ಕೆಸೆಟ್ ತಾತ್ಕಾಲಿಕ ಅಂಕ ಪ್ರಕಟಿಸಿದ ಕರ್ನಾಟಕ ಪರೀಕ್ಷಾ ಪ್ರಾಧಿಕಾರ – KSET Marks

ಪದವಿ ಕಾಲೇಜು ಉಪನ್ಯಾಸಕರ ಅರ್ಹತಾ ಪರೀಕ್ಷೆ ಅಂಕಗಳ ತಾತ್ಕಾಲಿಕ ಪಟ್ಟಿ ಪ್ರಕಟಗೊಂಡಿದೆ.

ಬೆಂಗಳೂರು: ಪದವಿ ಕಾಲೇಜು ಉಪನ್ಯಾಸಕರ ಅರ್ಹತಾ ಪರೀಕ್ಷೆ ಕೆಸೆಟ್-2023 (kSET-23) ನಲ್ಲಿ ಅಭ್ಯರ್ಥಿಗಳು ಗಳಿಸಿದ ವಿಷಯವಾರು ಅಂಕಗಳ ತಾತ್ಕಾಲಿಕ ಪಟ್ಟಿಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತನ್ನ ವೆಬ್​​ಸೈಟ್​​ನಲ್ಲಿ ಪ್ರಕಟಿಸಿದೆ.

ಪತ್ರಿಕೆ-1 ಮತ್ತು ಪತ್ರಿಕೆ-2ರ ಎಲ್ಲಾ 41 ವಿಷಯಗಳ ವಿಷಯವಾರು ತಾತ್ಕಾಲಿಕ ಅಂಕಪಟ್ಟಿಯನ್ನು ಪ್ರಕಟಿಸಲಾಗಿದೆ. ಆಕ್ಷೇಪಣೆಗಳಿದ್ದರೆ ಮೇ 10ರೊಳಗೆ ಇ-ಮೇಲ್ (keakset2023@gmail.com) ಮಾಡಬೇಕು ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕಿ ಎಸ್.ರಮ್ಯಾ ಪತ್ರಿಕಾ ಹೇಳಿಕೆಯಲ್ಲಿ ಮಾಹಿತಿ ನೀಡಿದ್ದಾರೆ.

ಜನವರಿ 13 ರಂದು ಪ್ರಾಧಿಕಾರ ಪರೀಕ್ಷೆ ನಡೆಸಿ, ಏಪ್ರಿಲ್​​ 4ರಂದು ಅಂತಿಮ ಕೀ ಉತ್ತರಗಳನ್ನು ಬಿಡುಗಡೆ ಮಾಡಿತ್ತು. ಈ ತಾತ್ಕಾಲಿಕ ಅಂಕಪಟ್ಟಿಯ ಆಧಾರದ ಮೇಲೆ ಅಭ್ಯರ್ಥಿಯು ಕೆಸೆಟ್​​ನಲ್ಲಿ ಅರ್ಹತೆ ಪಡೆದಿದ್ದಾರೆಂದು ಭಾವಿಸುವಂತಿಲ್ಲ. ಆಕ್ಷೇಪಣೆಗಳನ್ನು ಪರಿಶೀಲಿಸಿದ ನಂತರ ಅರ್ಹತಾ ಪಟ್ಟಿಯನ್ನು ಪ್ರಕಟಿಸಲಾಗುವುದು ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕರು ತಿಳಿಸಿದ್ದಾರೆ.

Source : https://www.etvbharat.com/kn/!state/kset-provisional-marks-published-by-karnataka-examination-authority-kas24050206405

ನಮ್ಮ ಸಮಗ್ರ ಸುದ್ದಿಗಳಿಗಾಗಿ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 

WhatsAppGroup:https://chat.whatsapp.com/KnDIfiBURQ9G5sLEJLqshk

Facebook page: https://www.facebook.com/samagrasudii

Sharechat: https://sharehat.com/profile/edu514826335?d=n

Twitter: https://twitter.com/SuddiSamagra

Threads: https://www.threads.net/@samagrasuddi.co.in

Instagram: https://www.instagram.com/samagrasuddi.co.in/

Telegram: https://t.me/+E1ubNzdguQ5jN2Y1

Leave a Reply

Your email address will not be published. Required fields are marked *