ಯೋಗದಿಂದ ಔಷಧಮುಕ್ತ ಜೀವನ ಸಾಧ್ಯ – ಹಿರೇಗುಂಟನೂರಿನಲ್ಲಿ ಆಶಾ ಕಾರ್ಯಕರ್ತೆಯರಿಗೆ ವಿಶೇಷ ತರಬೇತಿ.

ವರದಿ ಮತ್ತು ಫೋಟೋ ಕೃಪೆ, ರವಿ ಕೆ.ಅಂಬೇಕರ್

ಚಿತ್ರದುರ್ಗ: ಪೆ.22

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಚಿತ್ರದುರ್ಗ ಸಹಕಾರದಲ್ಲಿ ತಾಲ್ಲೂಕಿನ ಹಿರೇಗುಂಟನೂರು ಸರ್ಕಾರಿ ಪ್ರಾಥಮಿಕ ಆರೋಗ್ಯ ಮತ್ತು ಕ್ಷೇಮ ಕೇಂದ್ರದಲ್ಲಿ ಶನಿವಾರ ಆಶಾ ಕಾರ್ಯಕರ್ತೆಯರಿಗಾಗಿ ವಿಶೇಷ ಯೋಗ ತರಬೇತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ತರಬೇತಿಯಲ್ಲಿ ಸಾಮಾನ್ಯ ಆರೋಗ್ಯ ಸಮಸ್ಯೆಗಳಾದ ಕುತ್ತಿಗೆ, ಭುಜ, ಸೊಂಟ, ಕೈಕಾಲು ನೋವುಗಳು ಸೇರಿದಂತೆ ಶೀತ ನೆಗಡಿ ಕೆಮ್ಮು ಇನ್ನಿತರ ಖಾಯಿಲೆಗಳಿಗೆ ಸಂಬಂಧಿಸಿದಂತೆ ಯೋಗ ತರಬೇತಿ ನೀಡಲಾಯಿತು ಯೋಗ ತರಬೇತುದಾರ ರವಿ ಕೆ.ಅಂಬೇಕರ್ ತರಬೇತಿ ನೀಡಿದರು.

ಈ ಸಂಧರ್ಭದಲ್ಲಿ ಮಾತನಾಡಿದ ಅವರು “ಯೋಗವು ಔಷಧ ಮುಕ್ತ ಆರೋಗ್ಯಪೂರ್ಣ ಜೀವನಕ್ಕೆ ಅತ್ಯಂತ ಅಗತ್ಯವಾದ ವಿಧಾನವಾಗಿದೆ, ಏಕೆಂದರೆ ಇದು ದೇಹ, ಮನಸ್ಸು ಮತ್ತು ಆತ್ಮದ ಸಮತೋಲನವನ್ನು ಸ್ಥಾಪಿಸುತ್ತದೆ.ಯೋಗಾಸನಗಳು ಮತ್ತು ಪ್ರಾಣಾಯಾಮಗಳು ದೇಹದ ಐದು ತತ್ವಗಳಾದ ಭೂಮಿ, ನೀರು, ಅಗ್ನಿ, ವಾಯು, ಆಕಾಶಗಳ ಸಮತೋಲನವನ್ನು ಉತ್ತೇಜಿಸಿ, ರೋಗನಿರೋಧಕ ಶಕ್ತಿಯನ್ನು ಬಲಪಡಿಸುತ್ತವೆ.ಇದು ರಕ್ತದೊತ್ತಡ, ಹೃದಯ ಸ್ಪಂದನ, ತೂಕ ನಿರ್ವಹಣೆಯಂತಹ ಸಮಸ್ಯೆಗಳನ್ನು ನಿಯಂತ್ರಿಸಿ, ದೀರ್ಘಕಾಲಿಕ ಔಷಧ ಅವಲಂಬನವನ್ನು ಕಡಿಮೆ ಮಾಡುತ್ತದೆ. ನಿಯಮಿತ ಅಭ್ಯಾಸದಿಂದ ಸಣ್ಣಪುಟ್ಟ ರೋಗಗಳೇ ಹೊರತುಪಡಿಸಿ ಹಲವು ಗಂಭೀರ ಸಮಸ್ಯೆಗಳಿಂದ ಮುಕ್ತಿ ಪಡೆಯಬಹುದು ಎಂದು ತಿಳಿಸಿದರು.

ಯೋಗ ತರಬೇತಿಯಲ್ಲಿ ಪಾಲ್ಗೊಂಡು ಆಶಾ ಕಾರ್ಯಕರ್ತೆಯರನ್ನು ಉದ್ದೇಶಿಸಿ ಮಾತನಾಡಿದ ಹಿರೆಗುಂಟನೂರು ಆರೋಗ್ಯ ನಿರೀಕ್ಷಣಾಧಿಕಾರಿ ಪುಟ್ಟುಸ್ವಾಮಿ ” ಒತ್ತಡದ ಜೀವನಶೈಲಿಯಲ್ಲಿ ಯೋಗ ಧ್ಯಾನ ಮತ್ತು ಶ್ವಾಸಕ್ರಿಯೆಗಳ ಮೂಲಕ ಮನಸ್ಸನ್ನು ಶಾಂತಗೊಳಿಸಿ, ಇದು ಉದ್ವೇಗ, ಭಯ, ದುಃಖಗಳನ್ನು ದೂರ ಮಾಡಿ, ಸ್ವಯಂ ಚೇತನಶಕ್ತಿಯನ್ನು ಪಡೆಯುತ್ತದೆ ಎಂದು ಹೇಳಿದರು.

ಯೋಗ ತರಬೇತಿ ಕಾರ್ಯಕ್ರಮದಲ್ಲಿ ಆರೋಗ್ಯ ನಿರೀಕ್ಷಣಾಧಿಕಾರಿ ಇಸ್ಮಾಯಿಲ್ ಏಕಾಂತ್ ಕುಮಾರ್, ಹಿರಿಯ ಆರೋಗ್ಯ ಸುರಕ್ಷಣಾಧಿಕಾರಿ ಶ್ರೀಮತಿ ಶಾಂತಮ್ಮ ಹಾಗೂ ಹಿರೇಗುಂಟನೂರು ಆರೋಗ್ಯ ಕೇಂದ್ರದ ಎಲ್ಲಾ ಆರೋಗ್ಯ ಕಾರ್ಯಕರ್ತರು ಹಾಗೂ ಆಶಾ ಕಾರ್ಯಕರ್ತೆಯರು ತರಬೇತಿಯಲ್ಲಿ ಪಾಲ್ಗೊಂಡಿದ್ದರು.

Leave a Reply

Your email address will not be published. Required fields are marked *