ಚಿತ್ರದುರ್ಗ ಆ, 9
ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817
ಈ ಮೊದಲು ಭೋವಿ ನಿಗಮದ ಅಧ್ಯಕ್ಷರಾಗಿದ್ದ ಎಸ್.ರವಿಕುಮಾರ್ ಅವರು ತಮ್ಮ ಮೇಲೆ ಭ್ರಷ್ಟಾಚಾರದ ಆರೋಪ ಕೇಳಿ ಬಂದ ಹಿನ್ನೆಲೆ ತಮ್ಮ ಸ್ಥಾನಕ್ಕೆ. ರಾಜೀನಾಮೆಯನ್ನು ನೀಡಿದ್ದರು. ಇದೀಗ ಆ ಸ್ಥಾನಕ್ಕೆ ಅಧ್ಯಕ್ಷರನ್ನಾಗಿ ಚಿತ್ರದುರ್ಗದ ರಾಮಪ್ಪ ಎಂ. ನೇರಲಗುಂಟೆ ಅವರನ್ನು ಭೋವಿ ನಿಗಮದ ಅಧ್ಯಕ್ಷರಾಗಿ ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.
ಈ ಆದೇಶ ಹೊರಡಿಸುವುದಕ್ಕೆ ಮುಖ್ಯ ಕಾರ್ಯದರ್ಶಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚನೆ ನೀಡಿದ್ದು, ಕರ್ನಾಟಕ ಭೋವಿ ನಿಗಮಕ್ಕೆ ಎಂ.ರಾಮಪ್ಪ ನೇರಲಗುಂಟೆ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ. ಸಿಎಂ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್ ಸರಕಾರ ಎರಡೂವರೆ ವರ್ಷಗಳ ಅಧಿಕಾರಾವಧಿ ತುಂಬುತ್ತಿರುವ ಬೆನ್ನಲ್ಲೇ ರಾಜ್ಯದ ಒಟ್ಟು 39 ನಿಗಮ, ಮಂಡಳಿ ಹಾಗೂ ಪ್ರಾಧಿಕಾರಗಳಿಗೆ ಹಲವು ಸರ್ಕಸ್‍ಗಳ ನಡುವೆ ಅಧ್ಯಕ್ಷರ ನೇಮಕ ಮಾಡಿ ಈಗಾಗಲೇ ಆದೇಶಿಸಿದೆ.
ಒಟ್ಟು 39 ನಿಗಮ, ಮಂಡಳಿ ಹಾಗೂ ಪ್ರಾಧಿಕಾರಗಳ ಅಧ್ಯಕ್ಷ ಸ್ಥಾನಕ್ಕೆ ಎಐಸಿಸಿ ಅಂತಿಮಗೊಳಿಸಿದ್ದ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯ ಅವರು ಮೊದಲು ಐದು ಸ್ಥಾನಗಳನ್ನು ಕೈಬಿಟ್ಟು 34 ನಿಗಮ, ಮಂಡಳಿ ಹಾಗೂ ಪ್ರಾಧಿಕಾರಗಳ ಅಧ್ಯಕ್ಷ ಸ್ಥಾನವನ್ನು ಫೈನಲ್ ಮಾಡಿದ್ದರು. ಇದೀಗ ಮತ್ತೆ ಮೂರು ನಿಗಮ ಮಂಡಳಿಗೆ ಅಧ್ಯಕ್ಷರನ್ನು ನೇಮಿಸಿ, ಸರ್ಕಾರ ಆದೇಶ ಹೊರಡಿಸಿದೆ.
Views: 16