India vs England Live Score World Cup 2023: ಇಂಗ್ಲೆಂಡ್ ನಾಯಕ ಜೋಸ್ ಬಟ್ಲರ್ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಿದ್ದರು. ಭಾರತ ತಂಡ ನಿಗದಿತ 50 ಓವರ್’ಗಳಲ್ಲಿ 9 ವಿಕೆಟ್ ಕಳೆದುಕೊಂಡು ಕೇವಲ 229 ರನ್ ಗಳಿಸಲಷ್ಟೇ ಶಕ್ತವಾಯಿತು. ಇನ್ನು ನಾಯಕ ರೋಹಿತ್ ಶರ್ಮಾ 87 ರನ್’ಗಳ ಗರಿಷ್ಠ ಕೊಡುಗೆ ನೀಡಿದರು.
![](https://samagrasuddi.co.in/wp-content/uploads/2023/10/image-142-300x169.png)
India vs England Live Score World Cup 2023: ವಿಶ್ವಕಪ್’ನ 29 ನೇ ಪಂದ್ಯವು ಭಾರತ ಮತ್ತು ಇಂಗ್ಲೆಂಡ್ ನಡುವೆ ಲಕ್ನೋದ ಎಕಾನಾ ಸ್ಟೇಡಿಯಂನಲ್ಲಿ ನಡೆದಿದೆ. ಈ ಪಂದ್ಯದಲ್ಲಿ ಭಾರತ ಭರ್ಜರಿ ಗೆಲುವು ಸಾಧಿಸಿದ್ದು, ಸೆಮಿಫೈನಲ್’ಗೆ ಬಹುತೇಕ ಲಗ್ಗೆ ಇಟ್ಟಿದೆ.
ಇಂಗ್ಲೆಂಡ್ ನಾಯಕ ಜೋಸ್ ಬಟ್ಲರ್ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಿದ್ದರು. ಭಾರತ ತಂಡ ನಿಗದಿತ 50 ಓವರ್’ಗಳಲ್ಲಿ 9 ವಿಕೆಟ್ ಕಳೆದುಕೊಂಡು ಕೇವಲ 229 ರನ್ ಗಳಿಸಲಷ್ಟೇ ಶಕ್ತವಾಯಿತು. ಇನ್ನು ನಾಯಕ ರೋಹಿತ್ ಶರ್ಮಾ 87 ರನ್’ಗಳ ಗರಿಷ್ಠ ಕೊಡುಗೆ ನೀಡಿದರು. ಇವರಲ್ಲದೆ ಸೂರ್ಯಕುಮಾರ್ ಯಾದವ್ 49 ರನ್ ಮತ್ತು ಕೆಎಲ್ ರಾಹುಲ್ 39 ರನ್ ಗಳಿಸಿದರು. ಇಂಗ್ಲೆಂಡ್ ಪರ ಡೇವಿಡ್ ವಿಲ್ಲಿ 3 ವಿಕೆಟ್ ಪಡೆದರೆ, ಕ್ರಿಸ್ ವೋಕ್ಸ್ ಮತ್ತು ಆದಿಲ್ ರಶೀದ್ ತಲಾ 2 ವಿಕೆಟ್ ಪಡೆದರು. ಮಾರ್ಕ್ ವುಡ್ ಕೂಡ ಒಂದು ವಿಕೆಟ್ ಪಡೆದರು.
ಇನ್ನು ಈ ಪಂದ್ಯದಲ್ಲಿ ಗೆಲುವು ಸಾಧಿಸುವ ಮೂಲಕ ಭಾರತ 20 ವರ್ಷಗಳ ಹಳೆಯ ಸೇಡನ್ನು ತೀರಿಸಿಕೊಂಡಿದೆ. ಅಷ್ಟೇ ಅಲ್ಲದೆ, ಬಹುತೇಕ ಸೆಮಿಫೈನಲ್’ಗೆ ಲಗ್ಗೆ ಇಟ್ಟಿದೆ. ಇದುವರೆಗೆ ಒಂದೇ ಒಂದು ಪಂದ್ಯದಲ್ಲೂ ಸೋಲು ಕಾಣದ ಭಾರತ ನೆಟ್ ರನ್ ರೇಟ್ ಕೂಡ ಉತ್ತಮವಾಗಿದ್ದು, ಪಾಯಿಂಟ್ ಟೇಬಲ್’ನಲ್ಲಿ ಅಗ್ರ ನಾಲ್ಕರಲ್ಲಿ ಸ್ಥಾನ ಪಡೆದಿದೆ, ಈ ಎಲ್ಲಾ ಲೆಕ್ಕಾಚಾರದ ಆಧಾರದಲ್ಲಿ ಸೆಮಿಫೈನಲ್ ಪ್ರವೇಶಿಸುವಲ್ಲಿ ಭಾರತ ಯಶಸ್ವಿಯಾಗಿದೆ.
ಇನ್ನು ಭಾರತದ ಪರ ಸ್ಪಿನ್ನರ್’ಗಳು ಮೋಡಿ ಮಾಡಿದ್ದು, ಮೊಹಮ್ಮದ್ ಶಮಿ, ಜಸ್ಪ್ರೀತ್ ಬುಮ್ರಾ, ಕುಲ್ದೀಪ್ ಯಾದವ್, ರವೀಂದ್ರ ಜಡೇಜಾ ಕೈಚಳಕದಿಂದ ಟೀಂ ಇಂಡಿಯಾಗೆ ಗೆಲುವು ತಂದುಕೊಟ್ಟಿದ್ದಾರೆ,
ನಮ್ಮ ಸಮಗ್ರ ಸುದ್ದಿಗಳಿಗಾಗಿ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
WhatsApp Group : https://chat.whatsapp.com/KnDIfiBURQ9G5sLEJLqshk
Facebook page: https://www.facebook.com/samagrasudii
Sharechat: https://sharechat.com/profile/edu514826335?d=n
Twitter: https://twitter.com/SuddiSamagra
Threads: https://www.threads.net/@samagrasuddi.co.in
Instagram: https://www.instagram.com/samagrasuddi.co.in/
Telegram: https://t.me/+E1ubNzdguQ5jN2Y1