ಹಾಸನ : ಸಿಡಿಲು ಬಡಿದು ಇಬ್ಬರು ಮಹಿಳೆಯರು ಸ್ಥಳದಲ್ಲೇ ಮೃತಪಟ್ಟ ದುರ್ಘಟನೆ ಹಾಸನ ಜಿಲ್ಲೆ ಅರಕಲಗೂಡಿನ ದೊಡ್ಡಮಗ್ಗೆ ಗ್ರಾಮದಲ್ಲಿ ನಡೆದಿದೆ.
![](https://samagrasuddi.co.in/wp-content/uploads/2024/06/image-45.png)
ಮೃತರನ್ನು ಮುತ್ತಮ (70) ಪುಟ್ಟಮ್ಮ (60) ಎಂದು ಗುರುತಿಸಲಾಗಿದೆ. ಹೊಲದಲ್ಲಿ ಜೋಳ ಬಿತ್ತನೆ ಮಾಡುತ್ತಿದ್ದ ಕುಟುಂಬ ಆಶ್ರಯ ಪಡೆಯಲು ಮರದ ಕೆಳಗೆ ನಿಂತಿದ್ದಾಗ ಸಿಡಿಲು ಬಡಿದಿದೆ. ಈ ದುರ್ಘಟನೆಯಲ್ಲಿ ಇಬ್ಬರು ಮೃತಪಟ್ಟಿದ್ದು, ಮೂವರಿಗೆ ಗಂಭೀರ ಗಾಯಗಳಾಗಿದೆ. ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.