ಸಮಗ್ರ ಸುದ್ದಿ, ಚಿತ್ರದುರ್ಗ
ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817
ಸೆಪ್ಟೆಂಬರ್ 30ರ ಇಂದು ಚಿತ್ರದುರ್ಗದ ಶ್ರೀ ವಾಲ್ಮೀಕಿ ಭವನದಲ್ಲಿ ಮಧ್ಯಾಹ್ನ 11 ಗಂಟೆಗೆ ನರೇಂದ್ರ ಮೋದಿ 25 ವರ್ಷಗಳ ಆಡಳಿತ ಸೇವಾ ಅನುಭವ ಮತ್ತು ಸೇವಾ ಸಂಕಲ್ಪ ಅಭಿಯಾನದ ಆಯೋಜನಾ ಸಮಿತಿಯ ವತಿಯಿಂದ ಮಾದಿಗ ಮುನ್ನಡೆ- ಮಾದಿಗ ಕಾರ್ಯಕರ್ತರ ಜಿಲ್ಲಾ ಸಮಾವೇಶ ಹಾಗೂ ಒಳಮೀಸಲಾತಿ ಕಗ್ಗಂಟು ಬಿಡಿಸಿದ ನರೇಂದ್ರ ಮೋದಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

ಬಿಜೆಪಿ ರಾಜ್ಯ ಅಧ್ಯಕ್ಷ ಹಾಗೂ ಶಾಸಕರಾದ ಬಿ. ವೈ. ವಿಜಯೇಂದ್ರ ಅವರು ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಲಿದ್ದು, ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆ ವಹಿಸಲಿದ್ದಾರೆ. ಸಂಸದರಾದ ಗೋವಿಂದ ಕಾರಜೋಳ, ಮಾಜಿ ಕೇಂದ್ರ ಸಚಿವರಾದ ಎ. ನಾರಾಯಣಸ್ವಾಮಿ, ಜಿ. ಎಂ. ಸಿದ್ದೇಶ್ವರ್, ಮಾಜಿ ಶಾಸಕರಾದ ಜಿ.ಎಚ್.ತಿಪ್ಪಾರೆಡ್ಡಿ, ಎಸ್.ಕೆ.ಬಸವರಾಜನ್, ವಿಧಾನ ಪರಿಷತ್ ಸದಸ್ಯರಾದ ಕೆ.ಎಸ್.ನವೀನ್, ಸಾಮರಸ್ಯ ಸಂಚಾಲಕರಾದ ವಾದಿರಾಜ್, ಬಿಜೆಪಿ ಜಿಲ್ಲಾಧ್ಯಕ್ಷ ಕೆ.ಟಿ.ಕುಮಾರಸ್ವಾಮಿ, ಸಹ ಪ್ರಭಾರಿ ಮುರಳಿ, ಶ್ರೀ ಶಿವಶರಣ ಮಾದಾರಚನ್ನಯ್ಯ ಸೇವಾಸಮಿತಿಯ ರಾಜ್ಯಾಧ್ಯಕ್ಷರಾದ ಹೂಡಿ ಮಂಜುನಾಥ್, ಹನುಮಂತೇ ಗೌಡ, ಮಾಧುರಿ ಗೀರೀಶ್ ಹಾಗೂ ಸ್ಥಳೀಯ ಜನಪ್ರತಿನಿಧಿಗಳು ಭಾಗವಹಿಸಲಿದ್ದಾರೆ.
ಬಸವಮೂರ್ತಿ ಮಾದಾರ ಚೆನ್ನಯ್ಯ ಸ್ವಾಮೀಜಿ ಅವರಿಗೆ ಕೆಂಪೇಗೌಡ ಪ್ರಶಸ್ತಿ ಪ್ರದಾನವಾದ ಹಿನ್ನೆಲೆಯಲ್ಲಿ ಶ್ರೀಗಳಿಗೆ ಗೌರವ ಸನ್ಮಾನ, ಜೊತೆಗೆ, ಮಾದಿಗ ಸಮುದಾಯದ ರಾಷ್ಟ್ರೀಯ ಹೋರಾಟಗಾರರಾದ ಮಂದಕೃಷ್ಣ ಮಾದಿಗ ಹಾಗೂ ಕರ್ನಾಟಕ ರಾಜ್ಯ ಮುಕ್ತ ವಿಶ್ವ ವಿದ್ಯಾಲಯದ ಪರೀಕ್ಷಾಂಗ ವಿಭಾಗದ ಮಾಜಿ ಕುಲ ಸಚಿವರಾದ ಡಾ. ಹೆಚ್.ವಿಶ್ವನಾಥ್ ರವರನ್ನು ಸನ್ಮಾನಿಸಲಾಗುವುದು.
ನಮ್ಮ ಸಮಗ್ರ ಸುದ್ದಿಗಳಿಗಾಗಿ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು WhatsApp Group:https://chat.whatsapp.com/KnDIfiBURQ9G5sLEJLqshk
Facebook page: https://www.facebook.com/samagrasudii
Sharechat: https://sharehat.com/profile/edu514826335?d=n
Twitter: https://twitter.com/SuddiSamagra
Threads: https://www.threads.net/@samagrasuddi.co.in
Instagram: https://www.instagram.com/samagrasuddi.co.in/
Telegram: https://t.me/+E1ubNzdguQ5jN2Y1
Whats App Channel: https://whatsapp.com/channel/0029VbDbOsBD8SE2H0L3d40