ಚಿತ್ರದುರ್ಗ ಜು. 08
ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817
ನಗರದ ಹೊರವಲಯದಲ್ಲಿರುವ ಭೋವಿ ಗುರುಪೀಠದ ಆವರಣದಲ್ಲಿ ಶ್ರೀ ಜಗದ್ಗುರು ಸಿದ್ಧರಾಮೇಶ್ವರ ಮಹಾಸಂಸ್ಥಾನ ಭೋವಿ ಗುರುಪೀಠದ ಜಗದ್ಗುರು ಶ್ರೀ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿರವರ 17ನೇ ಪಟ್ಟಾಭಿಷೇಕ ಮಹೋತ್ಸವ, 28ನೇ ಲಾಂಛನ ದಿಕ್ಷಾ ಮಹೋತವ, 40ನೇ ಜನ್ಮ ವರ್ಧಂತೋತ್ಸವದ ನಿಮಿತ ಇದೇ ತಿಂಗಳ 18ರಂದು ನಡೆಯಲಿದ್ದು, ಇದು ಬೋವಿ ಜನಾಂಗದ ಧಾರ್ಮಿಕ, ಸಾಂಸ್ಕøತಿಕ ಹಾಗೂ ಸಾಮಾಜಿಕ ಸಂಭ್ರಮದ ಆಚರಣೆಯಾದ ಈ ಉತ್ಸವಕ್ಕೆ ಸಂಘಟನೆ ಭರದಿಂದ ಸಾಗುತ್ತಿವೆ ಎಂದು ಭೋವಿ ಅಭೀವೃದ್ದಿ ನಿಗಮದ ಅಧ್ಯಕ್ಷರು, ಸಮಾಜದ ಮುಖಂಡರಾದ ಎಂ.ರಾಮಪ್ಪ ತಿಳಿಸಿದರು.

ಚಿತ್ರದುರ್ಗ ನಗರದ ಭೋವಿ ವಿದ್ಯಾರ್ಥಿ ನಿಲಯದ ಸಭಾಂಗಣದಲ್ಲಿ ಬುಧವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಜಗದ್ಗುರು ಇಮ್ಮಡಿ ಸಿದ್ದರಾಮೇಶ್ವರ ಮಹಾಸ್ವಾಮೀಜಿಗಳ ಆಶೀರ್ವಾದ ಹಾಗೂ ಆದೇಶದ ಮೇರೆಗೆ ಜನೋತ್ಸವವನ್ನು ಆಯೋಜಿಸಲಾಗುತ್ತಿದೆ. ಸಮುದಾಯದ ಶೈಕ್ಷಣಿಕ, ಸಾಮಾಜಿಕ ಹಾಗೂ ಸಾಂಸ್ಕೃತಿಕ ಅಭಿವೃದ್ಧಿಗೆ ಉತ್ತೇಜನ ನೀಡುವ ಉದ್ದೇಶದಿಂದ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಗಣ್ಯರನ್ನು ಹಾಗೂ ಎಸ್ಎಸ್ಎಲ್ಸಿ, ದ್ವಿತೀಯ ಪಿಯುಸಿ ಮತ್ತು ಯಾವುದೇ ಪದವಿಯಲ್ಲಿ ಈ ವರ್ಷ ಶೇ90ಕ್ಕಿಂತ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಿದೆ. ಮತ್ತು ದ್ವಿತೀಯ ಪಿಯುಸಿಯಲ್ಲಿ ಉತ್ತಮ ಅಂಕಗಳನ್ನು ಗಳಿಸಿದ ಬೋವಿ ಸಮುದಾಯದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಸನ್ಮಾನಿಸಲಾಗುವುದು, ಜೊತೆಗೆ, ವಿದ್ಯಾರ್ಥಿಗಳ ಉನ್ನತ ಶಿಕ್ಷಣ-ಕೈ ಪ್ರೋತ್ಸಾಹ ನೀಡುವ ಉದ್ದೇಶದಿಂದ ಆಯ್ಕೆಯಾದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ತಲಾ 5,000 ಆರ್ಥಿಕ ಸಹಾಯಧನ ವಿತರಿಸಲಾಗುವುದು ಎಂದು ಹೇಳಿದರು.
ಜು. 18ರಂದು ಕಲ್ಯಾಣ ಕರ್ನಾಟಕ ಮಟ್ಟದ ಬೋವಿ ಜನೋತ್ಸವಕ್ಕೆ ರಾಜ್ಯದ ಎಲ್ಲಾ ಜಿಲ್ಲೆಗಳಿಂದ ಒಂದು ಲಕ್ಷಕ್ಕೂ ಹೆಚ್ಚು ಜನರ ಭಾಗವಹಿಸುವ ನಿರೀಕ್ಷೆಯಿದೆ. ಕಾರ್ಯಕ್ರಮಕ್ಕೆ ರಾಜ್ಯದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಉಪ ಮುಖ್ಯಮಂತ್ರಿಗಳಾದ ಜಿ.ಪರಮೇಶ್ವರ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಮುಖಂಡರುಗಳಾದ ಮಲ್ಲೇಶ್ ಬಾಬು ಭಾಗವಹಿಸಲಿದ್ದು, ಅಧ್ಯಕ್ಷತೆಯನ್ನು ಮಾಜಿ ಸಚಿವ ಅರವಿಂದ ಲಿಂಬಾವಳಿವಹಿಸುವರು. ನೇತೃತ್ವವನ್ನು ಮಾಜಿ ಸಚಿವ ಶಿವರಾಜ ತಂಗಡಗಿ ವಹಿಸುವರು. ದಿಕ್ಕೂಚಿ ನುಡಿಗಳನ್ನು ಶಾಸಕ ಎಂ ಚಂದ್ರಪ್ಪ ನುಡಿಯಲಿದ್ದಾರೆ. ಪಾವಗಡ ಶಾಸಕ ವಿ ವೆಂಕಟೇಶ ಹಾಗೂ ಪುಲಕೇಶಿ ನಗರದ ಶಾಸಕಎಸಿ ಶ್ರೀನಿವಾಸ ಹಾಗೂ ಭೋವಿ ಸಮಾಜದ ಹಾಲಿ ಮಾಜಿ ಸಚಿವರು, ಶಾಸಕರು ಆಗಮಿಸಲಿದ್ದಾರೆ. ಇದ್ದಲ್ಲದೆ ಸಮಾಜದ ಐಎಎಸ್, ಕೆಎಎಸ್ ಅಧಿಕಾರಿಗಳು ಮತ್ತು ಅಂತರರಾಜ್ಯ ಮಟ್ಟದ ಭೋವಿ ಜನಾಂಗದ ಪ್ರಮುಖ ಮುಖಂಡರು ಈ ಸಮಾವೇಶದಲ್ಲಿ ಭಾಗವಹಿಸಲಿದ್ದು ಕಾರ್ಯಕ್ರಮದ ಯಶಸ್ಸಿಗೆ ಅಗತ್ಯ ಸಿದ್ದತೆಗಳನ್ನು ಕೈಗೊಳ್ಳಲಾಗಿದೆ ಎಂದು ತಿಳಿಸಿದರು.
ಭೋವಿ ಜನೋತ್ಸವವು ಕೇವಲ ಒಂದು ಆಚರಣೆಯಷ್ಟೇ ಆಗಿರದೆ, ಸಮಾಜದ ಏಳಿಗೆ ಹಾಗೂ ಪ್ರತಿಭೆಗಳನ್ನು ಪ್ರೋತ್ಸಾಹಿಸುವ ಹತ್ತಾರು ಸತ್ಕಾರ್ಯಕ್ರಮಗಳಿಗೆ ಸಾಕ್ಷಿಯಾಗಲಿದೆ. ಎಸ್.ಎಸ್.ಎಲ್.ಸಿ, ಪಿ.ಯು.ಸಿ, ಪದವಿ ಹಾಗೂ ಸ್ನಾತಕೋತ್ತರ ಪದವಿಗಳಲ್ಲಿ ಶೇಕಡಾ 90 ಕ್ಕಿಂತ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ, ಪಿಎಚ್.ಡಿ ಪದವೀಧರರಿಗೆ ಹಾಗೂ ಎಂ.ಬಿ.ಬಿ.ಎಸ್ ಮುಗಿಸಿದ ಸಾಧಕರಿಗೆ ಸನ್ಮಾನಿಸಿ ಗೌರವಿಸಲಾಗುವುದು. ಸಮಾಜದ ಜನರಿಗಾಗಿ ರಕ್ತದಾನ ಶಿಬಿರ ಹಾಗೂ ಸಿದ್ಧರಾಮೇಶ್ವರರ ಕುರಿತು ವಿಶೇಷ ವಿಚಾರ ಸಂಕೀರ್ಣ, ರಾಜಕೀಯ ಕ್ಷೇತ್ರದಲ್ಲಿ ಜನಪ್ರತಿನಿಧಿಗಳಾಗಿ ಆಯ್ಕೆಯಾದ ಸಮಾಜದ ನಾಯಕರಿಗೆ ಹಾಗೂ ಭೋವಿ ವಡ್ಡರ ಜನಾಂಗಕ್ಕೆ ವಿಶೇಷವಾಗಿ ಕೊಡುಗೆ ನೀಡಿದ ಸಾಧಕರಿಗೆ ಸನ್ಮಾನ,ಹಸಿರೋತ್ಸವ ಸಮಾಜದ ಯುವಜನತೆಗಾಗಿ ವಧು-ವರರ ಸಮಾವೇಶವನ್ನು ಏರ್ಪಡಿಸಲಾಗಿದೆ. ರಾಜ್ಯದ ಮೂಲೆ ಮೂಲೆಗಳಿಂದ ಹಾಗೂ ವಿವಿಧ ಜಿಲ್ಲೆಗಳಿಂದ ಭೋವಿ ಸಮಾಜದ ಲಕ್ಷಾಂತರ ಬಾಂಧವರು ಈ ಭವ್ಯ ಜನೋತ್ಸವದಲ್ಲಿ ಭಾಗವಹಿಸಲಿದ್ದಾರೆ.
ಭೋವಿ ಜಿಲ್ಲಾಧ್ಯಕ್ಷ ಕೃಷ್ಣಮೊರ್ತಿ, ಉಪಾಧ್ಯಕ್ಷ ಹೆಚ್.ಲಕ್ಷ್ಮಣ್, ಕಾರ್ಯದರ್ಶಿ ಇ.ಮಂಜುನಾಥ್, ಮಠದ ಸಿಇಓ ಗೌನಳ್ಳಿ ಗೋವಿಂದಪ್ಪ, ಮಾಜಿ ಅಧ್ಯಕ್ಷರಾದ ತಿಪ್ಪೇಸ್ವಾಮಿ, ಮುಖಂಡರಾದ ಡಿ.ಸಿ.ಮೋಹನ್, ಹೆಚ್,ನಾಗರಾಜ್, ಕನಕದಾಸ್ ದೇವರಾಜ್ ನಟೇಶ್ ಉಪಸ್ಥಿತರಿದ್ದರು.
Follow the ಸಮಗ್ರ ಸುದ್ದಿ Telegram Channel: https://t.me/SamagraSuddi
ಸಮಗ್ರ ಸುದ್ದಿ channel on WhatsApp: https://whatsapp.com/channel/0029VbDbOsBD8SE2H0L3d40j