrasuddi.co.in/
Telegram: https://t.me/+E1ubNzdguQ5jN2Y1
Whats App Channel: https://whatsapp.com/channel/0029VbDbOsBD8SE2H0L3d40j