ಮಹಾತ್ಮ ಪುಲೆ ಅಧ್ಯಯನ ಕೇಂದ್ರದಲ್ಲಿ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಕೋಚಿಂಗ್ ಸೇವೆ
ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817
ಚಿತ್ರದುರ್ಗ: ಮಹಾತ್ಮ ಪುಲೆ ಅಧ್ಯಯನ ಕೇಂದ್ರದಲ್ಲಿ ಎಲ್ಲಾ ವರ್ಗದ ಬಡ ಪ್ರತಿಭಾವಂತ
ವಿದ್ಯಾರ್ಥಿಗಳಿಗೆ KEA, KAS, KSP, Group C ಮುಂತಾದ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತ ಮತ್ತು
ರಿಯಾಯಿತಿಯಲ್ಲಿ ತರಬೇತಿಯನ್ನು ನೀಡಲಾಗುವದು.
ಚಿತ್ರದುರ್ಗ ನಗರದ ಸರಸ್ಪತಿಪುರಂ ಬಡಾವಣೆಯಲ್ಲಿನ ಮಹಾತ್ಮ ಅಧ್ಯಯನ ಕೇಂದ್ರದಲ್ಲಿ ನುರಿತ
ಸಂಪನ್ಮೂಲ ವ್ಯಕ್ತಿಗಳಿಂದ ತರಬೇತಿಯನ್ನು ನೀಡಲಾಗುವುದು, ಈ ವರ್ಷದ ನಾಲ್ಕನೇ ಬ್ಯಾಚನ್ನು
ಡಿಸೆಂಬರ್ ಮೊದಲನೇ ವಾರದಲ್ಲಿ ಪ್ರಾರಂಭಿಸಲಾಗುತ್ತಿದೆ.
ಪದವಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಬೋಧನಾ
ಅವಧಿಯನ್ನು ಮಧ್ಯಾಹ್ನ 2 ರಿಂದ ಸಂಜೆ 5 ರವರೆಗೆ ಮತ್ತು ಪದವಿ ಪೂರೈಸಿದ ಅಭ್ಯರ್ಥಿಗಳಿಗೆ
ಬೆಳಿಗ್ಗೆ 10 ರಿಂದ ಮಧ್ಯಾಹ್ನ 1 ಗಂಟೆವರೆಗೆ ನಿಗದಿಪಡಿಸಲಾಗಿದೆ.
ಕೇಂದ್ರವುಸುಸಜ್ಜಿತವಾದ ಗ್ರಂಥಾಲಯ, ನುರಿತ ಅನುಭವಿ ಸಂಪನ್ಮೂಲ ವ್ಯಕ್ತಿಗಳಿಂದ ತರಬೇತಿ
ಮತ್ತು ಮಾರ್ಗದರ್ಶನ ನೀಡಲಾಗುವುದು. ಈ ಕೇಂದ್ರದಲ್ಲಿ ಪ್ರತಿ ಭಾನುವಾರ ಮಾದರಿ ಪ್ರಶ್ನೆ
ಪತ್ರಿಕೆಗಳನ್ನು ನೀಡಿ ಅಣಕು ಪರೀಕ್ಷೆಗಳನ್ನು ನಡೆಸಿ ಪರೀಕ್ಷೆಗೆ ಸಜ್ಜುಗೊಳಿಸಲಾಗುತ್ತದೆ ಆಸಕ್ತರು
ಖುದ್ದಾಗಿ ಅಥವಾ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. (Apply through online link
https://forms.gle/8bjR3hMKSNgDmnwG8) ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ 9242843504,
9740108588, 9972446430
Views: 31