ಕುಮಟ–ಕಡಮಡಗಿ ರಸ್ತೆ ಅಭಿವೃದ್ಧಿಗೆ 4 ಕೋಟಿ ರೂ. ವೆಚ್ಚ: ಶಾಸಕ ವೀರೇಂದ್ರ ಪಪ್ಪಿಯಿಂದ ಭೂಮಿಪೂಜೆ.


ಜಾತಿ, ಧರ್ಮದ ಲೆಕ್ಕಾಚಾರವಿಲ್ಲದೆ ಅಭಿವೃದ್ಧಿಯೇ ನನ್ನ ರಾಜಕಾರಣದ ಉದ್ದೇಶ: ಶಾಸಕ
ಕೆ.ಸಿ.ವೀರೇಂದ್ರ ಪಪ್ಪಿ

ಚಿತ್ರದುರ್ಗ ನಂ 23:

ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817

ರಾಜಕಾರಣ ಮಾಡುವಾಗ ಜಾತಿ, ಧರ್ಮದ ಲೆಕ್ಕಾಚಾರ ಮಾಡದೆ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡುವುದೇ ನನ್ನ ರಾಜಕಾರಣದ ಮೂಲ ಉದ್ದೇಶವಾಗಿದೆ. ಚಿತ್ರದುರ್ಗ ವಿಧಾನಸಭಾಕ್ಷೇತ್ರವು ಅಭಿವೃದ್ಧಿಯ ಪಥದಲ್ಲಿ ಮುನ್ನಡೆಯಬೇಕು ಎಂಬ ಆಶಯದೊಂದಿಗೆ ಗ್ರಾಮೀಣ ಭಾಗಗಳಲ್ಲಿ ಹಂತ ಹಂತವಾಗಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಾಗುತ್ತಿದೆ ಎಂದು ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ತಿಳಿಸಿದರು.

ತಾಲೂಕಿನ ಹಿರೇಗುಂಟನೂರು ಗ್ರಾಮದಲ್ಲಿ ಭಾನುವಾರ ಲೋಕೋಪಯೋಗಿ ಇಲಾಖೆ ವತಿಯಿಂದ ಸುಮಾರು 4 ಕೋಟಿ ವೆಚ್ಚದಲ್ಲಿ ಕೈಗೆತ್ತಿಕೊಳ್ಳಲಿರುವ ಕುಮಟ–ಕಡಮಡಗಿ ರಸ್ತೆಯ ಆಯ್ದ ಭಾಗಗಳಲ್ಲಿ ಡಾಂಬರೀಕರಣ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು. ಅಭಿವೃದ್ಧಿ ವಿಚಾರದಲ್ಲಿ ರಾಜಕಾರಣ ಮಾಡದೆ, ಕ್ಷೇತ್ರದ ಪ್ರತಿಯೊಂದು ಗ್ರಾಮದ ಅಗತ್ಯಗಳನ್ನು ಗುರುತಿಸಿ ಮೂಲಸೌಕರ್ಯಗಳನ್ನು ಕಲ್ಪಿಸುವುದು ನನ್ನ ಉದ್ದೇಶವಾಗಿದೆ. ಗ್ರಾಮೀಣ ಭಾಗದ ಜನರಿಗೆ ಉತ್ತಮ ರಸ್ತೆ ಸೌಲಭ್ಯ ದೊರೆಯಬೇಕು. ರೈತರು, ವಿದ್ಯಾರ್ಥಿಗಳು, ಉದ್ಯೋಗಿಗಳು ಹಾಗೂ ಸಾರ್ವಜನಿಕರು ಪ್ರತಿನಿತ್ಯ ಸುಗಮವಾಗಿ ಸಂಚರಿಸಲು ಅನುಕೂಲವಾಗುವಂತೆ ರಸ್ತೆಗಳನ್ನು ಅಭಿವೃದ್ಧಿಪಡಿಸುವುದು ಅತ್ಯಂತ ಅಗತ್ಯವಾಗಿದೆ ಎಂದರು.

ಗ್ರಾಮೀಣ ಪ್ರದೇಶಗಳ ಅಭಿವೃದ್ಧಿಯಲ್ಲಿ ರಸ್ತೆ ಸಂಪರ್ಕ ಪ್ರಮುಖ ಪಾತ್ರ ವಹಿಸುತ್ತದೆ. ಉತ್ತಮ ರಸ್ತೆಗಳಿಂದ ಗ್ರಾಮಗಳ ನಡುವಿನ ಸಂಪರ್ಕ ಸುಗಮವಾಗುವುದಲ್ಲದೆ, ಕೃಷಿ ಉತ್ಪನ್ನಗಳನ್ನು
ಮಾರುಕಟ್ಟೆಗೆ ಸಾಗಿಸಲು ರೈತರಿಗೆ ಅನುಕೂಲವಾಗುತ್ತದೆ. ಗ್ರಾಮೀಣ ಭಾಗದ ಜನರು ಆರೋಗ್ಯ
ಸೇವೆ, ಶಿಕ್ಷಣ ಹಾಗೂ ಇತರೆ ಸರ್ಕಾರಿ ಸೌಲಭ್ಯಗಳನ್ನು ಪಡೆಯಲು ರಸ್ತೆ ಸಂಪರ್ಕ ಅತ್ಯಗತ್ಯವಾಗಿದೆ. ಈ ಹಿನ್ನೆಲೆಯಲ್ಲಿ ಗ್ರಾಮೀಣ ರಸ್ತೆಗಳ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಲಾಗುತ್ತಿದೆ ಎಂದು ಹೇಳಿದರು.

ಗ್ರಾಮೀಣ ಭಾಗದಲ್ಲಿ ರಸ್ತೆ ಅಭಿವೃದ್ಧಿಯಾದರೆ ಕೇವಲ ಸಂಚಾರ ವ್ಯವಸ್ಥೆ ಸುಧಾರಿಸುವುದಷ್ಟೇ ಅಲ್ಲದೆ, ಆ ಪ್ರದೇಶದ ಆರ್ಥಿಕ ಮತ್ತು ಸಾಮಾಜಿಕ ಬೆಳವಣಿಗೆಗೂ ಸಹಕಾರಿಯಾಗುತ್ತದೆ. ರೈತರು ಬೆಳೆದ ಬೆಳೆಗಳನ್ನು ಸಮಯಕ್ಕೆ ಸರಿಯಾಗಿ ಮಾರುಕಟ್ಟೆಗೆ ತಲುಪಿಸಲು, ಸುಗಮವಾಗಿ ನಡೆಸಲು ಉತ್ತಮ ರಸ್ತೆ ವ್ಯವಸ್ಥೆ ಅಗತ್ಯವಾಗಿದೆ. ಮಳೆಗಾಲದಲ್ಲಿ ರಸ್ತೆಗಳು ಹದಗೆಟ್ಟು ಸಾರ್ವಜನಿಕರು ಎದುರಿಸುವ ಸಮಸ್ಯೆಗಳನ್ನು ನಿವಾರಿಸುವ ನಿಟ್ಟಿನಲ್ಲಿ ಶಾಶ್ವತ ಗುಣಮಟ್ಟದ ರಸ್ತೆ ನಿರ್ಮಾಣಕ್ಕೆ ಆದ್ಯತೆ ನೀಡಬೇಕಾಗಿದೆ. ವರ್ಷಗಳಿಂದ ರಸ್ತೆ ದುರಸ್ತಿಗಾಗಿ ಕಾಯುತ್ತಿರುವ ಗ್ರಾಮೀಣ ಭಾಗದ ಜನರ ಸಮಸ್ಯೆಗಳನ್ನು ಗಮನದಲ್ಲಿಟ್ಟುಕೊಂಡು ಆದ್ಯತೆಯ ಮೇರೆಗೆ ರಸ್ತೆ ಅಭಿವೃದ್ಧಿ ಕಾಮಗಾರಿಗಳನ್ನು
ಕೈಗೆತ್ತಿಕೊಳ್ಳಲಾಗುತ್ತಿದೆ. ರಸ್ತೆ ಕಾಮಗಾರಿಗಳು ಕೇವಲ ದಾಖಲೆಗಳಿಗೆ ಸೀಮಿತವಾಗದೆ,
ಸಾರ್ವಜನಿಕರಿಗೆ ದೀರ್ಘಕಾಲದವರೆಗೆ ಉಪಯೋಗವಾಗುವ ರೀತಿಯಲ್ಲಿ ನಿರ್ಮಾಣವಾಗಬೇಕು.
ಕಾಮಗಾರಿಯ ಗುಣಮಟ್ಟ, ಪ್ರಗತಿ ಹಾಗೂ ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸುವ ಬಗ್ಗೆ
ಸಂಬAಧಪಟ್ಟ ಅಧಿಕಾರಿಗಳು ವಿಶೇಷ ಗಮನಹರಿಸಬೇಕು. ಸಾರ್ವಜನಿಕರ ತೆರಿಗೆ ಹಣ
ಸದ್ಬಳಕೆಯಾಗುವಂತೆ ಗುಣಮಟ್ಟದ ಕಾಮಗಾರಿಗಳನ್ನು ನಿರ್ವಹಿಸಬೇಕು ಎಂದು ಸೂಚಿಸಿದರು.

ಚಿತ್ರದುರ್ಗ ವಿಧಾನಸಭಾ ಕ್ಷೇತ್ರದ ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ರಸ್ತೆ, ಚರಂಡಿ, ಕುಡಿಯುವ ನೀರು, ಕೆರೆಗಳ ಅಭಿವೃದ್ಧಿ, ಮೂಲಸೌಕರ್ಯ ಸೇರಿದಂತೆ ಜನರ ದೈನಂದಿನ ಬದುಕಿಗೆ ಅಗತ್ಯವಿರುವ ಕಾಮಗಾರಿಗಳನ್ನು ಗುರುತಿಸಿ ಹಂತ ಹಂತವಾಗಿ ಅನುಷ್ಠಾನಗೊಳಿಸಲಾಗುತ್ತಿದೆ. ಗ್ರಾಮೀಣ ಪ್ರದೇಶಗಳ ಅಭಿವೃದ್ಧಿಗೆ ವಿಶೇಷ ಗಮನಹರಿಸುವ ಮೂಲಕ ಪ್ರತಿಯೊಂದು ಗ್ರಾಮಕ್ಕೂ ಅಗತ್ಯ ಸೌಲಭ್ಯಗಳನ್ನು ಕಲ್ಪಿಸುವ ಪ್ರಯತ್ನ ಮಾಡಲಾಗುತ್ತಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ತಹಸಿಲ್ದಾರ್ ಫಾತಿಮಾ, ಪಿಡಬ್ಲ್ಯೂಡಿ ಎ ಡಬಲ್ ಲಾಲ್ ಸಾಬ್, ಪವನ್
ಮಂಜುನಾಥ್, ಕೆಡಿಪಿ ಸದಸ್ಯರಾದ ಸಂತೋಷ್ ಹಾಗೂ ಮುಖಂಡರಾದ ಹಳಿಯೂರು ನಾಗಣ್ಣ,
ಕುಮಾರ್, ಮಂಜಣ್ಣ, ಮುನ್ನವರ್ ಜಾಕಿರ್ ಹುಸೇನ್ ತಿಪ್ಪೇಸ್ವಾಮಿ ಜಯಮ್ಮ ಲಾವಣ್ಯ ಬೆನ್ನೂರು ಅಜ್ಜಣ್ಣ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

ಬಾಕ್ಸ್:
ಅಭಿವೃದ್ಧಿ ಎನ್ನುವುದು ಯಾವುದೇ ಒಂದು ಗ್ರಾಮಕ್ಕೆ ಅಥವಾ ಒಂದು ವರ್ಗಕ್ಕೆ ಸೀಮಿತವಾಗಬಾರದು. ಕ್ಷೇತ್ರದ ಪ್ರತಿಯೊಂದು ಭಾಗದ ಜನರಿಗೂ ಅಭಿವೃದ್ಧಿಯ ಫಲ ತಲುಪಬೇಕು. ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸಿ, ಜನರ ನಿರೀಕ್ಷೆ ಹಾಗೂ ಅಗತ್ಯಗಳಿಗೆ ಅನುಗುಣವಾಗಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುತ್ತಿದೆ. ಪಕ್ಷ, ಜಾತಿ, ಧರ್ಮದ ಭೇದವಿಲ್ಲದೆ ಎಲ್ಲ ಗ್ರಾಮಗಳಿಗೂ ಸಮಾನ ಆದ್ಯತೆ ನೀಡುವುದು ನನ್ನ ಬದ್ಧತೆಯಾಗಿದೆ. ಕ್ಷೇತ್ರದ ಅಭಿವೃದ್ಧಿಯೇ ನನ್ನ ಮೊದಲ ಆದ್ಯತೆಯಾಗಿದ್ದು, ಜನರ ವಿಶ್ವಾಸಕ್ಕೆ ತಕ್ಕಂತೆ ಕೆಲಸ ಮಾಡುತ್ತೇನೆ ಎಂದು ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ತಿಳಿಸಿದರು.

ನಮ್ಮ ಸಮಗ್ರ ಸುದ್ದಿಗಳಿಗಾಗಿ ಕೆಳಗಿನ Social Media ಪುಟಗಳಿಗೆ Follow / Subscribe ಮಾಡಿ.

🟢 WhatsApp Group

Join WhatsApp Group

🔵 Facebook Page

Follow Facebook Page

⚫ Twitter / X

Follow on X (Twitter)

🟣 Threads

Follow on Threads

🟠 Instagram

Follow on Instagram

🔵 Telegram

Join Telegram Channel

🟢 WhatsApp Channel

Follow WhatsApp Channel

📰 ಸಮಗ್ರ ಸುದ್ದಿ

ನಿಖರತೆಗೆ ಮತ್ತೊಂದು ಹೆಸರು

📢 ಸುದ್ದಿ • ಮಾಹಿತಿ • ಶಿಕ್ಷಣ • ಉದ್ಯೋಗ • ಕರ್ನಾಟಕ • ದೇಶ • ಜಗತ್ತು

Leave a Reply

Your email address will not be published. Required fields are marked *