ಕಡಲ ನಗರಿ ಮಂಗಳೂರಿನಲ್ಲೂ ಬಿಸಿಲಿನ ತಾಪ ಏರಿದ್ದು, 35° ಸರಾಸರಿಯಲ್ಲಿ ಕರಾವಳಿ ಭಾಗದಲ್ಲಿ ಈ ಬಾರಿಯ ಮಾರ್ಚ್ನಲ್ಲಿ ತಾಪಮಾನ ದಾಖಲಾಗಿದೆ. ಬಿಸಿಲಿನ ತಾಪ ಏರಿದ್ದರಿಂದ ಮನೆಯೊಳಗೆ ಹಗಲು ಹೊತ್ತು ಕೂರದಂತಹ ಸ್ಥಿತಿ ತುಳುನಾಡಿನಲ್ಲಿ ನಿರ್ಮಾಣವಾಗಿದೆ.
![](https://samagrasuddi.co.in/wp-content/uploads/2024/03/image-279.png)
ಮಂಗಳೂರು: ಕರ್ನಾಟಕದಲ್ಲಿ (Karnataka Weather) ಕಳೆದ ಕೆಲ ವಾರಗಳಿಂದ ಒಂದೇ ಸಮನೆ ರೌದ್ರಾವತಾರ ತೋರುತ್ತಿರುವ ಬಿಸಲು ಜನರ ನೆತ್ತಿ ಸುಡುತ್ತಿದೆ. ಸುಡುವ ಬಿಸಿಲಿಗೆ ಬೆದರಿ ಜನರು ಮನೆಯಿಂದ ಹೊರ ಬರೋಕೆ ಹೆದರುತ್ತಿದ್ದು, ಹವಾಮಾನ ಇಲಾಖೆ ಕೂಡ ಬಿಸಿಲಿನಿಂದ (Temperature Rise) ಪಾರಾಗಲು ಜನರು ಎಚ್ಚರದಿಂದ ಇರುವಂತೆ ಸೂಚನೆ ನೀಡಿದೆ.
ಇನ್ನು ಕಡಲ ನಗರಿ ಮಂಗಳೂರಿನಲ್ಲೂ ಬಿಸಿಲಿನ ತಾಪ ಏರಿದ್ದು, 35° ಸರಾಸರಿಯಲ್ಲಿ ಕರಾವಳಿ ಭಾಗದಲ್ಲಿ ಈ ಬಾರಿಯ ಮಾರ್ಚ್ನಲ್ಲಿ ತಾಪಮಾನ ದಾಖಲಾಗಿದೆ. ಬಿಸಿಲಿನ ತಾಪ ಏರಿದ್ದರಿಂದ ಮನೆಯೊಳಗೆ ಹಗಲು ಹೊತ್ತು ಕೂರದಂತಹ ಸ್ಥಿತಿ ತುಳುನಾಡಿನಲ್ಲಿ ನಿರ್ಮಾಣವಾಗಿದ್ದು, ಜನರು ಬಿಸಿಲಿನ ಬೇಗೆಯಿಂದ ತಪ್ಪಿಸಿಕೊಳ್ಳಲು ಇನ್ನಿಲ್ಲದ ಸರ್ಕಸ್ ಮಾಡುತ್ತಿದ್ದಾರೆ. ಈತನ್ಮಧ್ಯೆ ಪುತ್ತೂರಿನ ಪರ್ಲಡ್ಕ ಸಮೀಪ ಮನೆಯೊಂದರಲ್ಲಿ ಹಂಚಿನ ಮನೆಯ ಮೇಲೆ ಸ್ಪ್ರಿಂಕ್ಲರ್ ಮೂಲಕ ನೀರು ಹಾಕಿ ತಾಪಮಾನದಿಂದ ಪಾರಾಗಲು ಪ್ರಯತ್ನ ಪಟ್ಟಿದ್ದಾರೆ.
ಮನೆಯ ಮೇಲೆ ಸ್ಪ್ರಿಂಕ್ಲರ್ ಹಾಕಿ ನೀರು ಸಿಂಪಡಿಸುವ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಇದರಿಂದ ಜನರು ಯಾವ ಮಟ್ಟಿಗೆ ಬಿಸಿಲಿನ ಬೇಗೆಯಿಂದ ಬಳಲುತ್ತಿರಬಹುದು ಎಂದು ಅಂದಾಜಿಸಲಾಗಿದೆ. ಪುತ್ತೂರಿನಲ್ಲಿ 41 ಡಿಗ್ರಿ ಸೆಲ್ಸಿಯಸ್ ನವರೆಗೆ ಮಧ್ಯಾಹ್ನದ ವೇಳೆ ಬಿಸಿಲಿನ ತಾಪ ಏರಿಕೆಯಾಗಿದ್ದು, ಸುಡುವ ಬಿಸಿಲಿನಿಂದ ಪಾರಾಗಲು ಜನರು ಮಧ್ಯಾಹ್ನ ವೇಳೆಗೆ ಮನೆಯಿಂದ ಹೊರಗೆ ಬಾರದೆ ಮನೆಯಲ್ಲೇ ಕಾಲ ಕಳೆಯುತ್ತಿದ್ದಾರೆ.
ಬಿಸಿಲಿನ ಹೊಡೆತಕ್ಕೆ ರಾಜ್ಯದಲ್ಲಿ ಮೊದಲ ಜೀವ ಬಲಿ?
ಈತನ್ಮಧ್ಯೆ ಕಲಬುರಗಿಯಲ್ಲಿ ರಣ ಬಿಸಿಲಿಗೆ ಜೀವವೇ ಬಲಿಯಾಯ್ತಾ ಅನ್ನುವ ಅನುಮಾನ ಸೃಷ್ಟಿಯಾಗಿದೆ. ಹೌದು.. ನರೇಗಾ ಕೂಲಿ ಕೆಲಸ ಮಾಡುವಾಗ ವ್ಯಕ್ತಿಯೊಬ್ಬರು ಕುಸಿದು ಬಿದ್ದು ಸಾವನ್ನಪ್ಪಿದ್ದು, ಬಿಸಿಲಿನ ತಾಪದಿಂದ ಅಥವಾ ಹೃದಯಾಘಾತದಿಂದ ಸಾವನ್ನಪ್ಪಿರುವ ಬಗ್ಗೆ ಅವರ ಪತ್ನಿ ಶಂಕೆ ವ್ಯಕ್ತಪಡಿಸಿದ್ದಾರೆ.
ಕಲಬುರಗಿ ಜಿಲ್ಲೆಯ ಆಳಂದ ತಾಲ್ಲೂಕಿನ ದಣ್ಣೂರ ಗ್ರಾಮದಲ್ಲಿ ಈ ಘಟನೆ ಸಂಭವಿಸಿದ್ದು, ಶರಣಪ್ಪ ಸಮಗಾರ (42) ಎಂಬುವರು ನರೇಗಾ ಕೆಲಸ ಮಾಡುವಾಗ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ. ಬಿಸಿಲಿನ ಹೊಡೆತಕ್ಕೆ ಶರಣಪ್ಪನ ಸಾವನ್ನಪ್ಪಿದ್ರಾ? ಅಥವಾ ಹೃದಯಾಘಾತದಿಂದ ಸಾವನ್ನಪ್ಪಿರೋದಾ ಎಂಬ ಬಗ್ಗೆ ಅನುಮಾನ ವ್ಯಕ್ತವಾಗಿದ್ದು, ಶರಣಪ್ಪ ಸಮಗಾರ ಮರಣೋತ್ತರ ಪರೀಕ್ಷೆ ವರದಿಗಾಗಿ ಅಧಿಕಾರಿಗಳು ಕಾಯುತ್ತಿದ್ದಾರೆ. ಘಟನೆ ಸಂಬಂಧ ಕಲಬುರಗಿ ಜಿಲ್ಲೆಯ ನರೋಣಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಈ ಬಾರಿ ರಾಜ್ಯದ ಎರಡು ಜಿಲ್ಲೆಗಳಲ್ಲಿ ಬಿಸಿಲಿನ ತಾಪಮಾನ 40° ದಾಟಿದ್ದು, ಬಾಗಲಕೋಟೆ 40.6° ಹಾಗೂ ಕಲಬುರಗಿಯಲ್ಲಿ 40.9° ತಾಪಮಾನ ದಾಖಲಾಗಿದೆ. ಬೆಂಗಳೂರಲ್ಲಿ 1996ರ ಬಳಿಕ ಅತಿ ಹೆಚ್ಚು ತಾಪಮಾನ ಮಾರ್ಚ್ನಲ್ಲಿ ದಾಖಲಾಗಿದೆ. 1996ರಲ್ಲಿ ಬೆಂಗಳೂರಲ್ಲಿ 37.3° ನಷ್ಟು ತಾಪಮಾನ ದಾಖಲಾಗಿತ್ತು. ಈ ಬಾರಿ ಬೆಂಗಳೂರಲ್ಲಿ ಮಾರ್ಚ್ನಲ್ಲಿ 36° ಸರಾಸರಿಯಲ್ಲಿ ತಾಪಮಾನ ದಾಖಲಾಗಿರುವ ಬಗ್ಗೆ ಮಾಹಿತಿ ಸಿಕ್ಕಿದೆ.
ಉಳಿದಂತೆ ಈ ಬೇಸಿಗೆಯಲ್ಲಿ ಉತ್ತರ ಕರ್ನಾಟಕದ ಕೆಲವು ಭಾಗದಲ್ಲಿ ದಾಖಲೆಯ ತಾಪಮಾನ ದಾಖಲಾಗಿದೆ. ಕೊಪ್ಪಳ, ರಾಯಚೂರು, ಗದಗ, ಬಳ್ಳಾರಿ, ವಿಜಯಪುರ ಜಿಲ್ಲೆಗಳಲ್ಲಿ ಅಧಿಕ ತಾಪಮಾನ ಇದೆ. 1996ರಲ್ಲಿ ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಗರಿಷ್ಠ 44.6°ಕ್ಕೆ ಏರಿದ್ದ ಬೇಸಿಗೆಯ ಧಗೆ, ಬಳಿಕ ಇದೇ ಮೊದಲ ಬಾರಿಗೆ ಉತ್ತರ ಕರ್ನಾಟಕ ಭಾಗದಲ್ಲಿ 40° ದಾಟಿದೆ.
ನಮ್ಮ ಸಮಗ್ರ ಸುದ್ದಿಗಳಿಗಾಗಿ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
WhatsApp Group: https://chat.whatsapp.com/KnDIfiBURQ9G5sLEJLqshk
Facebook page: https://www.facebook.com/samagrasudii
Sharechat: https://sharehat.com/profile/edu514826335?d=n
Twitter: https://twitter.com/SuddiSamagra
Threads: https://www.threads.net/@samagrasuddi.co.in
Instagram: https://www.instagram.com/samagrasuddi.co.in/
Telegram: https://t.me/+E1ubNzdguQ5jN2Y1