ಕೆ.ಸಿ. ವೀರೇಂದ್ರ ಪಪ್ಪಿ ಅವರಿಗೆ ಸಚಿವ ಸ್ಥಾನದ ಜೊತೆಗೆ ಜಿಲ್ಲಾ ಉಸ್ತುವಾರಿ  ಹೊಣೆಯನ್ನು ನೀಡಿ : ಮಹೇಶ್

 

ವರದಿ ಮತ್ತು ಫೋಟೋ ಕೃಪೆ
                         ಸುರೇಶ್ ಪಟ್ಟಣ್,                         
ಮೊ : 87220 22817

ಚಿತ್ರದುರ್ಗ, (ಮೇ.15) : ಚಿತ್ರದುರ್ಗ ವಿಧಾನಸಭಾ ಕ್ಷೇತ್ರದಿಂದ ವಿಧಾನಸಭೆಗೆ ಆಯ್ಕೆಯಾಗಿರುವ ಕೆ.ಸಿ. ವೀರೇಂದ್ರ ಪಪ್ಪಿ ಅವರಿಗೆ ಸಚಿವ ಸ್ಥಾನ ನೀಡಿ, ಜೊತೆಗೆ ಜಿಲ್ಲಾ ಉಸ್ತುವಾರಿಯ ಹೊಣೆಯನ್ನು ಅವರಿಗೇ ನೀಡಬೇಕೆಂದು ಕೆಪಿಸಿಸಿ ಅಧ್ಯಕ್ಷರನ್ನು ಅಖಿಲ ಭಾರತ ವೀರಶೈವ ಮಹಾ ಸಭಾದ ಚಿತ್ರದುರ್ಗ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಮಹೇಶ್ ಒತ್ತಾಯಿಸಿದ್ದಾರೆ.

ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಚಿತ್ರದುರ್ಗ ವಿಧಾನಸಭಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಏಕಾಂತಯ್ಯನವರು ಜಿಲ್ಲಾ ಉಸ್ತುವಾರಿ ಮಂತ್ರಿಗಳಾಗಿದ್ದು ಬಿಟ್ಟರೆ ತದ ನಂತರ ಚಿತ್ರದುರ್ಗ ಜಿಲ್ಲೆಯವರು ಯಾರೂ ಉಸ್ತುವಾರಿ ಸಚಿವರಾಗಿಲ್ಲ. ಚಿತ್ರದುರ್ಗದಿಂದ ಆಯ್ಕೆಯಾದ ಯಾರೊಬ್ಬರೂ ಸಹಾ ಮಂತ್ರಿ ಆಗಿಲ್ಲ.  ಜಿಲ್ಲೆಯ ಬೇರೆ ತಾಲ್ಲೂಕುಗಳಿಗೆ ಮಂತ್ರಿ ಸ್ಥಾನ ಸಿಕ್ಕಿದೆ, ಚಿತ್ರದುರ್ಗಕ್ಕೆ ಇಲ್ಲವಾಗಿದೆ. ಆದ್ದರಿಂದ ಈ ಭಾರಿ ಕೆ.ಸಿ. ವೀರೇಂದ್ರ ಪಪ್ಪಿ ಅವರನ್ನು ಮಂತ್ರಿಯನ್ನಾಗಿ ಮಾಡಿ ಜಿಲ್ಲಾ ಉಸ್ತುವಾರಿಗಳಾಗಿ ಮಾಡುವಂತೆ ಒತ್ತಾಯಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಅಖಿಲ ಭಾರತ ವೀರಶೈವ ಮಹಾಸಭಾ ಯುವ ಘಟಕದ ಅಧ್ಯಕ್ಷ ಕಾರ್ತಿಕ್, ವಾಣಿಜ್ಯ ಘಟಕದ ಉಪಾಧ್ಯಕ್ಷ ಟಿ.ದಯಾನಂದ ಪಾಟೀಲ್, ಖಜಾಂಚಿ ದಿವಾಕರ್ ಎಸ್.ಸಂಕೋಳ್, ಶಿವಾನಂದ ಅವರು ಪತ್ರಿಕಾಗೋಷ್ಠಿಯಲ್ಲಿ ಹಾಜರಿದ್ದರು.

The post ಕೆ.ಸಿ. ವೀರೇಂದ್ರ ಪಪ್ಪಿ ಅವರಿಗೆ ಸಚಿವ ಸ್ಥಾನದ ಜೊತೆಗೆ ಜಿಲ್ಲಾ ಉಸ್ತುವಾರಿ  ಹೊಣೆಯನ್ನು ನೀಡಿ : ಮಹೇಶ್ first appeared on Kannada News | suddione.

from ಚಿತ್ರದುರ್ಗ – Kannada News | suddione https://ift.tt/GUmH2g7
via IFTTT

Leave a Reply

Your email address will not be published. Required fields are marked *