LSG vs RCB, IPL 2023: ಐಪಿಎಲ್​ನಲ್ಲಿಂದು ಆರ್​ಸಿಬಿ ಪಂದ್ಯ: ಲಖನೌ ವಿರುದ್ಧದ ಪಂದ್ಯಕ್ಕೆ ಮಾಡಿದೆ ಮಾಸ್ಟರ್ ಪ್ಲಾನ್

LSG vs RCB, IPL 2023: ಐಪಿಎಲ್​ನಲ್ಲಿಂದು ಆರ್​ಸಿಬಿ ಪಂದ್ಯ: ಲಖನೌ ವಿರುದ್ಧದ ಪಂದ್ಯಕ್ಕೆ ಮಾಡಿದೆ ಮಾಸ್ಟರ್ ಪ್ಲಾನ್
LSG vs RCB IPL 2023

16ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿಂದು (IPL 2023) ಫಾಪ್ ಡುಪ್ಲೆಸಿಸ್ ನಾಯಕತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಕೆಎಲ್ ರಾಹುಲ್ ನೇತೃತ್ವದ ಲಖನೌ ಸೂಪರ್ ಜೇಂಟ್ಸ್ (LSG vs RCB) ಅನ್ನು ಎದುರಿಲಿದೆ. ಲಖನೌದ ಭಾರತ್ ರತ್ನ ಶ್ರೀ ಅಟಲ್ ಬಿಹಾರಿ ಏಕಾನ ಸ್ಟೇಡಿಯಂನಲ್ಲಿ ಈ ಪಂದ್ಯವನ್ನು ಏರ್ಪಡಿಸಲಾಗಿದ್ದು, ಹೈವೋಲ್ಟೇಜ್ ಕದನ ನಿರೀಕ್ಷಿಸಲಾಗಿದೆ. ಆರ್​ಸಿಬಿ ಆಡಿದ ಎಂಟು ಪಂದ್ಯಗಳಲ್ಲಿ ತಲಾ ನಾಲ್ಕು ಗೆಲುವು-ಸೋಲು ಕಂಡು ಆರನೇ ಸ್ಥಾನದಲ್ಲಿದ್ದರೆ ಲಖನೌ ಐದು ಗೆಲುವು, ಮೂರು ಸೋಲುಂಡು ದ್ವಿತೀಯ ಸ್ಥಾನದಲ್ಲಿದೆ.

ಆರ್​ಸಿಬಿ:

ಆರ್​ಸಿಬಿ ತಂಡದ ಬ್ಯಾಟಿಂಗ್ ವಿಭಾಗದಲ್ಲಿ ಬದಲಾವಣೆ ಅಥವಾ ಹೊಸ ಯೋಜನೆ ರೂಪಿಸಬೇಕಿದೆ. ಯಾಕೆಂದರೆ ವಿರಾಟ್ ಕೊಹ್ಲಿ, ಗ್ಲೆನ್ ಮ್ಯಾಕ್ಸ್​ವೆಲ್ ಹಾಗೂ ಫಾಫ್ ಡುಪ್ಲೆಸಿಸ್ ಬಿಟ್ಟರೆ ಆರ್​ಸಿಬಿ ಪರ ಮತ್ಯಾವ ಬ್ಯಾಟರ್​ಗಳು ಕೂಡ ಮಿಂಚುತ್ತಿಲ್ಲ. ಈ ಮೂವರ ಮೇಲೆ ಆರ್​ಸಿಬಿ ಸಂಪೂರ್ಣ ಅವಲಂಬಿತವಾಗಿದೆ. ಕೊಹ್ಲಿ, ಫಾಫ್, ಮ್ಯಾಕ್ಸಿ ಬೇಗನೆ ಔಟಾದರೆ ತಂಡದ ಮೊತ್ತ 100ರ ಗಟಿ ದಾಟುವುದು ಅನುಮಾನ. ಹೀಗಾಗಿ ಬ್ಯಾಟಿಂಗ್​​ನಲ್ಲಿ ಓರ್ವ ಪ್ಲೇಯರ್ ಬರಬೇಕಿದೆ. ಐಪಿಎಲ್ ಆರಂಭಕ್ಕೂ ಮುನ್ನ ಅಭ್ಯಾಸ ಪಂದ್ಯದಲ್ಲಿ ಮಿಂಚಿದ್ದ ಮಿಚೆಲ್ ಬ್ರೇಸ್​ವೆಲ್​ಗೆ ಅವಕಾಶ ಸಿಗುತ್ತಾ ನೋಡಬೇಕಿದೆ.

IPL 2023: LSG ವಿರುದ್ಧ ಸೇಡು ತೀರಿಸಿಕೊಳ್ಳುತ್ತಾ RCB?

ಬೌಲಿಂಗ್​ನಲ್ಲಿ ಆರ್​ಸಿಬಿ ಮಾರಕವಾಗಿ ಗೋಚರಿಸುತ್ತಿಲ್ಲ. ಪರ್ಪಲ್ ಕ್ಯಾಪ್ ತೊಟ್ಟಿರುವ ಮೊಹಮ್ಮದ್ ಸಿರಾಜ್ ಮಾತ್ರ ಅಪಾಯಕಾರಿ ಆಗಿದ್ದಾರೆ. ಹರ್ಷಲ್ ಪಟೇಲ್ ಪದೇ ಪದೇ ದುಬಾರಿ ಆಗುತ್ತಿದ್ದಾರೆ. ಮೊಣಕಾಲಿನ ಗಾಯದ ಸಮಸ್ಯೆಯ ಕಾರಣ ಐಪಿಎಲ್​ನ ಮೊದಲಾರ್ಧದಿಂದ ಹೊರಗುಳಿದಿದ್ದ ಆರ್​ಸಿಬಿ ವೇಗಿ ಜೋಶ್ ಹ್ಯಾಜಲ್​ವುಡ್ ಇದೀಗ ಸಂಪೂರ್ಣ ಫಿಟ್​ ಆಗಿದ್ದಾರೆ. ಹೀಗಾಗಿ ಇಂದಿನ ಪಂದ್ಯದಲ್ಲಿ ಕಣಕ್ಕಿಳಿಯಬಹುದು. ಹ್ಯಾಜಲ್​ವುಡ್​ ಪ್ಲೇಯಿಂಗ್ ಇಲೆವೆನ್​ನ ಭಾಗವಾದರೆ ತಂಡದಿಂದ ಡೇವಿಡ್ ವಿಲ್ಲಿ ಅಥವಾ ವನಿಂದು ಹಸರಂಗ ಹೊರಗುಳಿಯಬೇಕಾಗಬಹುದು.

ಲಖನೌ:

ಲಖನೌ ತಂಡ ಬ್ಯಾಟಿಂಗ್​ನಲ್ಲಿ ಅತ್ಯಂತ ಬಲಿಷ್ಠವಾಗಿದೆ. ತಂಡದ ನಾಯಕ ಕೆಎಲ್ ರಾಹುಲ್ ಕಳಪೆ ಆಟ ಆಡುತ್ತಿದ್ದರೂ ತಂಡಕ್ಕೆ ಮಾತ್ರ ಯಾವುದೇ ಹೊಡೆತ ಬೀಳುತ್ತಿಲ್ಲ. ಎಲ್​ಎಸ್​ಜಿಯಲ್ಲಿ ಮಧ್ಯಮ ಕ್ರಮಾಂಕದ ಬ್ಯಾಟರ್​ಗಳು ಪಂದ್ಯವನ್ನು ಗೆಲ್ಲಿಸಿಕೊಡುತ್ತಿದ್ದಾರೆ. ಹಿಂದಿನ ಪಂದ್ಯದಲ್ಲಿ ಪಂಜಾಬ್ ವಿರುದ್ಧ ದಾಖಲೆಯ 257 ರನ್ ಸಿಡಿಸಿದ್ದರು.

ಖೈಲ್ ಮೇಯರ್ಸ್ ತಂಡಕ್ಕೆ ಭರ್ಜರಿ ಆರಂಭ ಒದಗಿಸುತ್ತಿದ್ದಾರೆ. ಆಯುಷ್ ಬದೋನಿ, ಮಾರ್ಕಸ್ ಸ್ಟಾಯಿನಿಸ್ ಹಾಗೂ ನಿಕೋಲಸ್ ಪೂರನ್ ಮಧ್ಯಮ ಕ್ರಮಾಂಕದ ಬಲವಾಗಿದ್ದು ತಂಡದ ಗೆಲುವಿನಲ್ಲಿ ಮುಖ್ಯ ಪಾತ್ರವಹಿಸುತ್ತಿದ್ದಾರೆ. ದೀಪಕ್ ಹೂಡ ಕಡೆಯಿಂದ ಇನ್ನಷ್ಟು ಉತ್ತಮ ಆಟ ಬರಬೇಕಿದೆ. ಕ್ರುನಾಲ್ ಪಾಂಡ್ಯ ಕೂಡ ಆಲ್ರೌಂಡ್ ಪ್ರದರ್ಶನ ತೋರಬೇಕಿದೆ. ಬೌಲಿಂಗ್​ನಲ್ಲಿ ನವೀನ್ ಉಲ್ ಹಖ್, ಆವೇಶ್ ಖಾನ್, ರವಿ ಬಿಷ್ಟೋಯಿ ಹಾಗೂ ಅಮಿತ್ ಮಿಶ್ರಾ ಉತ್ತಮ ಫಾರ್ಮ್​ನಲ್ಲಿದ್ದಾರೆ.

ಆರ್​ಸಿಬಿ ತಂಡ: ಫಾಫ್ ಡುಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ಮೊಹಮ್ಮದ್ ಸಿರಾಜ್, ಹರ್ಷಲ್ ಪಟೇಲ್, ದಿನೇಶ್ ಕಾರ್ತಿಕ್ (ವಿಕೆಟ್‌ ಕೀಪರ್), ಶಹಬಾಜ್ ಅಹಮದ್, ಅನುಜ್ ರಾವತ್, ಆಕಾಶ್ ದೀಪ್, ಮಹಿಪಾಲ್ ಲೊಮ್ರೊರ್, ಫಿನ್ ಅಲೆನ್, ಸುಯಶ್ ಪ್ರಭುದೇಸಾಯಿ, ಕರ್ಣ್ ಶರ್ಮಾ, ಸಿದ್ಧಾರ್ಥ್ ಕೌಲ್, ಡೇವಿಡ್ ವಿಲಿ, ವೇಯ್ನ್ ಪಾರ್ನೆಲ್, ಹಿಮಾಂಶು ಶರ್ಮಾ, ಮನೋಜ್ ಬಾಂಢಗೆ, ರಾಜನ್‌ ಕುಮಾರ್, ಅವಿನಾಶ್ ಸಿಂಗ್, ಸೋನು ಯಾದವ್, ಮಿಚೆಲ್ ಬ್ರೇಸ್‌ವೆಲ್.

ಲಖನೌ ತಂಡ: ಕೆಎಲ್ ರಾಹುಲ್ (ನಾಯಕ), ಖೈಲ್ ಮೇಯರ್ಸ್, ದೀಪಕ್ ಹೂಡಾ, ಕ್ರುನಾಲ್ ಪಾಂಡ್ಯ, ಮಾರ್ಕಸ್ ಸ್ಟೋಯಿನಿಸ್, ನಿಕೋಲಸ್ ಪೂರನ್, ಆಯುಷ್ ಬದೋನಿ, ಮಾರ್ಕ್ ವುಡ್, ಜಯದೇವ್ ಉನಾದ್ಕಟ್, ರವಿ ಬಿಷ್ಣೋಯ್, ಅವೇಶ್ ಖಾನ್, ಕೃಷ್ಣಪ್ಪ ಗೌತಮ್, ಪ್ರೇರಕ್ ಮಂಕಡ್, ಸ್ವಪ್ನಿಲ್ ಸಿಂಗ್, ನವೀನ್-ಉಲ್-ಹಕ್, ಯಶ್ ಠಾಕೂರ್, ಡೇನಿಯಲ್ ಸಾಮ್ಸ್, ರೊಮಾರಿಯೋ ಶೆಫರ್ಡ್, ಯುದ್ವೀರ್ ಸಿಂಗ್ ಚರಕ್, ಮಯಾಂಕ್ ಯಾದವ್, ಅಮಿತ್ ಮಿಶ್ರಾ, ಮನನ್ ವೋಹ್ರಾ.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

source https://tv9kannada.com/sports/cricket-news/lsg-vs-rcb-royal-challengers-bangalore-will-be-taking-on-the-lsg-in-tata-ipl-2023-at-ekana-stadium-vb-au48-567306.html

Leave a Reply

Your email address will not be published. Required fields are marked *