Pomegranate Health benefits: ನಿಯಮಿತವಾಗಿ ದಾಳಿಂಬೆ ಸೇವನೆ ಮಾಡುವುದರಿಂದ ಹೃದಯ ಕಾಯಿಲೆ ಹಾಗೂ ಮಧುಮೇಹದಂತಹ ದೀರ್ಘಕಾಲದ ಕಾಯಿಲೆಗಳ ಅಪಾಯ ಕಡಿಮೆ ಮಾಡಲು ಸಾಧ್ಯವಾಗುತ್ತದೆ ಎಂದು ಆರೋಗ್ಯ ತಜ್ಞರು ತಿಳಿಸುತ್ತಾರೆ.

Pomegranate Health benefits: ದಾಳಿಂಬೆ ಹಣ್ಣಿನಲ್ಲಿ ಉತ್ಕರ್ಷಣ ನಿರೋಧಕಗಳು, ಜೀವಸತ್ವಗಳು, ನಾರು ಅಂಶ ಹಾಗೂ ಖನಿಜಗಳು ಸಮೃದ್ಧ ಮೂಲವಾಗಿದೆ. ದಾಳಿಂಬೆಯನ್ನು ನಿಯಮಿತವಾಗಿ ತಿನ್ನುವುದರಿಂದ ಸ್ವತಂತ್ರ ರಾಡಿಕಲ್‌ಗಳಿಂದ ಉಂಟಾಗುವ ಹಾನಿಯಿಂದ ಜೀವಕೋಶಗಳನ್ನು ರಕ್ಷಿಸುತ್ತವೆ. ಕ್ಯಾನ್ಸರ್, ಹೃದ್ರೋಗ ಮತ್ತು ಮಧುಮೇಹದಂತಹ ದೀರ್ಘಕಾಲದ ಕಾಯಿಲೆಗಳ ಅಪಾಯ ಕಡಿಮೆ ಮಾಡುತ್ತದೆ. ಇದರ ಬ್ಯಾಕ್ಟೀರಿಯಾ ವಿರೋಧಿ ಹಾಗೂ ಆ್ಯಂಟಿ ವೈರಲ್ ಗುಣಲಕ್ಷಣಗಳನ್ನು ಹೊಂದಿರುವುದರಿಂದ ಇದು ಸಾಂಕ್ರಾಮಿಕ ರೋಗಗಳಿಂದ ರಕ್ಷಿಸುತ್ತದೆ ಹಾಗೂ ರೋಗ ನಿರೋಧಕ ಶಕ್ತಿಯನ್ನು ವೃದ್ಧಿಸುತ್ತದೆ. ಪ್ರತಿದಿನ ದಾಳಿಂಬೆ ತಿನ್ನುವುದರಿಂದಾಗುವ ದೇಹಕ್ಕೆ ಲಭಿಸುವ ಪ್ರಯೋಜನಗಳೇನು ಎಂಬುದನ್ನು ತಿಳಿಯೋಣ.

ಹೃದಯದ ಆರೋಗ್ಯ: ದಾಳಿಂಬೆ ರಕ್ತದೊತ್ತಡ, ಕೊಲೆಸ್ಟ್ರಾಲ್ ಕಡಿಮೆ ಮಾಡಲು ಮತ್ತು ರಕ್ತ ಪರಿಚಲನೆ ಸುಧಾರಿಸಲು ಸಹಾಯ ಮಾಡುತ್ತದೆ. ದಾಳಿಂಬೆಯನ್ನು ನಿಯಮಿತವಾಗಿ ಸೇವನೆ ಮಾಡುವುದರಿಂದ ಹೃದಯದ ಆರೋಗ್ಯ ಸುಧಾರಿಸುವಲ್ಲಿ ತುಂಬಾ ಪ್ರಯೋಜನಕಾರಿಯಾಗಿದೆ ಎಂದು ಅಮೇರಿಕನ್ ಜರ್ನಲ್ ಆಫ್ ಕ್ಲಿನಿಕಲ್ ನ್ಯೂಟ್ರಿಷನ್‌ನಲ್ಲಿ ಪ್ರಕಟವಾದ ಅಧ್ಯಯನ ತಿಳಿಸಿದೆ. ದಾಳಿಂಬೆಯು ಅಪಧಮನಿಗಳಲ್ಲಿ ಪ್ಲೇಕ್ ರಚನೆಯ ಅಪಾಯ ಕಡಿಮೆ ಮಾಡುವ ಸಾಮರ್ಥ್ಯ ಹೊಂದಿದೆ.

ಉರಿಯೂತ ನಿವಾರಕ: ದಾಳಿಂಬೆಯಲ್ಲಿರುವ ಸಂಯುಕ್ತಗಳು ದೇಹದಲ್ಲಿ ಉರಿಯೂತವನ್ನು ತಡೆಯಲು ಸಹಾಯ ಮಾಡುತ್ತದೆ. ಇದು ಹೃದಯ ಕಾಯಿಲೆ, ಕ್ಯಾನ್ಸರ್ ಹಾಗೂ ಮಧುಮೇಹದಂತಹ ಕಾಯಿಲೆಗಳ ಅಪಾಯ ಕಡಿಮೆ ಮಾಡುತ್ತದೆ. ಸಂಧಿವಾತದಂತಹ ಪರಿಸ್ಥಿತಿಗಳ ಲಕ್ಷಣಗಳನ್ನು ನಿವಾರಿಸುವಲ್ಲಿ ಹೆಚ್ಚು ಪ್ರಯೋಜನಕಾರಿಯಾಗಿದೆ.

ಕ್ಯಾನ್ಸರ್ ವಿರುದ್ಧ ಹೋರಾಡುತ್ತೆ: ದಾಳಿಂಬೆಯಲ್ಲಿರುವ ಎಲಾಜಿಕ್ ಆಮ್ಲ ಮತ್ತು ಪ್ಯೂನಿಕಾಲಾಜಿನ್‌ಗಳಂತಹ ಸಂಯುಕ್ತಗಳು ಕೆಲವು ಕ್ಯಾನ್ಸರ್‌ಗಳ ವಿರುದ್ಧ ಹೋರಾಡುತ್ತದೆ. ದಾಳಿಂಬೆ ಸ್ತನ ಕ್ಯಾನ್ಸರ್, ಪ್ರಾಸ್ಟೇಟ್ ಕ್ಯಾನ್ಸರ್ ಹಾಗೂ ಕೊಲೊನ್ ಕ್ಯಾನ್ಸರ್‌ಗೆ ಕಾರಣವಾಗುವ ಕ್ಯಾನ್ಸರ್ ಕೋಶಗಳ ಬೆಳವಣಿಗೆಯನ್ನು ತಡೆಯುತ್ತದೆ. ಮತ್ತು ಕ್ಯಾನ್ಸರ್ ಗಡ್ಡೆಯ ಬೆಳವಣಿಗೆ ಕಡಿಮೆ ಮಾಡುತ್ತದೆ ಎಂದು ತಜ್ಞರು ತಿಳಿಸುತ್ತಾರೆ.

ಜೀರ್ಣಕ್ರಿಯೆ ಉತ್ತೇಜಿಸುತ್ತೆ: ದಾಳಿಂಬೆ ಹಣ್ಣು ನಾರಿನ ಅತ್ಯುತ್ತಮ ಮೂಲವಾಗಿದೆ. ಇದು ಆರೋಗ್ಯಕರ ಜೀರ್ಣಕ್ರಿಯೆ ಬೆಂಬಲಿಸುತ್ತದೆ ಮತ್ತು ಜೀರ್ಣಕಾರಿ ಸಮಸ್ಯೆಗಳನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ. ಕರುಳಿನ ಚಲನೆಯನ್ನು ಸುಗಮಗೊಳಿಸಲು ದಾಳಿಂಬೆ ಕೂಡ ಸೂಕ್ತವಾಗಿದೆ. ಇದು ಮಲಬದ್ಧತೆ ಹಾಗೂ ಹೊಟ್ಟೆ ಉಬ್ಬರದಂತಹ ಸಮಸ್ಯೆಗಳನ್ನು ಹೋಗಲಾಡಿಸುತ್ತದೆ.
ಚರ್ಮದ ಆರೋಗ್ಯ: ದಾಳಿಂಬೆಯಲ್ಲಿ ಹೆಚ್ಚಿನ ಪ್ರಮಾಣದ ಉತ್ಕರ್ಷಣ ನಿರೋಧಕಗಳಿವೆ. ಇದು ಚರ್ಮವನ್ನು ಆಕ್ಸಿಡೇಟಿವ್ ಹಾನಿ ಮತ್ತು ಸೂರ್ಯನ ಯುವಿ ಕಿರಣಗಳಿಂದ ಉಂಟಾಗುವ ಸಮಸ್ಯೆಗಳಿಂದ ರಕ್ಷಿಸುತ್ತದೆ. ದಾಳಿಂಬೆ ತಿನ್ನುವುದು ಕಾಲಜನ್ ಉತ್ಪಾದನೆ ಸುಧಾರಿಸಲು ಹಾಗೂ ಚರ್ಮದ ಮೇಲಿನ ಸುಕ್ಕುಗಳು, ಸೂಕ್ಷ್ಮ ರೇಖೆಗಳನ್ನು ಕಡಿಮೆ ಮಾಡಲು ಉತ್ತಮವಾಗಿದೆ. ದಾಳಿಂಬೆ ಚರ್ಮವನ್ನು ಆರೋಗ್ಯಕರವಾಗಿ ಇಡುವ ಸಾಮರ್ಥ್ಯ ಹೊಂದಿದೆ ಎಂದು ತಜ್ಞರು ಹೇಳುತ್ತಾರೆ.

ತೂಕ ನಿಯಂತ್ರಿಸುತ್ತದೆ: ದಾಳಿಂಬೆಯಲ್ಲಿ ಕ್ಯಾಲೊರಿಗಳು ತುಂಬಾ ಕಡಿಮೆ. ಆದರೆ ಇದು ನಾರಿನ ಸಮೃದ್ಧ ಮೂಲವಾಗಿದೆ. ಇದು ದೀರ್ಘಕಾಲದವರೆಗೆ ಹೊಟ್ಟೆ ತುಂಬಿರುವಂತೆ ಭಾಸವಾಗುವುದಲ್ಲದೆ, ನಿಮ್ಮ ಒಟ್ಟಾರೆ ಕ್ಯಾಲೊರಿ ಸೇವನೆ ಕಡಿಮೆ ಮಾಡುತ್ತದೆ. ಇದಲ್ಲದೆ, ದೇಹದಲ್ಲಿ ಕೊಬ್ಬನ್ನು ಬೆಣ್ಣೆಯಂತೆ ಕರಗಿಸುತ್ತದೆ.

ಮಧುಮೇಹಿಗಳಿಗೆ ಉತ್ತಮ: ಟೈಪ್ 2 ಮಧುಮೇಹಿಗಳಲ್ಲಿ ರಕ್ತದಲ್ಲಿನ ಸಕ್ಕರೆಯನ್ನು ನಿಯಂತ್ರಿಸಲು ದಾಳಿಂಬೆ ಉತ್ತಮ ಆಯ್ಕೆಯಾಗಿದೆ. ಇದು ಕಡಿಮೆ ಗ್ಲೈಸೆಮಿಕ್ ಸೂಚಿಯನ್ನು ಹೊಂದಿದ್ದು, ರಕ್ತದಲ್ಲಿನ ಗ್ಲೂಕೋಸ್ ಮಟ್ಟವನ್ನು ನಿಯಂತ್ರಿಸುತ್ತದೆ. ಇದು ಆಕ್ಸಿಡೇಟಿವ್ ಒತ್ತಡ ಕಡಿಮೆ ಮಾಡಲು ಮತ್ತು ಇನ್ಸುಲಿನ್ ಸಂವೇದನೆಯನ್ನು ಸುಧಾರಿಸಲು ಪ್ರಯೋಜನಕಾರಿಯಾಗಿದೆ. ದಿ ಜರ್ನಲ್ ಆಫ್ ನ್ಯೂಟ್ರಿಷನಲ್ ಬಯೋಕೆಮಿಸ್ಟ್ರಿಯಲ್ಲಿ ಪ್ರಕಟವಾದ ಅಧ್ಯಯನದ ಪ್ರಕಾರ, ದಾಳಿಂಬೆ ಟೈಪ್ 2 ಮಧುಮೇಹದ ಅಪಾಯ ಕಡಿಮೆ ಮಾಡುತ್ತದೆ.
ಸ್ಮರಣಶಕ್ತಿ ಸುಧಾರಿಸುತ್ತೆ: ದಾಳಿಂಬೆಯ ನಿಯಮಿತವಾಗಿ ಸೇವನೆಯು ಸ್ಮರಣಶಕ್ತಿ ಸುಧಾರಿಸುವಲ್ಲಿ ಹಾಗೂ ಅರಿವಿನ ಕಾರ್ಯಗಳನ್ನು ಹೆಚ್ಚಿಸುವಲ್ಲಿ ಪರಿಣಾಮಕಾರಿಯಾಗಿದೆ. ಇವು ಆಕ್ಸಿಡೇಟಿವ್ ಒತ್ತಡ ಕಡಿಮೆ ಮಾಡಬಹುದು ಹಾಗೂ ಮೆದುಳಿನ ಆರೋಗ್ಯವನ್ನು ಬೆಂಬಲಿಸಬಹುದು. ನೆನಪಿನ ಶಕ್ತಿಯನ್ನು ಸುಧಾರಿಸಲು ಸಾಧ್ಯವಾಗುತ್ತದೆ. ಆಲ್ಝೈಮರ್ಸ್ ಡಿಸೀಸ್ ಜರ್ನಲ್ನಲ್ಲಿ ಪ್ರಕಟವಾದ ಅಧ್ಯಯನವು ದಾಳಿಂಬೆ ರಸ ಅರಿವಿನ ದುರ್ಬಲತೆ ಹೊಂದಿರುವ ಜನರಲ್ಲಿ ಸ್ಮರಣಶಕ್ತಿಯನ್ನು ಸುಧಾರಿಸುತ್ತದೆ. ದಾಳಿಂಬೆ ಆಲ್ಝೈಮರ್ನಂತಹ ನೆನಪಿನ ಶಕ್ತಿ ಕ್ಷೀಣಗೊಳ್ಳುವ ಕಾಯಿಲೆಯ ಅಪಾಯ ಕಡಿಮೆ ಮಾಡುತ್ತದೆ.
ಓದುಗರಿಗೆ ವಿಶೇಷ ಸೂಚನೆ: ಈ ವರದಿಯಲ್ಲಿ ನಿಮಗೆ ನೀಡಲಾದ ಎಲ್ಲ ಆರೋಗ್ಯ ಸಂಬಂಧಿತ ಮಾಹಿತಿ ಹಾಗೂ ಸಲಹೆಗಳು ಸಾಮಾನ್ಯ ಮಾಹಿತಿಗಾಗಿ ಮಾತ್ರವೇ ನೀಡಲಾಗಿದೆ. ನಾವು ಈ ಮಾಹಿತಿಯನ್ನು ವೈಜ್ಞಾನಿಕ ಸಂಶೋಧನೆ, ಅಧ್ಯಯನಗಳು, ವೈದ್ಯಕೀಯ ಮತ್ತು ಆರೋಗ್ಯ ವೃತ್ತಿಪರ ಸಲಹೆಯ ಆಧಾರದ ಮೇಲೆ ಒದಗಿಸುತ್ತಿದ್ದೇವೆ. ನೀವು ಈ ಬಗ್ಗೆ ವಿವರವಾಗಿ ತಿಳಿದುಕೊಳ್ಳಬೇಕು. ಮತ್ತು ಈ ವಿಧಾನ ಅಥವಾ ಕಾರ್ಯವಿಧಾನವನ್ನು ಅಳವಡಿಸಿಕೊಳ್ಳಬೇಕು ಎಂದಾದಲ್ಲಿ ನುರಿತ ಪರಿಣತ ವೈದ್ಯರನ್ನು ಸಂಪರ್ಕಿಸುವುದು ಉತ್ತಮ.
ETV Bharat
ನಮ್ಮ ಸಮಗ್ರ ಸುದ್ದಿಗಳಿಗಾಗಿ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
WhatsApp Group:https://chat.whatsapp.com/KnDIfiBURQ9G5sLEJLqshk
Facebook page: https://www.facebook.com/samagrasudii
Sharechat: https://sharehat.com/profile/edu514826335?d=n
Twitter: https://twitter.com/SuddiSamagra
Threads: https://www.threads.net/@samagrasuddi.co.in
Instagram: https://www.instagram.com/samagrasuddi.co.in/
Telegram: https://t.me/+E1ubNzdguQ5jN2Y1