
ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಐಪಿಎಲ್ 2025 (IPL 2025) ಪ್ರಶಸ್ತಿಯನ್ನು ಗೆಲ್ಲುವ ಮೂಲಕ ಇತಿಹಾಸ ನಿರ್ಮಿಸಿತು. ಜೂನ್ 3, 2025 ರಂದು ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಫೈನಲ್‌ನಲ್ಲಿ, ಆರ್‌ಸಿಬಿ ಪಂಜಾಬ್ ಕಿಂಗ್ಸ್ ಅನ್ನು 6 ರನ್‌ಗಳಿಂದ ಸೋಲಿಸಿ ತಮ್ಮ ಮೊದಲ ಐಪಿಎಲ್ ಟ್ರೋಫಿಯನ್ನು ಗೆದ್ದುಕೊಂಡಿತು.
ಫೈನಲ್‌ನಲ್ಲಿ ಆರ್‌ಸಿಬಿ ಮೊದಲು ಬ್ಯಾಟಿಂಗ್ ಮಾಡಿ 190 ರನ್ ಗಳಿಸಿತು. ಇದಕ್ಕೆ ಪ್ರತಿಯಾಗಿ ಪಂಜಾಬ್ ಕಿಂಗ್ಸ್ ತಂಡವು 6 ರನ್‌ಗಳಿಂದ ಸೋಲೊಪ್ಪಿಕೊಂಡಿತು. ಈ ಮೂಲಕ ಆರ್‌ಸಿಬಿ 17 ವರ್ಷಗಳ ದೀರ್ಘ ಕಾಯುವಿಕೆಗೆ ಅಂತ್ಯ ಹಾಡಿತು. ಇದಕ್ಕೂ ಮೊದಲು ಆರ್‌ಸಿಬಿ 2009, 2011 ಮತ್ತು 2016 ರಲ್ಲಿ ಫೈನಲ್‌ನಲ್ಲಿ ಸೋತಿದ್ದರು. ಆದರೆ ಕಳೆದೊಂದು ವರ್ಷದಿಂದ ಆರ್‌ಸಿಬಿ ಅದೃಷ್ಟ ಬದಲಾಗಿದ್ದು, ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆಲ್ಲುವಲ್ಲಿ ಯಶಸ್ವಿಯಾಗಿದೆ.
ಆರ್ಸಿಬಿಗೆ ಬ್ಯಾಕ್ ಟು ಬ್ಯಾಕ್ ಕಪ್
ಹೌದು… ಆರ್‌ಸಿಬಿ ಪುರುಷರ ತಂಡ ಟ್ರೋಫಿ ಗೆಲ್ಲುವುದಕ್ಕೂ ಮುನ್ನ ಮಹಿಳೆಯರ ಪ್ರೀಮಿಯರ್ ಲೀಗ್ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮಹಿಳಾ ತಂಡ ಸ್ಮೃತಿ ಮಂಧಾನ ಅವರ ನಾಯಕತ್ವದಲ್ಲಿ 2024 ರ ಚಾಂಪಿಯನ್ ಆಗಿ ಹೊರಹೊಮ್ಮಿತ್ತು. 2023 ರಿಂದ ಆರಂಭವಾದ ಮಹಿಳೆಯರ ಪ್ರೀಮಿಯರ್ ಲೀಗ್ನ ಮೊದಲ ಆವೃತ್ತಿಯನ್ನು ಮುಂಬೈ ಇಂಡಿಯನ್ಸ್ ಗೆದ್ದುಕೊಂಡರೆ, ಎರಡನೇ ಆವೃತ್ತಿಯಲ್ಲಿ ಆರ್‌ಸಿಬಿ ಚಾಂಪಿಯನ್ ಆಗಿ ಹೊರಹೊಮ್ಮಿತ್ತು. ಈ ಮೂಲಕ ಮಹಿಳಾ ತಂಡ ಆರ್‌ಸಿಬಿ ಅಭಿಮಾನಿಗಳ ಟ್ರೋಫಿ ಬರವನ್ನು ನೀಗಿಸಿತ್ತು. ಆದಾಗ್ಯೂ ಆರ್‌ಸಿಬಿ ಅಭಿಮಾನಿಗಳ ಮನದಲ್ಲಿ ಪುರುಷರ ತಂಡ ಟ್ರೋಫಿ ಗೆಲ್ಲದಿರುವ ಕೊರಗು ಹಾಗೆಯೇ ಉಳಿದಿತ್ತು. ಆದರೆ ಈ ಬಾರಿ ಆ ಬರ ನೀಗಿಸುವಲ್ಲಿ ರಜತ್ ಪಾಟಿದರ್ ನೇತೃತ್ವದ ಆರ್‌ಸಿಬಿ ತಂಡ ಯಶಸ್ವಿಯಾಗಿದೆ.
ಆರ್‌ಸಿಬಿ ಮಹಿಳಾ ತಂಡಕ್ಕೆ 8 ವಿಕೆಟ್ ಜಯ
ದೆಹಲಿಯ ಆರುಣ್ ಜೇಟ್ಲಿ ಮೈದಾನದಲ್ಲಿ ನಡೆದ ಮಹಿಳಾ ಪ್ರೀಮಿಯರ್ ಲೀಗ್ 2024 ರ ಫೈನಲ್ ಪಂದ್ಯದಲ್ಲಿ ಆರ್‌ಸಿಬಿ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಆರ್‌ಸಿಬಿ ಮಹಿಳಾ ತಂಡ ಬಲಿಷ್ಠ ಡೆಲ್ಲಿ ತಂಡವನ್ನು 8 ವಿಕೆಟ್ಗಳಿಂದ ಮಣಿಸಿ ಮೊದಲ ಬಾರಿಗೆ ಚಾಂಪಿಯನ್ ಆಗಿ ಹೊರಹೊಮ್ಮಿತ್ತು. ಆ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಡೆಲ್ಲಿ ತಂಡ ಪೂರ್ಣ 20 ಓವರ್ಗಳನ್ನು ಆಡಲಾಗದೆ 18.3 ಓವರ್ಗಳಲ್ಲಿ ತನ್ನೇಲ್ಲ ವಿಕೆಟ್ ಕಳೆದುಕೊಂಡು 113 ರನ್ ಕಲೆಹಾಕಲಷ್ಟೇ ಶಕ್ತವಾಗಿತ್ತು. ಈ ಗುರಿ ಬೆನ್ನಟ್ಟಿದ ಆರ್‌ಸಿಬಿ ಕೇವಲ 2 ವಿಕೆಟ್ ಕಳೆದುಕೊಂಡು ಇನ್ನು 3 ಎಸೆತಗಳು ಬಾಕಿ ಇರುವಂತೆಯೇ ಗೆಲುವಿನ ದಡ ಸೇರಿತ್ತು.
TV9Kannada