ಚಿತ್ರದುರ್ಗದ ವಿದ್ಯಾ ವಿಕಾಸ ವಿದ್ಯಾ ಸಂಸ್ಥೆಯಲ್ಲಿ ಅರ್ಥಪೂರ್ಣ 12ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆ.

ಚಿತ್ರದುರ್ಗ, ಜೂ. 21: ನಗರದ ಪ್ರತಿಷ್ಠಿತ ವಿದ್ಯಾ ವಿಕಾಸ ವಿದ್ಯಾ ಸಂಸ್ಥೆಯಲ್ಲಿ ಭಾನುವಾರ 12ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.

ಕಾರ್ಯಕ್ರಮವನ್ನು ಸಂಸ್ಥೆಯ ಕಾರ್ಯದರ್ಶಿ ಬಿ. ವಿಜಯ ಕುಮಾರ್ ಉದ್ಘಾಟಿಸಿ ಮಾತನಾಡಿ, ಯೋಗವನ್ನು ಕೇವಲ ಒಂದು ದಿನಕ್ಕೆ ಸೀಮಿತಗೊಳಿಸದೆ ವರ್ಷದ ಎಲ್ಲ ದಿನಗಳಲ್ಲೂ ಜೀವನದ ಭಾಗವಾಗಿಸಿಕೊಳ್ಳಬೇಕು ಎಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು. ಯೋಗದಿಂದ ದೈಹಿಕ ಹಾಗೂ ಮಾನಸಿಕ ಆರೋಗ್ಯ ಸುಧಾರಿಸುವುದರ ಜೊತೆಗೆ ಕಲಿಕೆಗೆ ಸಹ ಪೂರಕವಾಗುತ್ತದೆ ಎಂದು ಅವರು ತಿಳಿಸಿದರು.

ಯೋಗ ದಿನಾಚರಣೆಯ ಅಂಗವಾಗಿ ಯೋಗ ಶಿಕ್ಷಕರಾದ ಶ್ರೀ ಮುರಳಿ ಅವರು ವಿದ್ಯಾರ್ಥಿಗಳಿಗೆ ವಿವಿಧ ಯೋಗಾಸನಗಳ ತರಬೇತಿ ನೀಡಿದರು. ಕಳೆದ ಮೂರು ದಿನಗಳಿಂದ ವಿಶೇಷ ತರಬೇತಿ ನೀಡಿದ್ದ ಯೋಗ ತರಬೇತುದಾರ ಶ್ರೀ ಮುರಳಿ ಅವರನ್ನು ಸಂಸ್ಥೆಯ ವತಿಯಿಂದ ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ಸಂಸ್ಥೆಯ ಆಡಳಿತ ಮಂಡಳಿಯ ಸದಸ್ಯರು, ಮುಖ್ಯ ಶಿಕ್ಷಕರಾದ ತಿಪ್ಪೇಸ್ವಾಮಿ ಎನ್.ಜಿ., ಹೆಡ್ ಕೋ-ಆರ್ಡಿನೇಟರ್ ಕುಮಾರಿ ಕಾವ್ಯ ಯದುವಂಶ್, ಶಿಕ್ಷಕ ಹಾಗೂ ಶಿಕ್ಷಕೇತರ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು.

Follow the ಸಮಗ್ರ ಸುದ್ದಿ Telegram Channel: https://t.me/SamagraSuddi

ಸಮಗ್ರ ಸುದ್ದಿ channel on WhatsApp:

https://whatsapp.com/channel/0029VbDbOsBD8SE2H0L3d40j

Leave a Reply

Your email address will not be published. Required fields are marked *