
ಇಂದು ಐಪಿಎಲ್ ಎಲಿಮಿನೇಟರ್ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಮತ್ತು ಲಕ್ನೋ ಸೂಪರ್ ಜೈಂಟ್ಸ್ ತಂಡಗಳು ಮುಖಾಮುಖಿಯಾಗಿವೆ. ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ಪಂದ್ಯ ನಡೆಯಲಿದೆ. ಇಂದಿನ ಪಂದ್ಯದಲ್ಲಿ ಸೋಲುವ ತಂಡ ಟೂರ್ನಿಯಿಂದ ಹೊರ ಬಿದ್ರೆ, ಗೆಲ್ಲುವ ತಂಡ ಕ್ವಾಲಿಫೈಯರ್ 1ನೇ ಪಂದ್ಯದಲ್ಲಿ ಸೋತ ತಂಡದ ಜೊತೆಗೆ ಕ್ವಾಲಿಫೈಯರ್ 2ರಲ್ಲಿ ಕಣಕ್ಕಿಳಿಯಲಿದೆ.